ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ| ಇಬ್ಬರು ಸಾವನ್ನಪ್ಪಿ, ಮತ್ತೊಬ್ಬರಿಗೆ ಗಾಯ| ಕಲಬುರಗಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಹೊರವಲಯದಲ್ಲಿ ನಡೆದ ಘಟನೆ| ಗಾಯಳುವಿಗೆ ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ| ಈ ಸಂಬಂಧ ಶಹಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|
ಶಹಾಪೂರ(ನ.08): ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅಕ್ಕ-ತಂಗಿ ಇಬ್ಬರು ಮೃತ ಪಟ್ಟಿದ್ದು, ಒಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ರಸ್ತಾಪುರ ಹೊರವಲಯದ ಕಸ್ತೂರ್ ಬಾ ವಸತಿ ಶಾಲೆಯ ಹತ್ತಿರದಲ್ಲಿ ನಡೆದಿದೆ.
ಮೃತರು ರಸ್ತಾಪುರ ಗ್ರಾಮದವರು ಎಂದು ತಿಳಿದು ಬಂದಿದೆ. ಬೈಕ್ ಮೇಲಿಂದ ಬಿದ್ದು ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಆಫೀಜಾ ಬೇಗಂ (70) ಮತ್ತು ಅಬಿದಾ ಬೇಗಂ (50) ಇಬ್ಬರು ಅಕ್ಕ-ತಂಗಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಲಬುರಗಿ: ಹೆಂಡತಿ ಎದುರೇ ಅಳಿಯನಿಂದ ಅತ್ತೆ ಕೊಲೆ..!
ಇನ್ನೊರ್ವ ಮಹಿಳೆ ಕುಲುಸುಂಬಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದ ಡ್ರೈವರ್ ಮತ್ತು ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಹಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪಿಐ ಚೆನ್ನಯ್ಯ ಹಿರೇಮಠ್ ತಿಳಿಸಿದ್ದಾರೆ.