ರಾಮನಗರ: ಕನಕಪುರ ಬಳಿ ಮಿನಿ ಬಸ್‌ಗೆ ಕಾರು ಡಿಕ್ಕಿ, ಪ್ರೇಮಿಗಳ ದುರ್ಮರಣ

By Girish Goudar  |  First Published Dec 10, 2023, 2:34 PM IST

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆಬ್ಬಹಳ್ಳಿ ಗ್ರಾಮದ ಬಳಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ. ದೀಪಕ್ ಮತ್ತು ಶೈಲ ಮೃತ ಪ್ರೇಮಿಗಳಾಗಿದ್ದಾರೆ. 
 


ರಾಮನಗರ(ಡಿ.10):  ಮಿನಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪ್ರೇಮಿಗಳಿಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆಬ್ಬಹಳ್ಳಿ ಗ್ರಾಮದ ಬಳಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ. ದೀಪಕ್(25) ಮತ್ತು ಶೈಲ(22) ಮೃತ ಪ್ರೇಮಿಗಳಾಗಿದ್ದಾರೆ. 

ಮೃತರು ಕನಕಪುರದಿಂದ ದೀಪಕ್ ಸ್ವಗ್ರಾಮ ಕೆಬ್ಬಹಳ್ಳಿ ಗ್ರಾಮಕ್ಕೆ ಬರುತ್ತಿದ್ದರು. ಈ ವೇಳೆ ಓವರ್ ಟೇಕ್ ಮಾಡಲು ಹೋಗಿ ಮಿನಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 

Tap to resize

Latest Videos

ಚಿಕ್ಕಮಗಳೂರು: ವೇಗವಾಗಿ ಬಂದು ಬೈಕ್‌ಗೆ ಗುದ್ದಿದ ಕಾರು, ಇಬ್ಬರು ಸಾವು

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ಶೈಲ ಸ್ಥಳದಲ್ಲೇ ಸಾವನ್ನಪ್ಪಿದರೆ, ದೀಪಕ್‌ಗೆ ಗಂಭೀರವಾದ ಗಾಯಗಳಾಗಿದ್ದವು. ಗಾಯಗೊಂಡಿದ್ದ ದೀಪಕ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

click me!