ಶಿವಮೊಗ್ಗ(ಜು.30) : ಸಾಗರದ ಕಾಸ್ಪಾಡಿ ಬಳಿ ಭೀಕರ ಅಪಘಾತವಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಸಾಗರದಿಂದ ಶಿವಮೊಗ್ಗ ಹೋಗುತ್ತಿದ್ದ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಾಗರ ಬಳಿಯ ಕಾಸ್ಪಾಡಿ ಕೆರೆಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಎದುರಿನಿಂದ ಬಂದ ಬೈಕ್ ತಪ್ಪಿಸಲು ಹೋಗಿ ಅಪಘಾತವಾಗಿದೆ.
ಕೆಎಸ್ಸಾರ್ಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆ
ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ. ಬೈಕ್ ಸವಾರರಿಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಗರ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.