ತುಮಕೂರು: ಬೆಳಕಿನ ಹಬ್ಬದಂದೇ ಆವರಿಸಿದ ಕತ್ತಲು, ಬಾವಿಯಲ್ಲಿ ಈಜಲು ಹೋದ ಇಬ್ಬರು ಯುವಕರ ದುರ್ಮರಣ

By Girish Goudar  |  First Published Nov 1, 2024, 10:21 PM IST

ಗ್ರಾಮಸ್ಥರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶವಗಳನ್ನ ಹೊರತೆಗೆದಿದ್ದಾರೆ.  ಶವ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 


ತುಮಕೂರು(ನ.01):  ಬಾವಿಯಲ್ಲಿ ಈಜಾಡಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಬೆಳಗುಂಬ ಬಳಿ ಇಂದು(ಶುಕ್ರವಾರ) ನಡೆದಿದೆ. ಯಶವಂತ (17), ಮೊಹಮ್ಮದ್ ಸುಹೇಲ್ (17) ಸಾವನ್ನಪ್ಪಿದ ಯುವಕರು.

ತುಮಕೂರು ಹೊರವಲಯದ ಬೆಳಗುಂಬ ತಾಂಡ್ಯದ ವಾಸಿ ಶ್ರೀನಿವಾಸ್‌ನ ಮಗ ಯಶವಂತ್ ಹಾಗೂ ವಡ್ಡರಹಳ್ಳಿ ಗ್ರಾಮದ ವಾಸಿ ಬಾಬಾ ಜಾನ್‌ನ ಮಗ ಮೊಹಮ್ಮದ್ ಸುಹೇಲ್ ಮಗ.

Tap to resize

Latest Videos

undefined

ಒಂದೊಂದೆ ಗ್ಯಾರಂಟಿ ವಾಪಸ್ ಪಡೆಯಲು ಕಾಂಗ್ರೆಸ್‌ ಪ್ಲ್ಯಾನ್‌: ಕೇಂದ್ರ ಸಚಿವ ಕುಮಾರಸ್ವಾಮಿ

ತುಮಕೂರು ಹೊರವಲಯದ ಬೆಳಗುಂಬ ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ಬಾವಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.  ಗ್ರಾಮಸ್ಥರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶವಗಳನ್ನ ಹೊರತೆಗೆದಿದ್ದಾರೆ. ಶವ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

click me!