06223 ಶಿವಮೊಗ್ಗ- ಮದ್ರಾಸ್ ರೈಲು ಪ್ರತಿ ಭಾನುವಾರ ಮತ್ತು ಮಂಗಳವಾರ ಶಿವಮೊಗ್ಗದಿಂದ ಸಂಜೆ 7ಕ್ಕೆ ಹಾಗೂ 06224 ಮದ್ರಾಸ್- ಶಿವಮೊಗ್ಗ ರೈಲು ಪ್ರತಿ ಸೋಮವಾರ ಮತ್ತು ಬುಧವಾರ ಮದ್ರಾಸ್ಸಿನಿಂದ ಮಧ್ಯಾಹ್ನ 3.30ಕ್ಕೆ ಪ್ರಯಾಣಿಸಲಿವೆ.
ಶಿವಮೊಗ್ಗ(ಮಾ.28): 2019- 2020ರಲ್ಲಿ ಪ್ರಾರಂಭಗೊಂಡಿದ್ದ ಶಿವಮೊಗ್ಗ-ರೇಣಿಗುಂಟ (ತಿರುಪತಿ) ಹಾಗೂ ಶಿವಮೊಗ್ಗ- ಬೆಂಗಳೂರು- ಮದ್ರಾಸ್ ಎಕ್ಸ್‌ಪ್ರೆಸ್ ವಾರಕ್ಕೆ ಎರಡು ಬಾರಿ ಸಂಚರಿಸುತ್ತಿದ್ದು, ಕೋವಿಡ್ ಹಿನ್ನೆಲೆ ದೇಶಾದ್ಯಂತ ರೈಲು ಸೇವೆಗಳನ್ನು ನಿಲುಗಡೆ ಮಾಡಿದ ಸಂದರ್ಭ ಈ ಎರಡು ರೈಲು ಸೇವೆಗಳನ್ನು ಸಹ ರೈಲ್ವೆ ಇಲಾಖೆಯಿಂದ ಹಿಂಪಡೆಯಲಾಗಿತ್ತು. ಆದರೆ ಈಗ ವಿಶೇಷ ರೈಲ್ವೆ ಸೇವೆಯನ್ನು ಮತ್ತೆ ಮುಂದುವರಿಸಲಾಗಿದೆ.
06223 ಶಿವಮೊಗ್ಗ- ಮದ್ರಾಸ್ ರೈಲು ಪ್ರತಿ ಭಾನುವಾರ ಮತ್ತು ಮಂಗಳವಾರ ಶಿವಮೊಗ್ಗದಿಂದ ಸಂಜೆ 7ಕ್ಕೆ ಹಾಗೂ 06224 ಮದ್ರಾಸ್- ಶಿವಮೊಗ್ಗ ರೈಲು ಪ್ರತಿ ಸೋಮವಾರ ಮತ್ತು ಬುಧವಾರ ಮದ್ರಾಸ್ಸಿನಿಂದ ಮಧ್ಯಾಹ್ನ 3.30ಕ್ಕೆ ಪ್ರಯಾಣಿಸಲಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಮತ್ತೆ ಭುಗಿಲೆದ್ದ ಅಸಮಾಧಾನ: ಟಿಕೆಟ್ ನೀಡದಂತೆ ಆಗ್ರಹಿಸಿದ ಕಾರ್ಯಕರ್ತರು
ಮಂಗಳೂರು- ಯಶವಂತಪುರ ಸಾಪ್ತಾಹಿಕ ರೈಲು ವೇಳಾಪಟ್ಟಿ ಪರಿಷ್ಕರಣೆ
ಮಂಗಳೂರು: ಮಂಗಳೂರು ಜಂಕ್ಷನ್- ಯಶವಂತಪುರ ಜಂಕ್ಷನ್ ನಡುವೆ ಪ್ರತಿ ಭಾನುವಾರ ಸಂಚರಿಸುವ ಸಾಪ್ತಾಹಿಕ ಎಕ್ಸ್‌ಪ್ರೆಸ್ (16540) ರೈಲಿನ ವೇಳಾಪಟ್ಟಿ ಪರಿಷ್ಕರಿಸಿ ನೈರುತ್ಯ ರೈಲ್ವೆ ವಲಯವು ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಜುಲೈ 16ರಿಂದ ಈ ರೈಲು ಮಂಗಳೂರು ಜಂಕ್ಷನ್‌ನಿಂದ ಬೆಳಗ್ಗೆ 7 ಗಂಟೆಗೆ ಹೊರಡಲಿದ್ದು, ಯಶವಂತಪುರ (ಬೆಂಗಳೂರು)ಕ್ಕೆ ಸಂಜೆ 4.30ಕ್ಕೆ ತಲುಪಲಿದೆ.
