ಅನಾಥ ವೃದ್ಧರಿಗೆ ಆಶ್ರಯ ನೀಡೋದ್ಯಾರು, ಡಿಸಿ ಮೊರೆ ಹೋದ ಉಡುಪಿಯ ಸಾಮಾಜಿಕ ಕಾರ್ಯಕರ್ತರು

Published : Nov 12, 2022, 07:38 PM IST
ಅನಾಥ ವೃದ್ಧರಿಗೆ ಆಶ್ರಯ ನೀಡೋದ್ಯಾರು, ಡಿಸಿ ಮೊರೆ ಹೋದ ಉಡುಪಿಯ ಸಾಮಾಜಿಕ ಕಾರ್ಯಕರ್ತರು

ಸಾರಾಂಶ

 ಅನಾರೋಗ್ಯ ಪೀಡಿತರಾಗಿ ಅನಾಥ ಸ್ಥಿತಿಯಲ್ಲಿದ್ದ ಹಿರಿಯ ವೃದ್ಧರನ್ನು ಉಡುಪಿಯ ಸಾಮಾಜಿಕ ಕಾರ್ಯಕರ್ತ, ವಿಶು ಶೆಟ್ಟಿ ಅವರು ರಕ್ಷಿಸಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಅವರನ್ನು ಎಲ್ಲಿಗೆ ಸೇರಿಸೋದು ಎಂಬ ಧರ್ಮ ಸಂಕಟ ಇದೀಗ ಸಾಮಾಜಿಕ ಕಾರ್ಯಕರ್ತರನ್ನು ಕಾಡುತ್ತಿದೆ.

ಉಡುಪಿ (ನ.12): ಕೋಟ ಠಾಣಾ ವ್ಯಾಪ್ತಿಯಲ್ಲಿ 20 ದಿನಗಳ ಹಿಂದೆ ಕಾಲಿಗೆ ಗಾಯವಾಗಿ, ಅನಾರೋಗ್ಯ ಪೀಡಿತರಾಗಿ ಅನಾಥ ಸ್ಥಿತಿಯಲ್ಲಿದ್ದ ಹಿರಿಯ ವೃದ್ಧರನ್ನು ಉಡುಪಿಯ ಸಾಮಾಜಿಕ ಕಾರ್ಯಕರ್ತ, ವಿಶು ಶೆಟ್ಟಿ ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಅವರನ್ನು ಎಲ್ಲಿಗೆ ಸೇರಿಸೋದು ಎಂಬ ಧರ್ಮ ಸಂಕಟ ಇದೀಗ ಸಾಮಾಜಿಕ ಕಾರ್ಯಕರ್ತರನ್ನು ಕಾಡುತ್ತಿದೆ. ವೃದ್ಧರನ್ನು ಆಸ್ಪತ್ರೆಗೆ ದಾಖಲಿಸಿದ ವಿಶು ಶೆಟ್ಟಿ ಅವರಿಗೆ ವೃದ್ಧರನ್ನು ಕರೆದುಕೊಂಡು ಹೋಗುವಂತೆ ಜಿಲ್ಲಾಸ್ಪತ್ರೆಯಿಂದ ಕರೆ ಬಂದಿದೆ. ವೃದ್ಧರ ವಾರೀಸುದಾರರು ಸ್ಪಂದಿಸದ ಕಾರಣ ಅವರನ್ನು ಎಲ್ಲಿಗೆ ಸೇರಿಸೋದು ಎಂಬ ಗಂಭೀರ ಪ್ರಶ್ನೆ ಎದುರಾಗಿದೆ. ಪ್ರತಿ ಬಾರಿ ಅನಾಥ ವೃದ್ಧರು ಪತ್ತೆಯಾದಾಗಲಿಲ್ಲ ಇದೇ ಸಮಸ್ಯೆ ಪದೇ ಪದೇ ಎದುರಾಗುತ್ತಿದೆ. ಉಡುಪಿಯ ಉಚಿತ ಅನಾಥಾಶ್ರಮಗಳೆಲ್ಲಾ ಬಹುತೇಕ ತುಂಬಿ ಹೋಗಿವೆ. ಜೊಲ್ಲೆಯಲ್ಲಿ ಸರಕಾರಿ ಅನಾಥಾಶ್ರಮಗಳೇ ಇಲ್ಲ. ಹೀಗಾಗಿ ದಾರಿ ಕಾಣದೆ ವಿಶು ಶೆಟ್ಟಿ ಅವರು ತಮ್ಮದೇ ಖರ್ಚಿನಲ್ಲಿ ವೃದ್ಧರನ್ನು ತಾತ್ಕಾಲಿಕವಾಗಿ ಖಾಸಗಿ ಆಶ್ರಮಕ್ಕೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

