ಎತ್ತಿನಗಾಡಿಗೆ ಬೈಕ್ ಡಿಕ್ಕಿ ಇಬ್ಬರ ಸಾವು| ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದ ಬಳಿ ನಡೆದ ಘಟನೆ| ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|
ಹಾವೇರಿ(ಸೆ.28): ಎತ್ತಿನಗಾಡಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ತಾಲೂಕಿನ ಕುರುಬಗೊಂಡ ಗ್ರಾಮದ ಬಳಿ ನಡೆದಿದೆ.
ಮೃತರನ್ನ ಹಾವೇರಿ ತಾಲೂಕಿನ ಹೆಡಿಗೊಂಡ ಗ್ರಾಮದ ಅಭಿಷೇಕ ಮಾಲತೇಶ ಆನ್ವೇರಿ(19) ಹಾಗೂ ಆಂಜನೇಯ ಹನುಮಂತಪ್ಪ ದೊಡ್ಡಮನಿ(19) ಎಂದು ಗುರುತಿಸಲಾಗಿದೆ.
ಹಾವೇರಿ: ಕೊರೋನಾ ಬಳಿಕ ಸರ್ಕಾರಿ ಶಾಲೆಗಳಿಗೆ ಜೀವಕಳೆ!
ಮೃತರು ಹೆಡಿಗೊಂಡ ಗ್ರಾಮದಿಂದ ಹಾವೇರಿಗೆ ಬರುತ್ತಿದ್ದಾಗ ತಿರುವಿನಲ್ಲಿ ಎದುರಿಗೆ ಹೋಗುತ್ತಿದ್ದ ಎತ್ತಿನಗಾಡಿಗೆ ಡಿಕ್ಕಿ ಹೊಡೆದು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಬಿದ್ದಿರುವ ರಭಸಕ್ಕೆ ತಲೆಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.