ಕೊರೋನಾ ಸೋಂಕಿತ SSLC ವಿದ್ಯಾರ್ಥಿನಿಗೆ ಡಿಸಿ ಕಾಲ್..!

By Kannadaprabha NewsFirst Published Jun 30, 2020, 8:39 AM IST
Highlights

ಕೊರೋನಾ ಸೋಂಕಿನಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವುದರಿಂದ ವಂಚಿತಳಾಗಿರುವ ಕಾಪುವಿನ ವಿದ್ಯಾರ್ಥಿನಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಮಾತ್ರವಲ್ಲ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಬರೆಯುವುದಕ್ಕೆ ಅವಕಾಶ ಇದೆ, ಧೃತಿಗೆಡುವ ಅಗತ್ಯ ಇಲ್ಲ ಎಂದು ಧೈರ್ಯ ತುಂಬಿದ್ದಾರೆ.

ಉಡುಪಿ(ಜೂ.30): ಕೊರೋನಾ ಸೋಂಕಿನಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವುದರಿಂದ ವಂಚಿತಳಾಗಿರುವ ಕಾಪುವಿನ ವಿದ್ಯಾರ್ಥಿನಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಮಾತ್ರವಲ್ಲ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಬರೆಯುವುದಕ್ಕೆ ಅವಕಾಶ ಇದೆ, ಧೃತಿಗೆಡುವ ಅಗತ್ಯ ಇಲ್ಲ ಎಂದು ಧೈರ್ಯ ತುಂಬಿದ್ದಾರೆ.

ಈ ಸೋಂಕಿತ ವಿದ್ಯಾರ್ಥಿನಿಯು ಕನ್ನಡ ಮತ್ತು ಗಣಿತ ಪರೀಕ್ಷೆಯನ್ನು ಬರೆದಿದ್ದಳು. ನಂತರ ಆಕೆಯ ತಂದೆಗೆ ಸೋಂಕು ಪತ್ತೆಯಾಗಿತ್ತು, ಮರುದಿನ ಆಕೆಗೂ ಸೋಂಕು ದೃಢಪಟ್ಟು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರಿಂದ, ಉಳಿದ ಪರೀಕ್ಷೆ ಬರೆಯುವುದಕ್ಕೆ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ಈ ವಿದ್ಯಾರ್ಥಿನಿ ಪರೀಕ್ಷೆ ಬರೆದ ಹೆಜಮಾಡಿಯ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸ್ಥಳದಿಂದಲೇ ಸೋಂಕಿತ ವಿದ್ಯಾರ್ಥಿನಿಗೆ ಕರೆ ಮಾಡಿ ಧೈರ್ಯ ಹೇಳಿದರು.

ಗುಡ್‌ ನ್ಯೂಸ್: ಭಾರತದ ಮೊದಲ ಕೊರೋನಾ ಔಷಧ ಸಿದ್ಧ!

ನಂತರ ಈ ಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮತ್ತು ಅಲ್ಲಿಯ ಸಿಬ್ಬಂದಿಗಳನ್ನು ಭೇಟಿ ಮಾಡಿ ಧೈರ್ಯ ತುಂಬಿದರು. ಸೋಂಕಿತ ವಿದ್ಯಾರ್ಥಿನಿ ಕಾರ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾಳೆ ಮತ್ತು ಸಪ್ಲಿಮೆಂಟರಿ ಪರೀಕ್ಷೆಗೆ ಓದುತ್ತಿದ್ದಾಳೆ. ಆಕೆಯೊಂದಿಗೆ ಪರೀಕ್ಷೆ ಬರೆದ ಮಕ್ಕಳಿಗೆ ಸೋಂಕು ಹರಡುವ ಬಗ್ಗೆ ಆತಂಕ ಬೇಡ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಅಧಿಕಾರಿಗಳಾದ ಎಸ್‌.ಎಂ. ನಾಗೇಶ್‌, ಹೆಜಮಾಡಿ ಪಂಚಾಯಿತಿ ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್‌, ಉಪಾಧ್ಯಕ್ಷ ಸುಧಾಕರ ಕರ್ಕೇರ ಮತ್ತು ಪಡುಬಿದ್ರಿ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

click me!