ರಾಯಚೂರು: ಬೈಕ್‌ ಕಾರು ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು

By Girish Goudar  |  First Published Nov 5, 2024, 9:08 AM IST

ರಾಯಚೂರಿನಿಂದ ಕಲ್ಲೂರಿಗೆ ಒಂದೇ ಬೈಕ್‌ನಲ್ಲಿ ನಾಲ್ವರು ಹೊರಟಿದ್ದರು. ಪವರ್ ಗ್ರಿಡ್ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಆಗ ಕೆಳಕ್ಕೆ ಬಿದ್ದ ಬೈಕ್ ಸವಾರರ ಮೇಲೆ ಲಾರಿಯೊಂದು ಹರಿದಿದೆ. ಹೀಗಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ರಾಯಚೂರು(ನ.05):  ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಬಳಿ ಇಂದು(ಮಂಗಳವಾರ) ನಡೆದಿದೆ. ಶರಣಬಸವ(28), ಶಿವು (26) ಮೃತ ದುರ್ದೈವಿಗಳು. 

ಬೈಕ್ ನಲ್ಲಿದ್ದ ಇನ್ನಿಬ್ಬರು ಇರ್ಫಾನ್ ಹಾಗೂ ಗರೀಬ್ ಎಂಬುವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

Tap to resize

Latest Videos

undefined

ರಾಯಚೂರಿನಿಂದ ಕಲ್ಲೂರಿಗೆ ಒಂದೇ ಬೈಕ್‌ನಲ್ಲಿ ನಾಲ್ವರು ಹೊರಟಿದ್ದರು. ಪವರ್ ಗ್ರಿಡ್ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಆಗ ಕೆಳಕ್ಕೆ ಬಿದ್ದ ಬೈಕ್ ಸವಾರರ ಮೇಲೆ ಲಾರಿಯೊಂದು ಹರಿದಿದೆ. ಹೀಗಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಬೈಕ್ ಸವಾರರು ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

click me!