ಶಿವಮೊಗ್ಗ : ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

By Suvarna News  |  First Published Mar 15, 2021, 3:33 PM IST

ಶಿವಮೊಗ್ಗದ ಹಾಸ್ಟೆಲ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊರೋನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು ತೀವ್ರ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳಿಗೆ ರಾಂಡಮ್ ಚೆಕಪ್ ಮಾಡಲಾಗಿದೆ. 


ಶಿವಮೊಗ್ಗ (ಮಾ. 15):  ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.  ಇಬ್ಬರು ಪದವಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. 

ಶಿವಮೊಗ್ಗದ ಜೆ ಪಿ ನಗರದ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. 

Tap to resize

Latest Videos

ಚಿಕ್ಕೋಡಿ; ಒಂದೇ ಕುಟುಂಬದ 14 ಜನರಿಗೆ ಕೊರೋನಾ, ಸಂತೆಯೇ ಬಂದ್! ..

ಸುಮಾರು 95 ವಿದ್ಯಾರ್ಥಿಗಳಿರುವ ಬಾಲಕರ ವಿದ್ಯಾರ್ಥಿ ನಿಲಯಯಲಯದಲ್ಲಿ ಸೋಂಕು ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. 

ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕಿನ  ಹಿನ್ನೆಲೆಯಲ್ಲಿ ಹಾಸ್ಟೆಲ್ ನಲ್ಲಿ ರಾಂಡಮ್ ಚೆಕ್ ಅಪ್  ಮಾಡಲಾಗಿದೆ. ಆರೋಗ್ಯ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. 

ಕೊರೋನಾ ಸೋಂಕು ತಗುಲಿದ ವಿದ್ಯಾರ್ಥಿಗಳಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ. 

ಈಗಾಗಲೇ ರಾಜ್ಯದಲ್ಲಿ ದಿನದಿನವೂ ಹೆಚ್ಚು ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ. 

click me!