ಎಸಿಬಿ ದಾಳಿ: ಲಂಚ ಸಮೇತ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿಗಳು

Kannadaprabha News   | Asianet News
Published : Dec 02, 2020, 08:37 AM ISTUpdated : Dec 02, 2020, 08:39 AM IST
ಎಸಿಬಿ ದಾಳಿ: ಲಂಚ ಸಮೇತ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿಗಳು

ಸಾರಾಂಶ

ಎಸಿಬಿ ಬಲೆಗೆ ಬಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು| ಆರೋಪಿಗಳಿಂದ ಹಣ ಜಪ್ತಿ| ಆಗ ಪರವಾನಿಗೆ ನೀಡಿಕೆಗೆ 50 ಸಾವಿರಕ್ಕೆ ಆರೋಪಿಗಳು ಬೇಡಿಕೆ ಇಟ್ಟಿದ್ದರು ಎಂಬ ಆರೋಪ| ಈ ಸಂಬಂಧ ಎಸಿಬಿ ಬೆಂಗಳೂರು ಘಟಕಕ್ಕೆ ದೂರು ಸಲ್ಲಿಸಿದ್ದ ಖಾಸಗಿ ವ್ಯಕ್ತಿ| 

ಬೆಂಗಳೂರು(ಡಿ. 02): ನೀರಿನ ಶುದ್ಧೀಕರಣ ಘಟಕ ಆರಂಭಕ್ಕೆ ಖಾಸಗಿ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ದಾಸರಹಳ್ಳಿ ಪ್ರಾದೇಶಿ ಕಚೇರಿಯ ಇಬ್ಬರು ಅಧಿಕಾರಿಗಳು ಮಂಗಳವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಪರಿಸರ ಅಧಿಕಾರಿ ಕೆ.ವಿ.ಶಿವಕುಮಾರ್‌ ಹಾಗೂ ಉಪ ಪರಿಸರ ಅಧಿಕಾರಿ ಕೆ.ಎಂ.ಸೋಮಶೇಖರ್‌ ಬಂಧಿತರಾಗಿದ್ದು, ಆರೋಪಿಗಳಿಂದ ಹಣ ಜಪ್ತಿ ಮಾಡಲಾಗಿದೆ. ಮಾಗಡಿ ರಸ್ತೆಯ ಕಾಚೋಹಳ್ಳಿ ಗ್ರಾಮದಲ್ಲಿ ನೀರಿನ ಶುದ್ಧೀಕರಣ ಘಟಕ ತೆರೆಯುವ ಸಂಬಂಧ ಅಕ್ಟೋಬರ್‌ನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ದಾಸರಹಳ್ಳಿ ವಲಯದ ಪ್ರಾದೇಶಿಕ ಕಚೇರಿಗೆ ರಾಜಾಜಿನಗರದ ನಿವಾಸಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಆಗ ಪರವಾನಿಗೆ ನೀಡಿಕೆಗೆ 50 ಸಾವಿರಕ್ಕೆ ಆರೋಪಿಗಳು ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ.

KAS ಭ್ರಷ್ಟ ಅಧಿಕಾರಿ ಸುಧಾಗೆ ಮತ್ತೊಂದು ಶಾಕ್‌..!

ಈ ಬಗ್ಗೆ ನ.30 ರಂದು ಎಸಿಬಿ ಬೆಂಗಳೂರು ಘಟಕಕ್ಕೆ ಖಾಸಗಿ ವ್ಯಕ್ತಿ ದೂರು ಸಲ್ಲಿಸಿದ್ದರು. ಅದರನ್ವಯ 25 ಸಾವಿರ ಲಂಚ ಸ್ವೀಕರಿಸುವ ವೇಳೆ ಪರಿಸರ ಅಧಿಕಾರಿ ಕೆ.ವಿ.ಶಿವಕುಮಾರ್‌ ಅವರು ಮೇಲೆ ದಾಳಿ ನಡೆಸಿ ದಸ್ತಗಿರಿ ಮಾಡಲಾಯಿತು. ಅನಂತರ ಉಪ ಪರಿಸರ ಅಧಿಕಾರಿ ಕೆ.ಎಂ.ಸೋಮಶೇಖರ್‌ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದನ್ನು ತಿಳಿದು ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

PREV
click me!

Recommended Stories

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!