ಕೂಡ್ಲಿಗಿ ಬಳಿ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ: ಗುಳೆ ಹೊರಟ ಇಬ್ಬರ ದುರಂತ ಅಂತ್ಯ

Suvarna News   | Asianet News
Published : Jul 18, 2021, 09:08 AM ISTUpdated : Jul 18, 2021, 09:58 AM IST
ಕೂಡ್ಲಿಗಿ ಬಳಿ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ: ಗುಳೆ ಹೊರಟ ಇಬ್ಬರ ದುರಂತ ಅಂತ್ಯ

ಸಾರಾಂಶ

* ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೊರಬ ಕ್ರಾಸ್ ಬಳಿ ನಡೆದ ಘಟನೆ * ಮಂಡ್ಯಕ್ಕೆ ಕಬ್ಬು ಕಟಾವಿಗೆ ಗುಳೆ ಹೊರಟಿದ್ದ ಇಬ್ಬರ ಸಾವು * ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿಜಯನಗರ(ಜು.18): ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಮೇಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೊರಬ ಕ್ರಾಸ್ ಬಳಿ ಇಂದು(ಭಾನುವಾರ) ನಡೆದಿದೆ. 

ಮೃತರನ್ನ ಶಂಕರ್ ನಾಯ್ಕ್(30), ಪೀಕ್ಯಾನಾಯ್ಕ್(50) ಎಂದು ಗುರುತಿಸಲಾಗಿದೆ. ಇವರು ಬೈಕ್ ಮೇಲೆ ಮಂಡ್ಯದ ಕಡೆ ಗುಳೆ ಹೊರಟಿದ್ದರು ಎಂದು ತಿಳಿದು ಬಂದಿದೆ.

ವಿಜಯಪುರ; ಭೀಕರ ಅಪಘಾತ, ಸ್ಥಳದಲ್ಲೇ ಮೂವರ ಸಾವು

ಮೃತರು ವಿಜಯನಗರ ಕೂಡ್ಲಿಗಿಯ ಗೋವಿಂದಗಿರಿ ತಾಂಡಾದಿಂದ ಮಂಡ್ಯಕ್ಕೆ ಕಬ್ಬು ಕಟಾವಿಗೆ ಗುಳೆ ಹೊರಟಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