Udupi ನಮ್ಮದೇವಾಲಯ ಬಿಟ್ಟುಕೊಡಿ, ನಿಮ್ಮ ಮಸೀದಿ ಬಿಟ್ಟು ಕೊಡೋಣ

Published : May 16, 2022, 02:25 PM IST
Udupi ನಮ್ಮದೇವಾಲಯ ಬಿಟ್ಟುಕೊಡಿ, ನಿಮ್ಮ ಮಸೀದಿ ಬಿಟ್ಟು ಕೊಡೋಣ

ಸಾರಾಂಶ

ಧರ್ಮ ದಂಗಲ್ ವಿಚಾರವಾಗಿ ಉಡುಪಿ ಶ್ರೀಗಳ ಪ್ರತಿಕ್ರಿಯೆ ಹಿಂದೂ ಸಮಾಜವೂ ನಿಯಮ‌ಪಾಲಿಸಲಿ ದೇವಸ್ಥಾನ ಮರಳಿ ಕೇಳುತ್ತಿರುವುದು ಸ್ವಾಗತಾರ್ಹ ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ

ಉಡುಪಿ (ಮೇ.16): ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್  ವಿಚಾರವಾಗಿ ಉಡುಪಿಯ (Udupi) ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು (vishwa prasanna theertha swamiji) ಪ್ರತಿಕ್ರಿಯೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆಗೆ ಮಾರ್ಗದರ್ಶನ ಮಾಡಿದೆ. ಈ ನಿಯಮಗಳನ್ನು ಪಾಲಿಸಬೇಕು ಎಂದು ಹಿಂದೂ (Hindu) ಸಮಾಜಕ್ಕೂ ಕರೆ ಕೊಡುತ್ತೇನೆ. ವಿಶೇಷ ದಿನಗಳು ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ (loudspeaker) ಬಳಕೆ ಮಾಡೋಣ ಎಂದು ಸ್ವಾಮೀಜಿ ಹೇಳಿದ್ದಾರೆ.

ದೇವಸ್ಥಾನ ಮರಳಿ ಕೇಳುತ್ತಿರುವುದು ಸ್ವಾಗತಾರ್ಹ: ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧರ್ಮ ಕೇಂದ್ರಗಳು ಮಸೀದಿಗಳಾಗಿ ಪರಿವರ್ತಿತವಾಗಿರುತ್ತದೆ. ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ.ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು  ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇಲ್ಲ. ಆದರೆ ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ ಎಂದು ಸ್ವಾಮೀಜಿ ಹೇಳಿದರು.

ಶಿಕ್ಷಣದಲ್ಲಿ ಕೇಸರಿಕರಣಕ್ಕೆ ಮುಂದಾಯ್ತಾ ಕರ್ನಾಟಕ ಶಿಕ್ಷಣ ಇಲಾಖೆ!?

ಈಗ ಆಗುತ್ತಿರುವ ಇಂತಹ ಬೆಳವಣಿಗೆಯನ್ನು ನಾವು ಸ್ವಾಗತಿಸುತ್ತೇವೆ.  ಈಗ ಇದೊಂದು ಕಾಲಘಟ್ಟ.. ನ್ಯಾಯಾಲಯದ ತೀರ್ಪು ಎಲ್ಲರೂ ಪರಿಪಾಲಿಸಬೇಕು. ಹಿಂದೆ ಆಗಿಹೋದ ಬಗ್ಗೆ ಕೋರ್ಟ್ ತೀರ್ಮಾನ ಕೊಟ್ಟದ್ದಾದರೆ ಯಾರೂ ಇದನ್ನು ಹಿನ್ನಡೆ ಎಂದು ಭಾವಿಸಬಾರದು. ಹಿಂದೂಗಳ ಪೂಜಾ ಮಂದಿರವಾದರೆ ಹಿಂದುಗಳಿಗೆ ಬಿಟ್ಟುಕೊಡಿ. ಮುಸಲ್ಮಾನರ ದರ್ಗಾ ಆಗಿದ್ದರೆ ಮುಸಲ್ಮಾನರಿಗೆ ಬಿಟ್ಟುಕೊಡಬೇಕು. ಸುಪ್ರೀಂ ಕೋರ್ಟ್ ಮಾಡುವ ಮಾರ್ಗದರ್ಶನದಂತೆ ನಾವು ನಡೆಯುವುದು ಸೂಕ್ತ ಎಂದರು.

ತಪ್ಪು ಆಗಿದ್ದರೆ ಅದು ತಪ್ಪೇ ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ. ಸಂಘರ್ಷಕ್ಕೆ ಇಳಿಯದೆ ಸೌಹಾರ್ದ ದಿಂದ ಬಿಟ್ಟುಕೊಡಬೇಕು. ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಸಹಕರಿಸಬೇಕು ಎಂದು ಸ್ವಾಮೀಜಿ ಹೇಳಿದರು.

ತರಕಾರಿ ವ್ಯಾಪಾರಿಗಳಿಗಾಗಿ Mobile Refrigerator ಕಂಡುಹಿಡಿದ ಮೈಸೂರು ವಿದ್ಯಾರ್ಥಿಗಳು! 

