ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಕೊನೆಯುಸಿರೆಳೆದ ಅಜ್ಜಿ ಯಶೋಧಾ ಉಪಾಧ್ಯ

By Sathish Kumar KH  |  First Published Apr 17, 2024, 5:43 PM IST

ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ವೃದ್ಧೆ ಯಶೋಧಾ ಅವರು ಚಿಕಿತ್ಸೆಸಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಉಡುಪಿ (ಏ.17): ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ 65 ವರ್ಷ ಮೇಲ್ಪಟ್ಟ ಎಲ್ಲ ವಯೋವೃದ್ಧರಿಗೆ ಹಾಗೂ ತೀವ್ರ ಅಂಗವಿಕಲತೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮನೆಯಿಂದ ಲೋಕಸಭಾ ಚುನಾವಣೆಯ ಅಭ್ಯರ್ಥಿಗೆ ಮತದಾನ ಮಾಡಿದ ವೃದ್ಧೆ ಕೆಲವೇ ಕ್ಷಣಗಳಲ್ಲಿ ಕೊನೆಯುಸಿರೆಳೆದಿದ್ದಾರೆ.

ಹೌದು, ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವಯೋವೃದ್ಧೆ ಮೃತಪಟ್ಟಿದ್ದಾರೆ. ಮೃತರನ್ನು ಬ್ರಹ್ಮಾವರ ತಾಲೂಕು ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಆಗಿದ್ದಾರೆ. ಇವರು ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿದ್ದಾರೆ. ಹಿರಿಯ ನಾಗರೀಕರ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ದರು. ಮತದಾನದ ಮಾಡಿದ ನಂತರ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ, ಮತದಾನ ಮಾಡಿ ಆಸ್ಪತ್ರೆ ತೆರಳಲು ನಿಶ್ಚಯಿಸಿದ್ದರು. 

Latest Videos

undefined

ಚುನಾವಣೆ ಮುಗಿದ 15 ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ; ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ಮತದಾನ ಮಾಡಿದ ಮಹಿಳೆ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಯಶೋಧಮ್ಮ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇವರು ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

click me!