Udupi: ರೈಲು ನಿಲ್ದಾಣದಲ್ಲಿ ಅಪರಿಚಿತನಾಗಿ ಸಿಕ್ಕಿದ್ದ ಯುವಕ, 9 ತಿಂಗಳ ಬಳಿಕ ಕುಟುಂಬ ಸೇರಿದ್ದು ಹೇಗೆ?

Published : Jun 14, 2026, 09:43 PM IST
Dilip Andhra Pradesh

ಸಾರಾಂಶ

Missing Youth Found: ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ಯುವಕನ ವಾರಸುದಾರರನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು..

ಉಡುಪಿ (ಜೂ.14): ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ಯುವಕನ ವಾರಸುದಾರರನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು, ಜಿಲ್ಲಾಸ್ಪತ್ರೆಯ ಸಿಬ್ಬಂದಿ ಸುರೇಶ್ ನಾವೂರು ಹಾಗೂ ರೈಲ್ವೆ ಪೊಲೀಸರ ಸಹಕಾರದಿಂದ ಯುವಕ ಮರಳಿ ತನ್ನ ಕುಟುಂಬ ಸೇರುವಂತಾಗಿದೆ.

ಕೆಲವು ತಿಂಗಳ ಹಿಂದೆ ರೈಲ್ವೇ ರಕ್ಷಣಾ ಪಡೆಯ ಸಿಬ್ಬಂದಿ ವಿಶ್ರಾಮ್ ದೇಸಾಯಿ ಅವರು ಉಡುಪಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಅಸಹಾಯಕ ಸ್ಥಿತಿಯಲ್ಲಿದ್ದ ಯುವಕನನ್ನು ಗಮನಿಸಿ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವು ಪಡೆದು, ಮಾನಸಿಕವಾಗಿ ನೊಂದಿದ್ದ ಯುವಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವ್ಯವಸ್ಥೆ ಮಾಡಿದ್ದರು.

ಜಿಲ್ಲಾಸ್ಪತ್ರೆಯಲ್ಲಿ ವೈದ್ಯರಾದ ಡಾ. ವಾಸುದೇವ್ ಅವರ ವಿಶೇಷ ಕಾಳಜಿ ಹಾಗೂ ಸಮರ್ಪಕ ಚಿಕಿತ್ಸೆಯಿಂದ ಯುವಕನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಯುವಕನನ್ನು ಆಂಧ್ರ ಪ್ರದೇಶ ಮೂಲದ ದಿಲೀಪ್ ಎಂದು ಪತ್ತೆ ಮಾಡಲಾಯಿತು. ಆತನ ಕುಟುಂಬದವರ ಪತ್ತೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ಮತ್ತು ಆಸ್ಪತ್ರೆಯ ಸಿಬ್ಬಂದಿ ಸುರೇಶ್ ನಾವೂರು ನಿರಂತರ ಪ್ರಯತ್ನ ನಡೆಸಿದರು. ಫಲವಾಗಿ ಯುವಕನ ಕುಟುಂಬದವರನ್ನು ಸಂಪರ್ಕಿಸಲು ಸಾಧ್ಯವಾಗಿದೆ.

ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ

ದಿಲೀಪ್ ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಅವರ ಪೋಷಕರು ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೇ ತಮ್ಮ ಮಗ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ತಾಯಿ ಹಾಗೂ ಸಹೋದರ ಉಡುಪಿಗೆ ಆಗಮಿಸಿ, ದಿಲೀಪ್ ಅವರನ್ನು ಸ್ವಗ್ರಾಮಕ್ಕೆ ಕರೆದೊಯ್ದಿದ್ದಾರೆ. ಈ ಮಾನವೀಯ ಕಾರ್ಯದಲ್ಲಿ ಭಾಗಿಯಾದ ರೈಲ್ವೆ ರಕ್ಷಣಾ ಪಡೆ, ರೈಲ್ವೆ ಪೊಲೀಸರು, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಮತ್ತು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸೇವೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

PREV
Read more Articles on
click me!

Recommended Stories

ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಅನಂತ್ ಅಂಬಾನಿ, ವಿಶೇಷ ಪೂಜೆ ಸಲ್ಲಿಸಿದ ಉದ್ಯಮಿ
Ballari News: ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿ ರೇಣುಕಾಸ್ವಾಮಿಯಂತೆ ಕಾಲುವೆ ಪಕ್ಕದಲ್ಲಿ ಬೀದಿ ಹೆಣವಾದ ಬಸವನಗೌಡ!