ತುಮಕೂರು: ಶಿರಾ ಬಳಿ ಭೀಕರ ರಸ್ತೆ ಅಪಘಾತ, ತಂದೆ-ಮಗ ಸ್ಥಳದಲ್ಲೇ ಸಾವು, ತಾಯಿ ಗಂಭೀರ

Published : Nov 20, 2024, 04:58 PM ISTUpdated : Nov 20, 2024, 05:04 PM IST
ತುಮಕೂರು: ಶಿರಾ ಬಳಿ ಭೀಕರ ರಸ್ತೆ ಅಪಘಾತ, ತಂದೆ-ಮಗ ಸ್ಥಳದಲ್ಲೇ ಸಾವು, ತಾಯಿ ಗಂಭೀರ

ಸಾರಾಂಶ

ಮುಂಡರಿಗಿಯಿಂದ ಬೆಂಗಳೂರು ಕಡೆಗೆ ಕ್ವಿಡ್ ಕಾರಿನಲ್ಲಿ ಬರುವ ವೇಳೆ ಅಪಘಾತ ಸಂಭವಿಸಿದೆ. ಮುಂದೆ ನಿಂತಿದ್ದ ಸಿಮೆಂಟ್ ಬಲ್ಕರ್‌ಗೆ ಕ್ವಿಡ್ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 

ತುಮಕೂರು(ನ.20):  ಭೀಕರ ರಸ್ತೆ ಅಪಘಾತದಲ್ಲಿ ತಂದೆ‌, ಮಗ ಸ್ಥಳದಲ್ಲೇ ಸಾವನ್ನಪ್ಪಿ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ಇಂದು(ಬುಧವಾರ) ನಡೆದಿದೆ. ಬೆಳಗ್ಗೆ 6.30ರ ಸುಮಾರಿನಲ್ಲಿ ಘಟನೆ ನಡೆದಿದೆ. 

ಗುರುರಾಜು(35), ಪುತ್ರ ರಿಷಾಂಕ್(2) ಮೃತ ದುರ್ದೈವಿಗಳು. ಪತ್ನಿ ಹರ್ಷಿತಾ(28) ಸ್ಥಿತಿ ಗಂಭೀರವಾಗಿದ್ದು ಶಿರಾ ಸಾರ್ವಜನಿಕ ಆಸ್ಪಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. 

ಮಂಗಳೂರು: ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

ಮುಂಡರಿಗಿಯಿಂದ ಬೆಂಗಳೂರು ಕಡೆಗೆ ಕ್ವಿಡ್ ಕಾರಿನಲ್ಲಿ ಬರುವ ವೇಳೆ ಅಪಘಾತ ಸಂಭವಿಸಿದೆ. ಮುಂದೆ ನಿಂತಿದ್ದ ಸಿಮೆಂಟ್ ಬಲ್ಕರ್‌ಗೆ ಕ್ವಿಡ್ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

PREV
Read more Articles on
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು