ರಾಯಚೂರು: ಬೈಕ್‌ಗೆ ಲಾರಿ ಡಿಕ್ಕಿ, ತೆಲಂಗಾಣದ ಇಬ್ಬರ ದುರ್ಮರಣ

Published : Oct 13, 2024, 12:32 PM IST
ರಾಯಚೂರು: ಬೈಕ್‌ಗೆ ಲಾರಿ ಡಿಕ್ಕಿ, ತೆಲಂಗಾಣದ ಇಬ್ಬರ ದುರ್ಮರಣ

ಸಾರಾಂಶ

ರಾಯಚೂರು - ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಕೆಲಸಕ್ಕೆ ಹೋಗುವ ವೇಳೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.   

ರಾಯಚೂರು(ಅ.13): ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ವೈಟಿಪಿಎಸ್ ವಿದ್ಯುತ್ ಕೇಂದ್ರದ ಬಳಿ ಇಂದು(ಭಾನುವಾರ) ನಡೆದಿದೆ. ಜನಾರ್ದನ (27) ಮೃತ ಬೈಕ್ ಸವಾರ, ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.

ರಾಯಚೂರು - ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಕೆಲಸಕ್ಕೆ ಹೋಗುವ ವೇಳೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.  ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ತಲೆಗೆ ಬಲವಾದ ಪೆಟ್ಟು ಬಿದ್ದು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ರಾಯಚೂರು: ತಾತನಿಗೆ ಬನ್ನಿ ಕೊಟ್ಟು ವಾಪಸ್‌ ಬರೋ ವೇಳೆ ಸ್ಕೂಟರ್‌ಗೆ ಕಾರ್ ಡಿಕ್ಕಿ, ಓರ್ವ ಯುವತಿ ಸಾ 

ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ತೆಲಂಗಾಣ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV
Read more Articles on
click me!

Recommended Stories

ಭ್ರಷ್ಟ ಅಧಿಕಾರಿಗೆ ಬಿಗ್ ಶಾಕ್; 4 ವರ್ಷ ಜೈಲು ಶಿಕ್ಷೆ, 51 ಲಕ್ಷಕ್ಕೂ ಅಧಿಕ ಅಕ್ರಮ ಆಸ್ತಿ ಮುಟ್ಟುಗೋಲು!
Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