Udupi; ಮಕ್ಕಳ ವಿರುದ್ಧ ದೂರು ನೀಡಲು ಧರ್ಮಸ್ಥಳಕ್ಕೆ ಹೊರಟಿದ್ದ ವೃದ್ಧನ ರಕ್ಷಣೆ

ಆದರೆ ಖಾಸಗಿ ಆಶ್ರಮದ ದುಬಾರಿ ವೆಚ್ಚವನ್ನು ಪ್ರತೀ ತಿಂಗಳು ಭರಿಸುವುದು ಅಸಾಧ್ಯವಾದ ಕೆಲಸ. ಹೀಗಾಗಿ ವೃದ್ಧರಿಗೆ ಆಶ್ರಯ ಕಲ್ಪಿಸಲು ಜಿಲ್ಲಾಡಳಿತ, ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ತುರ್ತಾಗಿ ನಿರ್ಧಾರಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.ಮಾನವೀಯ ನೆಲೆಯಲ್ಲಿ ಅನಾಥರನ್ನು, ನೊಂದವರನ್ನು ಆಸ್ಪತ್ರೆಗಳಿಗೆ ದಾಖಲಿಸಿದಾಗ, ದಾಖಲಿಸಿದವರೇ ಅವರ ಆಗುಹೋಗುಗಳಿಗೆ ಜವಾಬ್ದಾರರಾದರೆ ಮುಂದೆ ಸಮಾಜದಲ್ಲಿ ಅನಾಥರಿಗೆ ಸಹಾಯ ಹಸ್ತ ಚಾಚಲು ಯಾರೂ ಮುಂದೆ ಬರಲಾರರು ಅನ್ನೋದು ಸಾಮಾಜಿಕ ಕಾರ್ಯಕರ್ತರ ನೋವು .ಜಿಲ್ಲಾಡಳಿತ, ಇಲಾಖಾಧಿಕಾರಿಗಳು ಈ ಗಮನ ಹರಿಸಬೇಕು ಎಂದು ಅವರು ತಿಳಿಸಿದ್ದಾರೆ.

ಉಡುಪಿ; ಮಾನಸಿಕ ಅಸ್ವಸ್ಥ ಯುವಕ ಗುಣಮುಖ, ಮಗನನ್ನು ಸ್ವೀಕಾರಿಸಲೊಪ್ಪದ ತಂದೆ!

ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ದೀರ್ಘಾವಧಿ ನಿಲ್ಲಲು ಅವಕಾಶವಿಲ್ಲ. ಅಲ್ಲಿಯೂ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಬೆಡ್‌ನ ಕೊರತೆ ಕಾಡುತ್ತಿದೆ. ಹೀಗಾಗಿ ಜಿಲ್ಲಾಡಳಿತ ಅಥವಾ ಸಂಬಂಧ ಪಟ್ಟ ಇಲಾಖೆ ವೃದ್ಧರಿಗೆ ಸೂಕ್ತ ಆಶ್ರಯ ಕಲ್ಪಿಸಬೇಕು. ತಮಗೂ ಈ ಪ್ರಕರಣಕ್ಕೂ ಸಂಬಂದವೇ ಇಲ್ಲ, ಎಂದು ವೃದ್ಧರನ್ನು ಹಿಂದಿನಂತೆ ಬೀದಿ ಬದಿ ಬಿಟ್ಟು ಬಿಡಬೇಕೇ ಎಂಬುದನ್ನು ಸ್ಪಷ್ಟ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಸಂಬಂಧ ಪಟ್ಟ ಇಲಾಖೆಗೆ ಪತ್ರ ಬರೆದಿದ್ದೇನೆ ಎಂದು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಹೇಳಿದ್ದಾರೆ.

PREV
Read more Articles on
click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಬೆಂಗಳೂರಿನ ಗುಲಾಬಿ ಮೆಟ್ರೋ ಮಾರ್ಗಕ್ಕೆ ಶೀಘ್ರ ಪ್ರೊಟೊಟೈಪ್‌ ರೈಲು