Almatti Road Accident: ಬಸ್‌, ಬೈಕ್‌ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

Kannadaprabha News   | Asianet News
Published : Feb 18, 2022, 08:08 AM IST
Almatti Road Accident: ಬಸ್‌, ಬೈಕ್‌ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಸಾರಾಂಶ

*   ಆಲಮಟ್ಟಿ-ನಿಡಗುಂದಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ನಡೆದ ಘಟನೆ *  ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ *  ಈ ಕುರಿತು ನಿಡಗುಂದಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು 

ಆಲಮಟ್ಟಿ(ಫೆ.18):  ಬೈಕ್‌ ಹಾಗೂ ಖಾಸಗಿ ಬಸ್‌ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ(Accident) ಇಬ್ಬರು ಸಾವನ್ನಪ್ಪಿದ ಘಟನೆ ಆಲಮಟ್ಟಿ-ನಿಡಗುಂದಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ-13ರ ಗಂಗಾ ಇಂಟರ್‌ನ್ಯಾಷನಲ್‌ ಪಬ್ಲಿಕ್‌ ಸ್ಕೂಲ್‌ ಬಳಿ ಬುಧವಾರ ನಡೆದಿದೆ. ಮೃತರಿಬ್ಬರು ನಿಡಗುಂದಿ ತಾಲೂಕಿನ ಅಬ್ಬಿಹಾಳ ಗ್ರಾಮದ ಸುನೀಲ ಮಲ್ಲಪ್ಪ ಮಂಕಣಿ (24) ಹಾಗೂ ಯಲ್ಲನಗೌಡ ಬಸನಗೌಡ ಮಂಕಣಿ (23) ಎಂದು ಗುರುತಿಸಲಾಗಿದೆ. 

ಬೆಂಗಳೂರಿಗೆ(Bengaluru) ತೆರಳುತ್ತಿದ್ದ ಖಾಸಗಿ ಬಸ್‌(Private Bus) ಹಾಗೂ ಬೈಕ್‌(Bike) ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಘಟನೆ ಸಂಭವಿಸಿದೆ. ಆಲಮಟ್ಟಿಯಿಂದ(Almatti) ಮರಳಿ ತಮ್ಮೂರು ಅಬ್ಬಿಹಾಳಕ್ಕೆ ತೆರಳುತ್ತಿದ್ದ ಬೈಕ್‌, ವಿಜಯಪುರದಿಂದ(Vijayapura) ಬೆಂಗಳೂರಗೆ ಹೊರಟಿದ್ದ ಖಾಸಗಿ ಬಸ್‌ ಮಧ್ಯೆ ಈ ಅಪಘಾತ ಸಂಭವಿಸಿದೆ. ಈ ಕುರಿತು ನಿಡಗುಂದಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಅರುಣಕುಮಾರ ಕೋಳೂರ, ಸಿಪಿಐ ಸೋಮಶೇಖರ್‌ ಜುಟ್ಟಲ, ಪಿಎಸ್‌ಐ ಚಂದ್ರಶೇಖರ ಹೆರಕಲ್ಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Nice Road Accident:   ಅಪಘಾತದಲ್ಲಿ ಇಬ್ಬರ ಸಾವು  ಕಾರು ಚಾಲಕನಿಗೆ ಜೈಲು ಶಿಕ್ಷೆ

ಲಾರಿ-ಕಾರು ಡಿಕ್ಕಿಯಾಗಿ ನಗರದ ನಾಲ್ವರು ವಿದ್ಯಾರ್ಥಿಗಳು ಸಾವು

ಹೊಸಕೋಟೆ(Hosakote): ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಕೋಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಅಟ್ಟೂರು ಗೇಟ್‌ ಬಳಿ ಫೆ.16 ರ ನಸುಕಿನ 2 ಗಂಟೆ ಸುಮಾರಿಗೆ ನಡೆದಿತ್ತು. 

ಬೆಂಗಳೂರಿನ ಗಾರ್ಡನ್‌ ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳಾದ ವೆಂಕಟ್‌, ಸಿರಿಲ್‌, ವೈಷ್ಣವಿ ಹಾಗೂ ಭರತ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅಂಕಿರೆಡ್ಡಿ ಹಾಗೂ ಮುತ್ತುಕೃಷ್ಣ ತೀವ್ರ ಗಾಯಗೊಂಡಿದ್ದರು.

ವಿದ್ಯಾರ್ಥಿಗಳು ಕೋಲಾರದ ನರಸಾಪುರ ಬಳಿ ಇರುವ ಕಾಫಿ ಡೇಗೆ ಆಗಮಿಸಿದ್ದರು. ಬೆಂಗಳೂರಿನತ್ತ ವಾಪಸ್‌ ತೆರಳುವ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಕೋಲಾರ-ಬೆಂಗಳೂರು 75ರ ಅಟ್ಟೂರು ಗೇಟ್‌ ಬಳಿ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆ ದಾಟಿ ಎದುರುಗಡೆ ಬರುತ್ತಿದ್ದ ಲಾರಿಗೆ ರಭಸವಾಗಿ ಡಿಕ್ಕಿ ಹೊಡೆದಿತ್ತು.  ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಸಿಲುಕಿದ್ದ ಮೃತ ದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡುವಂತಾಗಿತ್ತು.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಲಕ್ಷ್ಮೇ ಗಣೇಶ್‌, ವೃತ್ತ ನಿರೀಕ್ಷಕ ಮಂಜುನಾಥ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಸಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಮೂವರ ಸಾವು

ಹಿರೇಕೆರೂರು:  ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಶಿಕ್ಷಕ ಮತ್ತು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಫೆ.14 ರಂದು ನಡೆದಿತ್ತು.  ರಾಣಿಬೆನ್ನೂರು ನಗರದ ನಿವಾಸಿ, ಶಿಕ್ಷಕ ಜಯಪ್ರಕಾಶ (48) ಹಾಗೂ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಶಾಲಿನಿ (8) ಮತ್ತು ಯಶೋಧಾ (10) ಮೃತ ದುರ್ದೈವಿಗಳು.

ಮಕ್ಕಳು ಆಟವಾಡುತ್ತಿದ್ದ ವೇಳೆ ಜವರಾಯನಂತೆ ಬಂದ ಕಾರು, ಮೂವರ ದುರ್ಮರಣ

ಶಿಕ್ಷಕ ಜಯಪ್ರಕಾಶ್‌ ಕಾರು ಚಲಾಯಿಸಿಕೊಂಡು ರಾಣಿಬೆನ್ನೂರಿಗೆ ತೆರಳುತ್ತಿದ್ದರು. ಮಕ್ಕಳಾದ ಶಾಲಿನಿ ಮತ್ತು ಯಶೋದಾ ಇಬ್ಬರೂ ಸುತ್ತಕೋಟಿ ಗ್ರಾಮದ ರಸ್ತೆ ಬದಿಯ ತಮ್ಮ ಜಮೀನಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಂದ ಕಾರು ಮಕ್ಕಳ ಮೇಲೆ ಹರಿದು, ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ಶಿಕ್ಷಕರೂ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. 

ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ನರಳಾಡುತ್ತಿದ್ದ ಮಕ್ಕಳನ್ನು ಗ್ರಾಮಸ್ಥರು ತಕ್ಷಣ ಹಿರೇಕೆರೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹಂಸಭಾವಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 
 

PREV
Read more Articles on
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು