ಕೊಪ್ಪಳ: ಹುಲಿಗೆಮ್ಮನ ದರ್ಶನ ಪಡೆದು ವಾಪಸ್‌ ಬರೋ ವೇಳೆ ಬೈಕ್‌ಗೆ ಬಸ್‌ ಡಿಕ್ಕಿ, ಇಬ್ಬರು ಭಕ್ತರ ದುರ್ಮರಣ

By Girish Goudar  |  First Published Aug 1, 2023, 10:13 PM IST

ಮೃತರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಡ್ರಕಲ್ ಗ್ರಾಮದವರು ಎಂದು ತಿಳಿದು ಬಂದಿದೆ. ಮೃತ ಬೈಕ್‌ ಸವಾರರು ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿಕೊಂಡು ಮರಳಿ ಗ್ರಾಮಕ್ಕೆ ತರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 

ಕೊಪ್ಪಳ(ಆ.01):  ಬೈಕ್‌ಗೆ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಉಪಲಾಪೂರ ಗ್ರಾಮದ ಬಳಿ ಇಂದು(ಮಂಗಳವಾರ) ನಡೆದಿದೆ. ಮೃತ ಬೈಕ್ ಸವಾರರನ್ನ ಶರಣಪ್ಪ, ಕಾಳಪ್ಪ ಎಂದು ಗುರುತಿಸಲಾಗಿದೆ. 

ಮೃತರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಡ್ರಕಲ್ ಗ್ರಾಮದವರು ಎಂದು ತಿಳಿದು ಬಂದಿದೆ. ಮೃತ ಬೈಕ್‌ ಸವಾರರು ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿಕೊಂಡು ಮರಳಿ ಗ್ರಾಮಕ್ಕೆ ತರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 

Tap to resize

Latest Videos

undefined

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ- ವಿದ್ಯುತ್‌ ಸ್ಪರ್ಶದಿಂದ ಇಬ್ಬರು ಸಾವು, ನಾಲ್ವರಿಗೆ ಗಾಯ

ಎದುರಿಗೆ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೊಪ್ಪಳ‌ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

click me!