ಕೊಪ್ಪಳ: ಕುಷ್ಟಗಿ ಬಳಿ ಬೈಕ್‌ಗೆ ಗುದ್ದಿದ ಲಾರಿ, ಸ್ಥಳದಲ್ಲೇ ಇಬ್ಬರ ದುರ್ಮರಣ

Published : Sep 01, 2024, 05:02 PM IST
ಕೊಪ್ಪಳ: ಕುಷ್ಟಗಿ ಬಳಿ ಬೈಕ್‌ಗೆ ಗುದ್ದಿದ ಲಾರಿ, ಸ್ಥಳದಲ್ಲೇ ಇಬ್ಬರ ದುರ್ಮರಣ

ಸಾರಾಂಶ

ಬೈಕ್‌ಗೆ ಲಾರಿಯೊಂದು ಗುದ್ದಿದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. 

ಕೊಪ್ಪಳ(ಸೆ.01): ಬೈಕ್‌ಗೆ ಲಾರಿಯೊಂದು ಗುದ್ದಿದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇಂದು(ಭಾನುವಾರ) ನಡೆದಿದೆ. 

ಕೊಪ್ಪಳ ತಾಲೂಕಿನ ವಣಗೇರಿ ಗ್ರಾಮದ ಪರಶುರಾಮ (40) ಹಾಗೂ ಹನಂಮತ (35) ಮೃತ ದುರ್ದೈವಿಗಳು. ಬೈಕ್ ಸವಾರರು ಇಳಕಲ್ ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಚಿಕ್ಕಬಳ್ಳಾಪುರ: ಚಿಂತಾಮಣಿ ಬಳಿ ಟಿಟಿ ವಾಹನ, ಕಾರಿನ ಮಧ್ಯೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ದುರ್ಮರಣ

ಘಟನೆ ಬಳಿಕ ಸ್ಥಳದಿಂದ ಲಾರಿ ಸಮೇತ ಚಾಲಕ ಪಾರಾರಿಯಾಗಿದ್ದಾನೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರ ಭೇಟಿ ನೀಡಿ ಪರಿಶಶೀಲನೆ ನಡೆಸಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV
Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?