ಪೇಜಾವರ ವಿಶ್ವೇಶ ತೀರ್ಥರ ನೆನಪಲ್ಲಿ ಸ್ಮೃತಿವನ: ಪೇಜಾವರ ಮಠದ ಪದ್ಮವಿಭೂಷಣ ಪುರಸ್ಕೃತ ಕೀರ್ತಿಶೇಷ  ವಿಶ್ವೇಶ ತೀರ್ಥ ಶ್ರೀಪಾದರ (Sri Vishwesha Theertha) ಸ್ಮರಣಾರ್ಥ ಉಡುಪಿ ಜಿಲ್ಲೆಯ ನೀಲಾವರ ಗ್ರಾಮದಲ್ಲಿ ( ಗೋಶಾಲೆ ಸಮೀಪ ) ಸ್ಮೃತಿ ವನ ನಿರ್ಮಿಸಲಾಗುತ್ತಿದೆ. ಪರಿಸರದ ಬಗ್ಗೆ ವಿಶೇಷವಾದ ಕಾಳಜಿ ಹೊಂದಿದ್ದ ವಿಶ್ವೇಶತೀರ್ಥರ ಹೆಸರಲ್ಲಿ ಈ ಸ್ಮೃತಿವನ ನಿರ್ಮಾಣವಾಗುತ್ತಿರುವುದು ಪರಿಸರ ಪ್ರಿಯರಲ್ಲಿ ಹರ್ಷ ಮೂಡಿಸಿದೆ. 

 ಬಿ ಎಸ್ ಯಡಿಯೂರಪ್ಪನವರು   ಮುಖ್ಯಮಂತ್ರಿಗಳಾಗಿದ್ದಾಗ  ವಿಶ್ವೇಶತೀರ್ಥ ಶ್ರೀಪಾದರು ಮತ್ತು ತುಮಕೂರಿನ ಡಾ ಸಿದ್ಧಗಂಗಾ ಸ್ವಾಮೀಜಿಯವರ ಹೆಸರಲ್ಲಿ ಸ್ಮೃತಿ ವನ ನಿರ್ಮಾಣಕ್ಕಾಗಿ ತಲಾ ಎರಡು ಕೋಟಿ ರೂಗಳನ್ನು ಬಜೆಟ್ ನಲ್ಲಿ ಘೋಷಿಸಿದ್ದರು.

ನಂತರ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು , ಅರಣ್ಯ ಮಂತ್ರಿ ಉಮೇಶ ಕತ್ತಿಯವರು ಹಾಗೂ ಶಾಸಕ ರಘುಪತಿ ಭಟ್ಟರು ವಿಶೇಷ ಮುತುವರ್ಜಿ ವಹಿಸಿದ್ದರಿಂದ ಇದೀಗ  ಅರಣ್ಯ ಇಲಾಖೆಯ ಮೂಲಕ ಇದರ ಅನುಷ್ಠಾನವಾಗುತ್ತಿದೆ. 

ಗೋಶಾಲೆ ಸಮೀಪವೇ ಭೂಮಿ ಲಭಿಸಿತು!
ಬಹಳ ಅಚ್ಚರಿಯ ಸಂಗತಿ ಎಂದರೆ ಇದಕ್ಕೆ ಅವಶ್ಯವಿದ್ದ ಭೂಮಿಗಾಗಿ ಅರಣ್ಯ ಇಲಾಖೆ ಜಿಲ್ಲೆಯ ಕೆಲವೆಡೆ ಸರ್ಕಾರಿ ಭೂಮಿ ಹುಡುಕಾಟದಲ್ಲಿತ್ತು. ಆದರೆ ವಿಶ್ವೇಶತೀರ್ಥರ ಶಿಷ್ಯರು ಹಾಗೂ ಹಾಲಿ ಪೇಜಾವರ ಮಠಾಧೀಶರಾದ  ವಿಶ್ವಪ್ರಸನ್ನ ತೀರ್ಥರಿಗೆ ಇದು ನೀಲಾವರ ಗೋಶಾಲೆಯ ಆಸುಪಾಸಿನಲ್ಲೇ ನಿರ್ಮಾಣವಾದರೆ ಗೋಶಾಲೆಯನ್ನು ನೋಡಲು ಬರುವವರಿಗೆ ಸ್ಮೃತಿ ವನವನ್ನೂ ನೋಡುವ ಅವಕಾಶ ಸಿಗುತ್ತದೆ. ಇದೊಂದು  ಪ್ರೇಕ್ಷಣೀಯ ಸ್ಥಳವಾಗ್ತದೆ ಮತ್ತು ನಿರ್ವಹಣೆಯೂ ಸುಲಭವಾಗ್ತದೆ ಎಂಬ ಯೋಚನೆ ಇತ್ತು .ಅಚ್ಚರಿ ಎಂದರೆ ಈ ಚಿಂತನೆಯಂತೆ ಇದೀಗ ನೀಲಾವರ ಗೋಶಾಲೆಗೆ ತಾಗಿಕೊಂಡೇ ಇರುವ ಎರಡು ಎಕ್ರೆ ಸರ್ಕಾರಿ ಭೂಮಿಯೇ ಒದಗಿ ಬಂದಿದೆ. ಇದು ವಿಶ್ವೇಶತೀರ್ಥರ ಶಿಷ್ಯರಲ್ಲಿ ಸಂತಸವನ್ನುಂಟು ಮಾಡಿದೆ.

 

PREV
Read more Articles on
click me!

Recommended Stories

ಕಚೇರಿಗಳಿಗೆ ಬಿಗಿಯುಡುಪು, ಸ್ಲೀವ್​ಲೆಸ್​ ಡ್ರೆಸ್​, ಹರಿದ ಜೀನ್ಸ್​ ನಿಷೇಧ: ಸರ್ಕಾರದ ಆದೇಶದಲ್ಲಿ ಇನ್ನೂ ಏನೇನಿವೆ?
ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ: ಡಿ.ಕೆ.ಶಿವಕುಮಾರ್ ಹೇಳಿಕೆ ಹಾಟ್ ಟಾಪಿಕ್!