ಕಲುಷಿತ ನೀರು ಸೇವನೆಯೇ ಇವರ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ, ತಾಲೂಕು ಆರೋಗ್ಯಾಧಿಕಾರಿಗಳು ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿರುವುದನ್ನು ದೃಢಪಡಿಸಿಲ್ಲ. ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು, ಅದಕ್ಕೆ ಚರಂಡಿ ನೀರು ಸೇರಿ ನೀರು ಕಲುಷಿತಗೊಂಡಿದೆ. ಅದೇ ಕಲುಷಿತ ನೀರು ಕುಡಿದ ಜನರು ವಾಂತಿ- ಭೇದಿಯಿಂದ ಬಳಲುತ್ತಿದ್ದಾರೆ.
ಹರಪನಹಳ್ಳಿ(ಅ.22): ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೇರಿಯಲ್ಲಿ ಕಲುಷಿತ ನೀರು ಸೇರಿಸಿ ವಾಂತಿ-ಭೇದಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಭೋವಿ ಸುರೇಶ (32) ಎಂಬುವರು ಸೋಮವಾರ ಮೃತಪಟ್ಟಿದ್ದರೆ, ಭೋವಿ ಮಹಾಂತೇಶ (35) ಎಂಬುವರು ನಾಲ್ಕು ದಿನದ ಹಿಂದೆ ಮೃತಪಟ್ಟಿದ್ದಾರೆ. ಈ ಮಧ್ಯೆ ಗ್ರಾಮದಲ್ಲಿ ವಾಂತಿ-ಭೇದಿಯಿಂದ 15 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಲುಷಿತ ನೀರು ಸೇವನೆಯೇ ಇವರ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ, ತಾಲೂಕು ಆರೋಗ್ಯಾಧಿಕಾರಿಗಳು ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿರುವುದನ್ನು ದೃಢಪಡಿಸಿಲ್ಲ. ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು, ಅದಕ್ಕೆ ಚರಂಡಿ ನೀರು ಸೇರಿ ನೀರು ಕಲುಷಿತಗೊಂಡಿದೆ. ಅದೇ ಕಲುಷಿತ ನೀರು ಕುಡಿದ ಜನರು ವಾಂತಿ- ಭೇದಿಯಿಂದ ಬಳಲುತ್ತಿದ್ದಾರೆ.
undefined
ಬಳ್ಳಾರಿ: ಜೈಲಲ್ಲಿ ಬೆನ್ನು ನೋವಿನಿಂದ ದರ್ಶನ್ ಒದ್ದಾಟ, ದಾಸನ ನರಕಯಾತನೆಯ ವಿಡಿಯೋ!
11 ಮಂದಿ ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಪೃಥ್ವಿ ಹಾಗೂ ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಷಣ್ಮುಖಪ್ಪ ಅವರು ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ, ಶುದ್ದ ಕುಡಿಯುವ ನೀರಿನ ಘಟಕವಿಲ್ಲ. ಕೂಡಲೇ ಶುದ್ದ ನೀರು ಪೂರೈಕೆ ಮಾಡಬೇಕು. ಮೃತ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.