ಲಿಂಗಸೂಗೂರು ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮರಣ

Suvarna News   | Asianet News
Published : Feb 05, 2021, 01:14 PM IST
ಲಿಂಗಸೂಗೂರು ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮರಣ

ಸಾರಾಂಶ

ಸರಣಿ ಅಪಘಾತಕ್ಕೆ ಇಬ್ಬರ ಬಲಿ| ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋಲಪಲ್ಲಿ ಬಳಿ ನಡೆದ ಘಟನೆ| ಲಾರಿ ಹಿಂದೆ ಇದ್ದ ಕಾರಿಗೆ ಹಿಂಬದಿಯಲ್ಲಿನ ಡಿಕ್ಕಿ ಹೊಡೆದ ಮತ್ತೊಂದು ಲಾರಿ| ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು| 

ರಾಯಚೂರು(ಫೆ.05): ಮೂರು ಲಾರಿ ಮತ್ತು ಒಂದು ಕಾರ್ ನಡುವೆ ಡಿಕ್ಕಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರಿಗೆ ಗಂಭೀರವಾದ ಗಾಯಗಳಾದ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋಲಪಲ್ಲಿ ಬಳಿ ಇಂದು(ಶುಕ್ರವಾರ) ನಡೆದಿದೆ. 

ಮೃತರನ್ನ‌ ಜಿಲ್ಲೆಯ ದೇವದುರ್ಗ ಮೂಲದ ಹರ್ಷಿತಾ(18) ಹಾಗೂ ಬುವಾನ್ (16) ಎಂದು ಗುರುತಿಸಲಾಗಿದೆ. ಲಾರಿ ಹಿಂದೆ ಇದ್ದ ಕಾರಿಗೆ ಹಿಂಬದಿಯಲ್ಲಿನ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾರಿಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿ ಇದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹೊಸಪೇಟೆ: ಬೈಕ್‌ನಿಂದ ಬಿದ್ದು ಕೊಪ್ಪಳದ ಯುವಕರಿಬ್ಬರ ದುರ್ಮರಣ

ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