ಗೂಗಲ್ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ರಾಜ್ಯ ಸರ್ಕಾರ

Published : Jun 03, 2021, 05:05 PM IST
ಗೂಗಲ್ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ರಾಜ್ಯ ಸರ್ಕಾರ

ಸಾರಾಂಶ

* ದೇಶದಲ್ಲಿ ಅತ್ಯಂತ ಕೆಟ್ಟ ಮತ್ತು ಕೊಳಕು ಭಾಷೆ ಕನ್ನಡ! * ಗೂಗಲ್ ಎಡವಟ್ಟಿಗೆ ತಿರುಗಿ ಬಿದ್ದ  ಕನ್ನಡಿಗರು * ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ; ಸಚಿವ ಅರವಿಂದ ಲಿಂಬಾವಳಿ * ಯಾರೇ ಇಂಥ ಕೆಲಸ ಮಾಡಿದರೂ ಸಹಿಸಲು ಸಾಧ್ಯವಿಲ್ಲ

ಬೆಂಗಳೂರು(ಜೂ.  03) ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ  ತಿಳಿಸಿದ್ದಾರೆ.

ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ  ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು  ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ , ಅವರು ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಕನ್ನಡಿಗರ ಕೆಣಕಿ ತಲೆಬಾಗಿದ ಗೂಗಲ್, ಕಸ್ತೂರಿ ಭಾಷೆಗೆ ರಾಣಿ ಪಟ್ಟ

ಕನ್ನಡ ಭಾಷೆ ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ ಭಾರತದ ಶಾಸ್ತ್ರೀಯ ಭಾಷೆ ಎಂಬ ಹೆಗ್ಗಳಿಕೆ ಪಡೆದಿರುವ ಭಾಷೆಯ ಬಗ್ಗೆ ಕೀಳಾಗಿ ಮಾತಾಡಿದರೂ ಅದನ್ನು ಸಹಿಸಲಾಗುವುದಿಲ್ಲ. ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್ ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು. ಗೂಗಲ್ ಈ ವಿಚಾರದಲ್ಲಿ ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. 

 

 

 

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC