ಚಿಕ್ಕಮಗಳೂರಲ್ಲಿ ಭೀಕರ ಅಪಘಾತ: ಯುಗಾದಿ ಹಬ್ಬದಂದೇ ಇಬ್ಬರ ಬಲಿ

Published : Mar 22, 2023, 11:30 PM IST
ಚಿಕ್ಕಮಗಳೂರಲ್ಲಿ ಭೀಕರ ಅಪಘಾತ: ಯುಗಾದಿ ಹಬ್ಬದಂದೇ ಇಬ್ಬರ ಬಲಿ

ಸಾರಾಂಶ

ಬಸ್ ಬೈಕ್ ಗೆ ಡಿಕ್ಕಿ ಹೊಡೆದ ತಕ್ಷಣ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳೀಯರು ಚಾಲಕನ ‌ವಿರುದ್ಧ ಆಕ್ರೋಶವನ್ನು ಹೊರಹಾಕಿದರು. 

ಚಿಕ್ಕಮಗಳೂರು(ಮಾ.22): ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿನ ಘಟನೆ ಚಿಕ್ಕಮಗಳೂರಿನ ಎಪಿಎಂಸಿ ಬಳಿ ನಡೆದಿದೆ. ಇಂದು(ಬುಧವಾರ) ಸಂಜೆ 4ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. 

ಚಿಕ್ಕಮಗಳೂರಿನಿಂದ ಕಡೂರು ಕಡೆ ತೆರಳುತ್ತಿದ್ದ ಬಸ್ ನಗರದ ಎಪಿಎಂಸಿ ಬಳಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸಾವನ್ನಪ್ಪಿದವರನ್ನು ಜಾವಗಲ್ ಮೂಲದ ಶ್ರೀಧರ್ (24) ಚಿಕ್ಕಮಗಳೂರಿನ ದಂಟರಮಕ್ಕಿ ಸಮೀಪದ ದಯಾನಂದ್ (30) ಎಂದು ಗುರುತಿಸಲಾಗಿದೆ.

ನೈಟ್‌ ಶಿಫ್ಟ್ ಮಾಡುತ್ತಿದ್ದ ಪೊಲೀಸ್‌ಗೆ ಗುದ್ದಿದ ಅಪರಿಚಿತ ವಾಹನ: ಸ್ಥಳದಲ್ಲಿಯೇ ಪೇದೆ ಸಾವು

ಬಸ್ ಬೈಕ್ ಗೆ ಡಿಕ್ಕಿ ಹೊಡೆದ ತಕ್ಷಣ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳೀಯರು ಚಾಲಕನ ‌ವಿರುದ್ಧ ಆಕ್ರೋಶವನ್ನು ಹೊರಹಾಕಿದರು. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!