ಬೆಳಗಾವಿ: ಮೂಡಲಗಿ ಬಳಿ ಭೀಕರ ಅಪಘಾತ, ಇಬ್ಬರ ದುರ್ಮರಣ

Suvarna News   | Asianet News
Published : Sep 12, 2021, 01:12 PM ISTUpdated : Sep 12, 2021, 01:22 PM IST
ಬೆಳಗಾವಿ: ಮೂಡಲಗಿ ಬಳಿ ಭೀಕರ ಅಪಘಾತ, ಇಬ್ಬರ ದುರ್ಮರಣ

ಸಾರಾಂಶ

*  ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ನಡೆದ ಘಟನೆ *  ಓರ್ವನ ಸ್ಥಿತಿ ಗಂಭೀರ *  ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು 

ಚಿಕ್ಕೋಡಿ(ಸೆ.12): ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ಇಂದು(ಭಾನುವಾರ) ಬೆಳಗಿನ ಜಾವ ನಡೆದಿದೆ. 

ವಿನಾಯಕ‌ ಚಿದಾನಂದ ಕಾವೇರಿ (22) ಹಾಗೂ ಮುತ್ತು ಮಾಳಿ (22) ಸಾವನ್ನಪ್ಪಿದ ದುರ್ದೈವಿ ಯುವಕರಾಗಿದ್ದಾರೆ. ಈರಯ್ಯ ಹಿರೇಮಠ (22) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಹಾರೂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಈರಯ್ಯ ಹಿರೇಮಠ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ವಿಜಯಪುರ: ಕುರಿ ಕದಿಯಲು ಬಂದಿದ್ದ ಕಳ್ಳರ ಕಾರ್‌ ಪಲ್ಟಿ, ಎದ್ನೋ ಬಿದ್ನೋ ಅಂತ ಓಡಿದ ಖದೀಮರು..!

ಮೃತರು ಬೆಳಗಾವಿ ಜಿಲ್ಲೆಯ ಅಥಣಿ ನಗರದ ನಿವಾಸಿಗಳಾಗಿದ್ದು ಈರಯ್ಯ ಅವರ ತಾಯಿಯನ್ನು ಧಾರವಾಡಕ್ಕೆ ಬಿಟ್ಟು ಬರುವಾಗ ಈ ದುರ್ಘಟನೆ ಸಂಭವಿಸಿದೆ.  ಹಾರೋಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ಕುರಿತು ಹಾರೋಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!