ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಬಳಿ ಖಾಸಗಿ ಬಸ್‌ ಪಲ್ಟಿ, ಸ್ಥಳದಲ್ಲೇ ಇಬ್ಬರ ದುರ್ಮರಣ

By Girish Goudar  |  First Published Dec 7, 2023, 1:05 PM IST

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬೈರೇಗೊಲ್ಲಹಳ್ಳಿಯಲ್ಲಿ ಇಂದು ನಡೆದ ಘಟನೆ


ಚಿಕ್ಕಬಳ್ಳಾಪುರ(ಡಿ.07): ಖಾಸಗಿ ಬಸ್‌ವೊಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬೈರೇಗೊಲ್ಲಹಳ್ಳಿಯಲ್ಲಿ ಇಂದು(ಗುರುವಾರ) ನಡೆದಿದೆ. 

ಘಟನಾ ಸ್ಥಳಕ್ಕೆ ಪಾತಪಾಳ್ಯ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. 

Tap to resize

Latest Videos

ವಿಜಯಪುರ: ವಾಹನ ಪಲ್ಟಿ, ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿ ಸಾವು

ಅಡ್ಡಾದಿಡ್ಡಿ ಬಂದ ಲಾರಿಯಿಂದ ಸರಣಿ ಅಪಘಾತ

ಮಂಗಳೂರು: ಲಾರಿಯೊಂದು ಅಡ್ಡಾದಿಡ್ಡಿ ಬಂದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಳಿ ಇಂದು ನಡೆದಿದೆ.  ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಮೇಲೆ ಹೋಗಿ ಬೈಕ್, ಆಟೋಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಫುಟ್ ಪಾತ್ ನಲ್ಲಿದ್ದವರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಸುರತ್ಕಲ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ. 

click me!