Shivamogga: ಮಾಚೇನಹಳ್ಳಿ ಬಳಿ ಲಾರಿ, ಕಾರಿನ ಮಧ್ಯೆ ಭೀಕರ ಅಪಘಾತ: ಇಬ್ಬರ ದುರ್ಮರಣ

By Suvarna News  |  First Published Jan 27, 2022, 1:03 PM IST

*  ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ
*  ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ನಜ್ಜುಗುಜ್ಜಾದ ಕಾರು
*  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು
 


ಶಿವಮೊಗ್ಗ(ಜ.27): ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ(Shivamogga-Bengaluru National Highway) ಹಾದುಹೋಗಿರುವ ಮಾಚೇನಹಳ್ಳಿ ಡೈರಿ ಬಳಿ ಇಂದು(ಗುರುವಾರ) ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನ ಷಣ್ಮುಗ ಹಾಗೂ ರಾಮಚಂದ್ರ ಎಂದು ಗುರುತಿಸಲಾಗಿದೆ.  ಶಿವಮೊಗ್ಗದಿಂದ ಭದ್ರಾವತಿ(Bhadravathi) ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.  

ಚಾಲಕನ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ದಾಟಿ ಭದ್ರಾವತಿ ಮಾರ್ಗವಾಗಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಭದ್ರಾವತಿ ಪೇಪರ್ ಟೌನ್ ಬಡಾವಣೆಯ ಇಬ್ಬರು ಮೃತಪಟ್ಟಿದ್ದಾರೆ. ಲಾರಿ ಚಾಲಕನ ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಭದ್ರಾವತಿ ಸಂಚಾರಿ ಠಾಣಾ ಪೊಲೀಸರು(Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tap to resize

Latest Videos

Maharashtra Road Accident: ಭೀಕರ ಅಪಘಾತ ಬಿಜೆಪಿ ಶಾಸಕನ ಪುತ್ರ ಸೇರಿ 7 ಸಾವು!

ಹೃದಯಾಘಾತದಿಂದ ಎಎಸ್‌ಐ ಸಾವು

ಶಿವಮೊಗ್ಗ: ನಗರದ ದೊಡ್ಡಪೇಟೆ ಠಾಣೆಯಲ್ಲಿ ಎಎಸ್‌ಐ(ASI) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ(48)ಅವರು ಹೃದಯಾಘಾತದಿಂದ(Heart Attack) ಮೃತಪಟ್ಟಿದ್ದಾರೆ.

ನಿನ್ನೆ(ಬುಧವಾರ) ರಾತ್ರಿ ಕರ್ತವ್ಯಕ್ಕೆ ತೆರಳಿದ್ದ ಅವರಿಗೆ ರಾತ್ರಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಆಸ್ಪತ್ರೆಗೆ  ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುರೇಶ ಅವರು ಪೊಲೀಸ್ ಇಲಾಖೆಯಲ್ಲಿ ಪಿಸಿಯಾಗಿ ಸೇರ್ಪಡೆಯಾಗಿದ್ದರು. ಬಳಿಕ ಎಎಸ್‌ಐ ಆಗಿ ಮೇಲ್ದರ್ಜೆಗೆ ಬಡ್ತಿ ಪಡೆದಿದ್ದರು.

ಅಪಘಾತ: ಸವಾರನಿಗೆ ಗಾಯ

ಬ್ಯಾಡಗಿ(Byadagi): ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಾಯಗೊಂಡ ಘಟನೆ ತಾಲೂಕಿನ ಕದಮನಹಳ್ಳಿ ಕ್ರಾಸ್‌ ಬಳಿ ನಡೆದಿದೆ. ಮೋಟೆಬೆನ್ನೂರ ನಿವಾಸಿ ಸಂಜೀವಕುಮಾರ ಬಸವರಾಜಪ್ಪ ಬಸಣ್ಣನವರ (26) ಗಾಯಾಳು. 

ತಡರಾತ್ರಿ ಹಾವೇರಿಯಿಂದ ಮೋಟೆಬೆನ್ನೂರು ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗದಲ್ಲಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಬೈಕ್‌ ಮೇಲಿದ್ದ ಸಂಜೀವ ಅವರ ತಲೆ ಭಾಗ ಸೇರಿದಂತೆ ಇನ್ನಿತರ ಕಡೆಗಳಲ್ಲಿ ತೀವ್ರ ಗಾಯಗಳಾಗಿವೆ. ಆದರೆ ವಾಹನ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಕುರಿತು ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಕಾರು- ಆಟೋ ಡಿಕ್ಕಿ: ಆಟೋ ಚಾಲಕ ಸಾವು

ಕಾರ್ಕಳ(Karkala): ಕಾರು ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮಿಯ್ಯಾರು ಚರ್ಚ್‌ ಬಳಿ ನಡೆದಿದೆ.

ಕಾರ್ಕಳದಿಂದ ಬಜಗೋಳಿ ಕಡೆಗೆ ಸಾಗುತ್ತಿದ್ದ ಆಟೋ ಹಾಗೂ ನಾರಾವಿಯಿಂದ ಕಾರ್ಕಳ ಕಡೆಗೆ ಬರುತಿದ್ದ ಕಾರಿನ ನಡುವೆ ಡಿಕ್ಕಿ ಸಂಭಸಿ ಆಟೋ ಚಾಲಕ ಚಂದ್ರಶೇಖರ್‌ (55) ಸ್ಥಳದಲ್ಲೇ ಮೃತಪಟ್ಟರು(Death). ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇವರ ಸಹೋದರ ದಿವಾಕರ ಗಂಭೀರವಾಗಿ ಗಾಯಗೊಂಡರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Bengaluru Accident: ಹುಟ್ಟುಹಬ್ಬದ ದಿನದಂದೇ ಅಪಘಾತ: ಯುವತಿ ಬಲಿ

ಕಾರ್ಕಳ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿದ್ದ ಅಣ್ಣ ದಿವಾಕರ ಅವರನ್ನು ಡಿಸ್ಚಾರ್ಜ್‌ ಮಾಡಿಸಿಕೊಂಡು ಚಂದ್ರಶೇಖರ್‌ ರಿಕ್ಷಾದಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರು ಚಾಲಕ ಪಾರಾಗಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗೆ ಆಟೋ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬೈಕ್‌ಗೆ ಸರಕು ಸಾಗಣೆ ಆಟೋ ಡಿಕ್ಕಿಯಾಗಿ ಸಾವರನೊಬ್ಬ ಸ್ಥಳದಲ್ಲೇ ಅಸುನೀಗಿರುವ ಘಟನೆ ವರ್ತೂರು ಮುಖ್ಯರಸ್ತೆಯಲ್ಲಿ ನಡೆದಿದೆ. ವರ್ತೂರು ನಿವಾಸಿ ಅಮಿತ್‌ (24) ಮೃತ ದುರ್ದೈವಿ. ಕೆಲಸ ಮುಗಿಸಿಕೊಂಡು ಮಂಗಳವಾರ ರಾತ್ರಿ ಅಮಿತ್‌ ಮನೆಗೆ ಮರಳುವಾಗ ಈ ಅವಘಡ ಸಂಭವಿಸಿದೆ.
 

click me!