ತುಮಕೂರು: ಮರಳೂರು ಕೆರೆ ಏರಿ ಬಳಿ ಖಾಸಗಿ ಬಸ್- ಓಮಿನಿ ಕಾರು ಅಪಘಾತ, ಇಬ್ಬರ ಸಾವು

Published : Nov 02, 2023, 09:00 PM ISTUpdated : Nov 02, 2023, 09:07 PM IST
ತುಮಕೂರು: ಮರಳೂರು ಕೆರೆ ಏರಿ ಬಳಿ ಖಾಸಗಿ ಬಸ್- ಓಮಿನಿ ಕಾರು ಅಪಘಾತ, ಇಬ್ಬರ ಸಾವು

ಸಾರಾಂಶ

ಮೃತ ದುರ್ದೈವಿಗಳನ್ನು ತುಮಕೂರು ತಾಲೂಕಿನ ಮಾನಂಗಿ ಗ್ರಾಮದ  ನಿವಾಸಿ ಸುರೇಶ್ ಹಾಗೂ ಸುಮಾ  ಎಂದು ಗುರುತಿಸಲಾಗಿದೆ. ಅಲ್ಲದೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 10 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ತುಮಕೂರು(ನ.02): ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓಮಿನಿ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಮರಳೂರು ಕೆರೆ ಏರಿ ಬಳಿ ಇಂದು(ಬುಧವಾರ) ನಡೆದಿದೆ.

ಮೃತ ದುರ್ದೈವಿಗಳನ್ನು ತುಮಕೂರು ತಾಲೂಕಿನ ಮಾನಂಗಿ ಗ್ರಾಮದ  ನಿವಾಸಿ ಸುರೇಶ್ ಹಾಗೂ ಸುಮಾ  ಎಂದು ಗುರುತಿಸಲಾಗಿದೆ. ಅಲ್ಲದೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 10 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ಕಲಬುರಗಿ: ಭೀಕರ ರಸ್ತೆ ಅಪಘಾತ ನೇಪಾಳ ಮೂಲದ ಒಂದೇ ಕುಟುಂಬದ ಐವರು ಸಾವು!

ಗಾಯಾಳುಗಳನ್ನು ಗಂಗಲಕ್ಷ್ಮಮ್ಮ, ವರಲಕ್ಷ್ಮಿ, ಚಿಕ್ಕನಾಯಮ್ಮ, ಗೀತಾ, ಸರೋಜಾ, ಕುಮಾರ್ , ಆಂಜನಪ್ಪ, ಶಶಿಕಲಾ, ರೇಖಾ, ಅನುಪಮಾ ಎಂದು ಗುರುತಿಸಲಾಗಿದೆ. ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. 

ಕುಣಿಗಲ್ ಕಡೆಯಿಂದ ತುಮಕೂರು ನಗರದ ಕಡೆಗೆ ಬರುತ್ತಿದ್ದ  ಖಾಸಗಿ ಬಸ್  ಹಾಗೂ  ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ.ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. 

ತುಮಕೂರಿನಿಂದ ಮಾನಂಗಿ ಕಡೆಗೆ ಹೊರಟ್ಟಿದ್ದ ಮೃತರು 

ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಚಾಲಕನನ್ನ  ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Read more Articles on
click me!

Recommended Stories

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ
ದಾವಣಗೆರೆ ರಾಟ್‌ವೀಲರ್ ನಾಯಿಗಳ ಡೆಡ್ಲಿ ಅಟ್ಯಾಕ್; 50ಕ್ಕೂ ಹೆಚ್ಚು ಕಡೆ ಕಚ್ಚಿಸಿಕೊಂಡ ಮಹಿಳೆ ದುರ್ಮರಣ