ಬೆಂಗಳೂರಿನ ನೆರೆಹೊರೆ ಜಿಲ್ಲೆಯಾದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಕಳೆದೊಂದು ವಾರದಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾಗಿದ್ದಾರೆ.
ರಾಮನಗರ (ಜೂ.04): ಬೆಂಗಳೂರಿನ ನೆರೆಹೊರೆ ಜಿಲ್ಲೆಯಾದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಕಳೆದೊಂದು ವಾರದಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾಗಿದ್ದಾರೆ. ಈ ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ರಾಜ್ಯ ಅರಣ್ಯ ಸಚಿಚ ಈಶ್ವರ್ ಖಂಡ್ರೆ ಅವರು ಮೃತ ರೈತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿ ಸಾಂತ್ವನ ಹೇಳಿದ್ದಾರೆ.
ಹೌದು, ರಾಮನಗರ ಜಿಲ್ಲೆಯಲ್ಲಿ ಜಮೀನಿನ ಕೆಲಸಕ್ಕೆ ಹೋದ ರೈತರ ಮೇಲೆ ಆನೆಗಳು ದಾಳಿ ಮಾಡುವ ಪ್ರಕರಣ ಹೆಚ್ಚಾಗುತ್ತಿವೆ. ದೈತ್ಯ ಗಾತ್ರದ ಆನೆಗಳು ರೈತರ ಮೇಲೆ ಏಕಾಏಕಿ ದಾಳಿ ಮಾಡಿದಾಗ ನಿಶ್ಯಸ್ತ್ರವಾಗಿ ಕೆಲಸ ಮಾಡುವ ರೈತರು ಆನೆಯ ದಾಳಿಗೆ ತೃಣಮಾತ್ರರಂತೆ ಕಾಲಿನಡಿ ಸಿಕ್ಕು ದಾರುಣವಾಗಿ ಸಾವನ್ನಪ್ಪುತ್ತಿದ್ದಾರೆ. ಈ ಮೂಲಕ ಕುಟುಂಬಕ್ಕೆ ಆಸರೆಯಾಗಿದ್ದ ರೈತರು ಹೊಲಕ್ಕೆ ಹೋದವರು ಮನೆಗೆ ಮರಳಿ ಬರುವವರೆಗೂ ಕುಟುಂಬ ಸದಸ್ಯರೆಲ್ಲರೂ ಕುಟುಂಬದೊಡೆಯನ ಜೀವಕ್ಕೆ ಯಾವುದೇ ಅಪಾಯ ಬಾರದಿರಲಿ ಎಂದು ಪ್ರಾರ್ಥನೆ ಮಾಡುವಂತಾಗಿದೆ.
undefined
ಬೆಂಗಳೂರು - ಹಾಸನ ಹೆದ್ದಾರಿಯಲ್ಲಿ ಲಾರಿ ಹಿಂಭಾಗಕ್ಕೆ ಗುದ್ದಿದ ಕಾರು: ನೆಲಮಂಗಲ ಯುವಕರು ಸಾವು
ರಾಮನಗರ ಜಿಲ್ಲೆಯಲ್ಲಿ ಕಳೆದ ಎರಡು ವಾರದಲ್ಲೇ ಕಾಡಾನೆ ದಾಳಿಗೆ ಇಬ್ಬರು ರೈತರು ಸಾವನ್ನಪ್ಪಿದ್ದಾರೆ. ಇನ್ನು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದ ಮೃತರ ಕುಟುಂಬಸ್ಥರ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಸಾಂತ್ನ ಹೇಳಿದ್ದಾರೆ. ಕಳೆದ ಶುಕ್ರವಾರ ಸಾವನ್ನಪ್ಪಿದ್ದ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಮುತ್ತುರಾಯನದೊಡ್ಡಿ ಗ್ರಾಮ ವೀರಭದ್ರಯ್ಯ ಮನೆಗೆ ಭೇಟಿ ನೀಡಿದ ಅರಣ್ಯ ಸಚಿವರು ಸಾಂತ್ವನ ಹೇಳಿದರು. ಈ ವೇಳೆ ಮೃತ ರೈತನ ಕುಟುಂಬಸ್ಥರಿಗೆ 15 ಲಕ್ಷ ರೂ. ಮೊತ್ತದ ಚೆಕ್ ವಿತರಣೆ ಮಾಡಿದರು. ಅರಣ್ಯ ಸಚಿವರ ಜೊತೆಗೆ ಸಂಸದ ಡಿ.ಕೆ ಸುರೇಶ್ ಭಾಗಿಯಾಗಿದ್ದರು.