ಪ್ರಸ್ತುತ ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್- ಯಶವಂತಪುರ ಜಂಕ್ಷನ್ ಗೋಮಟೇಶ್ವರ ಎಕ್ಸಪ್ರೆಸ್ ರೈಲು ಮಧ್ಯಾಹ್ನ 11:30ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 8:45ಕ್ಕೆ ಯಶವಂತಪುರ ಜಂಕ್ಷನ್ ತಲುಪುತ್ತಿದೆ. ರೈಲು ಸಂಖ್ಯೆ 16540 ಮಂಗಳೂರು- ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಭಾನುವಾರ ಮಂಗಳೂರಿನಿಂದ ಬೆಳಗ್ಗೆ 9:15ಕ್ಕೆ ಹೊರಟು ಯಶವಂತಪುರ ರಾತ್ರಿ 8:20ಕ್ಕೆ ತಲುಪುತ್ತಿದೆ. ಇದರಿಂದ ಮಂಗಳೂರಿನಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಊಟ ತಿಂಡಿಗೂ ಸಮಸ್ಯೆ ಆಗುತ್ತಿತ್ತು. ಯಶವಂತಪುರಕ್ಕೆ ರಾತ್ರಿ ತಲುಪುವುದರಿಂದ ಅಲ್ಲಿಂದ ಬೆಂಗಳೂರಿನ ಬೇರೆ ಭಾಗಗಳಿಗೆ ಹೋಗುವವರಿಗೆ ತಮ್ಮ ಗಮ್ಯ ಸ್ಥಾನ ತಲುಪುವಾಗ ತಡರಾತ್ರಿಯಾಗುತ್ತಿದೆ. ರಾತ್ರಿ ಹೊತ್ತು ಯಶವಂತಪುರ ಮೂಲಕ ಹಲವಾರು ರೈಲುಗಳು ಹಾದು ಹೋಗುವುದರಿಂದ ಕ್ರಾಸಿಂಗ್, ಪ್ಲಾಟ್‌ಫಾಮ್‌ರ್ ಲಭ್ಯತೆಗೋಸ್ಕರ ಯಶವಂತಪುರ ರೈಲು ನಿಲ್ದಾಣದ ಹೊರಭಾಗದಲ್ಲಿ ಈ ರೈಲುಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಈ ರೈಲುಗಳು ಯಶವಂತಪುರ ರೈಲು ನಿಲ್ದಾಣ ತಲುಪುವಾಗ ಇನ್ನೂ ತಡವಾಗುತ್ತಿದೆ.
