ಬೆಂಗಳೂರಿನಲ್ಲಿ ನಡೆದ ಕಂಬಳ ನೋಡಿಕೊಂಡು ಮಂಗಳೂರಿಗೆ ವಾಪಸ್ಸು ತೆರುಳುವಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ತುಮಕೂರು(ನ.26): ಬೋರ್‌ವೆಲ್ ಲಾರಿ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಚಿಗಣಿ ಪಾಳ್ಯ ಬಳಿ ನಡೆದಿದೆ.
ಕಿಶಾನ್ ಶೆಟ್ಟಿ(20) ಹಾಗೂ ಫೀಲೀಪ್ ನೇರಿ(32) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಿಶಾನ್ ಶೆಟ್ಟಿ ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿಯಾfಗಿದ್ದು, ಫೀಲೀಪ್ ನೇರಿ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟದ ಗ್ರಾಮದ ವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ: ಗೌರಿಬಿದನೂರಿನ ಕಲ್ಲೂಡಿ ಬಳಿ ಭೀಕರ ಅಪಘಾತ, 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಬೆಂಗಳೂರಿನಲ್ಲಿ ನಡೆದ ಕಂಬಳ ನೋಡಿಕೊಂಡು ಮಂಗಳೂರಿಗೆ ವಾಪಸ್ಸು ತೆರುಳುವಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ತೀವ್ರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ಹಾಗೂ ಲಾರಿ ಚಾಲಕನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.