5 ವರ್ಷಗಳವರೆಗೆ ಮಾಸಿಕ 4 ಸಾವಿರ ರೂ. ಪಾವತಿ: ಮೃತ ವೀರಭದ್ರ (45) ಮಾವಿನ ತೋಟ ಕಾವಲಿದ್ದನು. ಕಾವಲು ಕಾಯುವ ವೇಳೆ ಏಕಾಏಕಿ ಕಾಡಾನೆ ದಾಳಿಮಾಡಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಮೃತನ ಪತ್ನಿಗೆ ಸರ್ಕಾರದಿಂದ 15 ಲಕ್ಷ ರೂ. ಮೊತ್ತದ ಚೆಕ್ ವಿತರಣೆ ಮಾಡಲಾಗಿದ್ದು, ಮುಂದಿನ 5 ವರ್ಷಗಳವರೆಗೆ ಕುಟುಂಬ ನಿರ್ವಹಣೆಗಾಗಿ ತಲಾ 4 ಸಾವಿರ ರೂ. ಹಣ ಮೃತನ ಪತ್ನಿಗೆ ಬ್ಯಾಂಕ್ ಖಾತೆಗೆ ಜಮಾ ಆಗುವಂತೆ ವ್ಯವಸ್ಥೆ ಮಾಡಲಾಗಿದೆ. ಈ ಬಗಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಇನ್ನು ಕಳೆದವಾರ ಚನ್ನಪಟ್ಟಣ ತಾಲ್ಲೂಕಿನ ವಿರೂಪಾಕ್ಷಿಪುರ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಾಗ ಆನೆ ದಾಳಿ ಘಟನೆಯಿಂದ ರೈತನೊಬ್ಬ ಸಾವನ್ನಪ್ಪಿದ್ದನು.
ವೈಜ್ಞಾನಿಕ ಬೇಲಿ ನಿರ್ಮಾಣಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ರಾಮನಗರ (ಜೂ.04): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕನ್ನು ಒತ್ತಾಯ ಮಾಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ಶ್ರೀ ವೀರಭದ್ರಯ್ಯ ಅವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಅವರು, ಕಾಡಂಚಿನಲ್ಲಿ ರೈತರು ಆತಂಕ, ಭಯದಿಂದ ಬದುಕುವಂತಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಬೇಲಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಕರೆಂಟ್ ಹೊಡೆದು ಕಂಬದಲ್ಲೇ ಒದ್ದಾಡಿ ಪ್ರಾಣಬಿಟ್ಟ ಜೆಸ್ಕಾಂ ಲೈನ್‌ಮ್ಯಾನ್!
ಆನೆ ತಡೆಗೆ ಬೇಲಿ ನಿರ್ಮಾಣ ಕಾರ್ಯ ವಿಳಂಬವಾಗದಿರಲಿ: ಅನೆ ದಾಳಿಯಿಂದ ರೈತ ವೀರಭದ್ರಯ್ಯ ಅವರು ಅಸುನೀಗಿದ ವಾರ್ತೆ ಕೇಳಿ ಬಹಳ ದುಃಖ ಉಂಟಾಯಿತು. ಮೃತ ರೈತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಆ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಅವರು ನೊಂದ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅರಣ್ಯ ಸಂರಕ್ಷಣೆ ಜತೆಗೆ ಕಾಡಿನ ಅಕ್ಕಪಕ್ಕ ಬೇಸಾಯ ಮಾಡುವ ರೈತರ ಹಿತವೂ ಮುಖ್ಯ. ರೈತಾಪಿ ಜನರ ಜೀವ ಅಮೂಲ್ಯ. ಈ ಕಾರಣಕ್ಕಾಗಿ ಅರಣ್ಯ ವಲಯದಲ್ಲಿ ವೈಜ್ಞಾನಿಕ ಬೇಲಿ ನಿರ್ಮಾಣ ಮಾಡಬೇಕು ಎಂದು ನಾನು ಅನೇಕ ಸಲ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಈ ಬಗ್ಗೆ ಇನ್ನಷ್ಟು ವಿಳಂಬ ಮಾಡಬಾರದು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದರು.