ಲಕ್ಷೇಶ್ವರ: ಕಂದಕಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್‌, ಇಬ್ಬರು ಕೂಲಿ ಕಾರ್ಮಿಕರ ದುರ್ಮರಣ

Suvarna News   | Asianet News
Published : Feb 25, 2021, 12:03 PM ISTUpdated : Feb 25, 2021, 12:07 PM IST
ಲಕ್ಷೇಶ್ವರ: ಕಂದಕಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್‌, ಇಬ್ಬರು ಕೂಲಿ ಕಾರ್ಮಿಕರ ದುರ್ಮರಣ

ಸಾರಾಂಶ

ಕೂಲಿ ಕೆಲಸ ಮುಗಿಸಿಕೊಂಡು ವಾಪಸ್‌ ಬರುವಾಗ ನಡೆದ ದುರ್ಘಟನೆ| ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದ ಅಪಘಾತ| ಗಾಯಾಳುಗಳು ಲಕ್ಷ್ಮೇಶ್ವರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು| 

ಗದಗ(ಫೆ.25): ಟ್ರ್ಯಾಕ್ಟರ್‌ವೊಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಏಳು ಜನರಿಗೆ ಗಾಯ‌ಗಳಾದ ಘಟನೆ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ಇಂದು(ಗುರುವಾರ) ನಡೆದಿದೆ. 

ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ ಹಿತ್ತಲಮನಿ(30) ಹಾಗೂ ಸೋಮವ್ವಾ ಅಡುಗೆಮನಿ(48) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರಲ್ಲಿ ಶೇ.70 ರಷ್ಟು ಯುವಜನಾಂಗ; ಬೆಚ್ಚಿ ಬೀಳಿಸುತ್ತಿದೆ ವರದಿ!

ಕೂಲಿ ಕೆಲಸ ಮುಗಿಸಿಕೊಂಡು ವಾಪಸ್‌ ಬರುವಾಗ ಟ್ರ್ಯಾಕ್ಟರ್‌ ಪಲ್ಟಿಯಾದ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನ ಲಕ್ಷ್ಮೇಶ್ವರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಕ್ಷ್ಮೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

PREV
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!