ರೈಲು ಸಂಖ್ಯೆ 16540 357 ಕಿ.ಮೀ. ಕ್ರಮಿಸಲು ಪ್ರಸ್ತುತ 11 ಗಂಟೆ 5 ನಿಮಿಷ ತೆಗೆದುಕೊಳ್ಳುತ್ತಿದೆ. ಸುಬ್ರಹ್ಮಣ್ಯ- ಸಕಲೇಶಪುರ ಘಾಟಿ ಪ್ರದೇಶದಲ್ಲಿ ಸಕಲೇಶಪುರ ಕಡೆಯಿಂದ ಬರುವ ರೈಲುಗಳ ಜತೆಗೆ ಕ್ರಾಸಿಂಗ್ ಮಾಡಲು ಘಾಟಿ ಪ್ರದೇಶದಲ್ಲಿ ಈಗ ಒಂದು ಘಂಟೆ ನಿಲ್ಲಿಸಲಾಗುತ್ತಿದೆ. ಇದರಿಂದ ಪ್ರಯಾಣಿಕರ ಅಮೂಲ್ಯ ಸಮಯ, ಒಂದು ದಿನ ಸಂಪೂರ್ಣ ವ್ಯರ್ಥವಾಗುತ್ತಿದೆ. ಹಾಗಾಗಿ ಈ ಎರಡು ರೈಲುಗಳನ್ನು ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಬೆಂಗಳೂರಿಗೆ ಸಂಜೆ ಬೇಗ ತಲುಪುವ ಹಾಗೆ ಮಾಡಬೇಕೆಂದು ಮಂಗಳೂರಿನ ಪಶ್ಚಿಮ ಕರಾವಳಿ ರೈಲು ಯಾತ್ರಿಕರ ಸಂಘವು ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಮನವಿ ಮಾಡಿತ್ತು.
ವಿಧಾನಸಭಾ ಚುನಾವಣೆ: ಬೇಳೂರು ‘ಕೈ’ಗೆ ಟಿಕೆಟ್: ಸಾಗರ ಕ್ಷೇತ್ರದಲ್ಲಿ ಹೈವೋಲ್ಟೇಜ್ ಕದನ
ಸಂಸದರು ರೈಲಿನ ವೇಳಾಪಟ್ಟಿ ಬದಲಿಸುವಂತೆ ನೈರುತ್ಯ ರೈಲ್ವೆ ವಲಯ ಹಾಗೂ ದಕ್ಷಿಣ ರೈಲ್ವೆ ವಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಈ ಬಗ್ಗೆ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ ಸದಸ್ಯರು ಹುಬ್ಬಳ್ಳಿಯ ನೈರುತ್ಯ ರೈಲ್ವೆ ಕಚೇರಿಗೆ ಕಳೆದ ಫೆಬ್ರವರಿಯಲ್ಲಿ ಭೇಟಿ ನೀಡಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವರಿಕೆ ಮಾಡಿ ಲಿಖಿತ ಮನವಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಪರಿಷ್ಕರಣೆಗೆ ರೈಲ್ವೆ ಇಲಾಖೆ ನಿರ್ಧಾರ ಕೈಗೊಂಡಿದೆ.
ವಾರದಲ್ಲಿ ಮೂರು ದಿನ ಸಂಚರಿಸುವ ಮಂಗಳೂರು ಜಂಕ್ಷನ್- ಯಶವಂತಪುರ ಜಂಕ್ಷನ್ ಗೋಮಟೇಶ್ವರ ಎಕ್ಸಪ್ರೆಸ್ ರೈಲು (16576) ಕೂಡ ಮಂಗಳೂರು ಜಂಕ್ಷನ್‌ನಿಂದ ಬೆಳಗ್ಗೆ 7ಕ್ಕೆ ಹೊರಟು ಯಶವಂತಪುರ ಸಂಜೆ 4.30ಕ್ಕೆ ತಲುಪುವಂತೆ ವೇಳಾಪಟ್ಟಿ ಪರಿಷ್ಕರಣೆಗೆ ನೈರುತ್ಯ ರೈಲ್ವೆಯ ಮೈಸೂರು, ಬೆಂಗಳೂರು ಮತ್ತು ದಕ್ಷಿಣ ರೈಲ್ವೆಯ ಪಾಲಕ್ಕಡ್ ವಿಭಾಗಗಳು ಈಗಾಗಲೇ ಒಪ್ಪಿಗೆ ನೀಡಿದ್ದು, ನೈರುತ್ಯ ರೈಲ್ವೆ ವಲಯ ಕಚೇರಿಯಿಂದ ಕೂಡ ಶೀಘ್ರ ಒಪ್ಪಿಗೆ ದೊರೆಯುವ ನಿರೀಕ್ಷೆ ಇದೆ ಎಂದು ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಂತ ಕಾಮತ್ ತಿಳಿಸಿದ್ದಾರೆ.