ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ ಹಾಕಿದ್ರೆ ಹುಷಾರ್, ಎಸ್‌ಪಿ ಎಚ್ಚರಿಕೆ

By Girish Goudar  |  First Published Aug 5, 2022, 12:00 AM IST

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಮೂಲದ ವ್ಯಕ್ತಿಯ ಮೇಲೆ ಕೇಸ್ ದಾಖಲು


ಉಡುಪಿ(ಆ.05):  ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ ಎಂದು ಉಡುಪಿ ಪೊಲೀಸ್ ಅಧಿಕಾರಿ ವಿಷ್ಣುವರ್ಧನ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ  ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಅಂತವರ ವಿರುದ್ದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಫೇಸ್ ಬುಕ್, ವಾಟ್ಸಾಪ್, ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪ್ರಚೋದನಕಾರಿ ಹೇಳಿಕೆ (ಪೋಸ್ಟ್) ಗಳನ್ನು ಹಾಕುವವರ/ಫಾರ್ವರ್ಡ್ ಮಾಡುವವರ ವಿರುದ್ಧವೂ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

Latest Videos

undefined

UDUPI: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಮಕ್ಕಳ ಅಸ್ಥಿ ಮಜ್ಜೆಯ ಕಸಿಯ ಯಶಸ್ಸಿನ ಸಂಭ್ರಮಾಚರಣೆ

ಈ ಬಗ್ಗೆ ವಾಟ್ಸಪ್, ಗ್ರೂಪ್ ಅಡ್ಮಿನ್ ಗಳು ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸುವುದು ಹಾಗೂ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳುವಳಿಕೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಸಂಘಟನೆ, ವ್ಯಕ್ತಿಗಳು ಸೇರಿದಂತೆ ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯವಾಗಿರುವ  ನಾನಾ ವ್ಯಕ್ತಿಗಳು, ಗುಂಪುಗಳ ಮೇಲೆ ಕಠಿಣ ನಿಗಾ ಇರಿಸಲಾಗಿದೆ. ಆನ್ಲೈನ್ ಮಾಧ್ಯಮ, ವೆಬ್ ಪೇಜ್, ಮುದ್ರಣ ಮಾಧ್ಯಮ ಮೇಲೂ ನಿಗಾ ವಹಿಸಲಾಗಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ಭಾವನೆ ಸೃಷ್ಟಿಸಿ, ಜಾತಿ ಧರ್ಮಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಪೋಸ್ಟ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದ್ದು, ಇಂತಹ ಪೋಸ್ಟ್‌ಗಳನ್ನು ಲೈಕ್, ಶೇರ್, ಫಾರ್ವಡ್ ಹಾಗೂ ಆಕ್ಷೇಪಾರ್ಹವಾಗಿ ಕಮೆಂಟ್ ಮಾಡುವವರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಯಾರೇ ಆದರೂ ವಿವಾದಾತ್ಮಕ ಪೋಸ್ಟರ್, ಪ್ರಚೋಧನಾಕಾರಿ ಹೇಳಿಕೆ, ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ದಾವಣಗೆರೆಗೆ ಬಂದ ಉಡುಪಿಯ ಹುಲಿಯಾ

ಪ್ರಚೋದಿಸಿದವನ ವಿರುದ್ಧ ಕೇಸ್

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಮೂಲದ ವ್ಯಕ್ತಿಯ ಮೇಲೆ ಕೇಸ್ ದಾಖಲಾಗಿದೆ. ಉಡುಪಿ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.
ಲಕ್ಷ್ಮೀಕಾಂತ ಬೈಂದೂರು ಎಂಬ ವ್ಯಕ್ತಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ಫಾಜಿಲ್ ಹತ್ಯೆಯ ಆರೋಪಿಗಳನ್ನು ಹೀರೋಗಳು ಎಂದು ಬರೆದಿದ್ದ ಪೋಸ್ಟ್  ಗೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಾಗಿದೆ.

ಪ್ರವೀಣ್ ಹತ್ಯೆಗೆ ಪ್ರತೀಕಾರ ಹೇಗಿತ್ತು ಎಂಬ ಬರಹದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.ಒಬ್ಬ ಪ್ರವೀಣ್ ಗೆ ಒಬ್ಬ ಫಾಜಿಲ್ ಸಾಕಾಗಲ್ಲ ಎಂದು ಬರೆದಿದ್ದ FB ಖಾತೆ ಇದಾಗಿತ್ತು.ಕೋಮು ಪ್ರಚೋದನೆ ಹಿನ್ನಲೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.
 

click me!