ತುಮಕೂರು: ಶಿರಾ ಬಳಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ, ನಿವೃತ್ತಿಯ ಬಳಿಕ ಸ್ವಗ್ರಾಮಕ್ಕೆ ತೆರಳುತ್ತಿದ್ದವರು ಮಸಣಕ್ಕೆ..!

Published : Sep 02, 2023, 09:33 AM IST
ತುಮಕೂರು: ಶಿರಾ ಬಳಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ, ನಿವೃತ್ತಿಯ ಬಳಿಕ ಸ್ವಗ್ರಾಮಕ್ಕೆ ತೆರಳುತ್ತಿದ್ದವರು ಮಸಣಕ್ಕೆ..!

ಸಾರಾಂಶ

ಚಿಕ್ಕನಹಳ್ಳಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರೀ ವಾಹನ ದಟ್ಟಣೆ ಇದ್ದು ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ನಂತರ ಹಿಂಬದಿಯಿಂದ ಟಾಟಾ ಏಸ್‌ಗೆ ಖಾಸಗಿ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. 

ತುಮಕೂರು(ಸೆ.02):  ಟಾಟಾ ಏಸ್, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಟಾಟಾ ಏಸ್‌ನಲ್ಲಿದ್ದ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಇಂದು(ಶನಿವಾರ) ಬೆಳಗಿನ ಜಾವ ನಡೆದಿದೆ. 

ಕಲ್ಬುರ್ಗಿ ಜಿಲ್ಲೆ ಅರಳಗುಡಿ ಗ್ರಾಮದ ಭೀಮಾಬಾಯಿ (70), ಮಹಾಂತಪ್ಪ (50) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಬೆಂಗಳೂರಿನಲ್ಲಿ ವಾಸವಿದ್ದ ಕುಟುಂಬ, ನಿವೃತ್ತಿಯ ಬಳಿಕ ಸ್ವಗ್ರಾಮಕ್ಕೆ ಮನೆಯ ಸಾಮಾನು ಸಾಗಿಸುವ ವೇಳೆ ಅಪಘಾತ ಸಂಭವಿಸಿದೆ. 

ವಿಜಯನಗರ: ಕೂಡ್ಲಿಗಿ ಬಳಿ ಭೀಕರ ಅಪಘಾತ, ಮೂವರು ಹುಲಿಗೆಮ್ಮ ಭಕ್ತರ ದುರ್ಮರಣ

ಚಿಕ್ಕನಹಳ್ಳಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರೀ ವಾಹನ ದಟ್ಟಣೆ ಇದ್ದು ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ನಂತರ ಹಿಂಬದಿಯಿಂದ ಟಾಟಾ ಏಸ್‌ಗೆ ಖಾಸಗಿ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. 

ಗಾಯಾಳುಗಳಿಗೆ ಕಳ್ಳಂಬೆಳ್ಳ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತದೆ. ಅಪಘಾತವಾದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲ ಸಮಯ ಸಂಚಾರ ವ್ಯತ್ಯಯ ಉಂಟಾಗಿತ್ತು. ಬಳಿಕ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ ಪೊಲೀಸರು. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV
Read more Articles on
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