* ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಚಳಮಟ್ಟಿ ಕ್ರಾಸ್ ಬಳಿ ನಡೆದ ಘಟನೆ
* ವಿವಾಹ ನಿಗದಿಯಾಗಿದ್ದ ಪೊಲೀಸ್ ಸೇರಿ ಇಬ್ಬರು ಸಾವು
* ಘಟನೆಯಿಂದ ಆಘಾತಗೊಂಡ ಪೊಲೀಸರು
ಹುಬ್ಬಳ್ಳಿ(ಏ.06): ಗಾಳಿ ಮಳೆಗೆ ರಸ್ತೆ ಮೇಲೆ ಉರುಳಿ ಬಿದ್ದಿದ್ದ ಮರ ತೆರವುಗೊಳಿಸುವ ವೇಳೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆ ಸೇರಿದಂತೆ ಮೂರು ಜನ ದಾರುಣವಾಗಿ ಸಾವನ್ನಪ್ಪಿದ ಘಟನೆ ಕಲಘಟಗಿ ತಾಲೂಕಿನ ಬುಡನಾಳ ಬಳಿ ನಡೆದಿದೆ. ಕಲಘಟಗಿ(Kalghatgi) ತಾಲೂಕಿನ ಚಳಮಟ್ಟಿ ಕ್ರಾಸ್ ಬಳಿ ಮಂಗಳವಾರ ತಡರಾತ್ರಿ ನಡೆದಿದ್ದು, ದುರ್ಘಟನೆಯಲ್ಲಿ ಮೃತಪಟ್ಟ(Death) ಪೊಲೀಸ್‌ಗೆ ಇದೇ ಏ.28 ರಂದು ಮದುವೆ ನಿಗದಿಯಾಗಿತ್ತು ಎಂದು ತಿಳಿದು ಬಂದಿದೆ.
ಈ ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಪೊಲೀಸ್ ಕಾನ್‌ಸ್ಪೇಬಲ್ ಕಲಘಟಗಿಯ ಸಂಗಮೇಶ್ವರ ಗ್ರಾಮದ ಪಂಡಿತ ಎ. ಕಾಸರ (28) ಹಾಗೂ ಗಂಗಿವಾಳ ಗ್ರಾಮದ ವ್ಯಕ್ತಿ ಸ್ಥಳದಲ್ಲೇ ಮೃತರಾಗಿದ್ದಾರೆ. ಗಾಯಗೊಂಡವರನ್ನು ಹುಬ್ಬಳ್ಳಿಯ(Hubballi) ಕಿಮ್ಸ್(KIMS) ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದ(Accident) ಬಳಿಕ ಲಾರಿ ಚಾಲಕ ನಿಲ್ಲದೆ ಪರಾರಿ ಆಗಿದ್ದಾನೆ. ಪಂಡಿತ ಕಾಸರ ಇದೇ 28 ರಂದು ಹಸೆಮಣೆ ಏರಬೇಕಿತ್ತು. ಆದರೆ ದುರ್ಘಟನೆಯಲ್ಲಿ ಮೃತಪಟ್ಟಿದ್ದು, ಇಡೀ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ. ಪೊಲೀಸರೂ(Police) ಸಹ ಘಟನೆಯಿಂದ ಆಘಾತಗೊಂಡಿದ್ದಾರೆ.
Kalaburagi: ಟಿಪ್ಪರ್ ಹರಿದು ಬಾಲಕ ಸಾವು: ರೊಚ್ಚಿಗೆದ್ದ ಜನರಿಂದ ಟಿಪ್ಪರ್‌ಗೆ ಬೆಂಕಿ
ಮಂಗಳವಾರ ಸಂಜೆ ಮಳೆ, ಬಿರುಗಾಳಿಯಿಂದ ರಸ್ತೆಯಲ್ಲಿ ಬಿದ್ದಿದ್ದ ಮರಗಳನ್ನು ತೆರವು ಮಾಡಿ ಟ್ರಾಫಿಕ್ ಕ್ಲಿಯರ್ ಮಾಡಲು ಕಾರ್ಯಾಚರಣೆಗೆ 112 ವಾಹನದ ಜತೆಗೆ ಇವರು ಹೋಗಿದ್ದರು. ಈ ಸಮಯದಲ್ಲಿ ಕಲ್ಲು ಹಾಗೂ ಕಟ್ಟಿಗೆಯನ್ನು ರಸ್ತೆ ಮೇಲೆ ಇಡುವಾಗ ಅಪರಿಚಿತ ಲಾರಿ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ, ಕಲಘಟಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಿಮ್ಸ್‌ಗೆ ಆಗಮಿಸಿದ ಮಹಾನಗರ ಪೊಲೀಸ್ ಆಯುಕ್ತ ಲಾಬೂರಾಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ಪಡೆದಿದರು. ಪರಾರಿಯಾದ ಲಾರಿ ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿ 8 ಜನರ ದಾರುಣ ಸಾವು
ಈ ಬಗ್ಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ, ಕಲಘಟಗಿ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಘಟನೆಯಲ್ಲಿ ಮೃತಪಟ್ಟಿದಾರೆ. ಮೂರ್ನಾಲ್ಕು ಜನರಿಗೆ ಗಾಯವಾಗಿದೆ, ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಾರಿಯಾದ ಲಾರಿಗಾಗಿ ಪತ್ತೆ ಕಾರ್ಯ ನಡೆಸಿದ್ದೇವೆ ಎಂದರು.
ಟೈರ್ ಸ್ಫೋಟಗೊಂಡು ಕಾರಿಗೆ ಗುದ್ದಿದ ಬಸ್: ಐವರ ದಾರುಣ ಸಾವು
ಹೈದರಾಬಾದ್ (ತೆಲಂಗಾಣ): ಬಸ್ಸೊಂದು ಟೈರ್ ಸ್ಫೋಟಗೊಂಡು ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ತೆಲಂಗಾಣ ಸಾರಿಗೆ ಇಲಾಖೆಗೆ ಸೇರಿದ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ದುರಂತದಲ್ಲಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಮಚರೆಡ್ಡಿ ಮಂಡಲದ ಘಾನ್‌ಪುರ್ (ಎಂ) (Ghanpur(M) ಗ್ರಾಮದ ಬಳಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಟಿಎಸ್‌ಆರ್‌ಟಿಸಿ) ಬಸ್ ಎದುರು ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಬಸ್‌ನ ಒಂದು ಟೈರ್ ಒಡೆದು ಚಾಲಕನ ನಿಯಂತ್ರಣ ತಪ್ಪಿದ ನಂತರ ಎದುರಿನಿಂದ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಆಗ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಕಾಮರೆಡ್ಡಿ (Kamareddy) ಕಡೆಯಿಂದ ಕರೀಂನಗರ(Karimnagar) ಕಡೆಗೆ ಹೋಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರು ನಿಜಾಮಾಬಾದ್ (Nizamabad) ಜಿಲ್ಲೆಯವರಾಗಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ.