ರಾಜೇಸಾಬ ಗಡ್ಡೇಕರ ಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಮುಸ್ಲಿಂ ಸಮುದಾಯದ ಕುಟುಂಬಗಳ ಮೃತ ವ್ಯಕ್ತಿಗಳ ಅಂತ್ಯ ಸಂಸ್ಕಾರಕ್ಕೆ ಜಾಗ ಸಿಕ್ಕಿಲ್ಲ. ಗ್ರಾಮದಲ್ಲಿ 50ಕ್ಕೂ ಅಧಿಕ ಮುಸ್ಲಿಂ ಕುಟುಂಬಗಳಿದ್ದರೂ ಮೃತರ ಅಂತ್ಯಕ್ರಿಯೆಗೆ ಜಾಗ ಮಾತ್ರ ಸಿಕ್ಕಿಲ್ಲ. ಹಲವು ವರ್ಷಗಳಿಂದ ಮುಸ್ಲಿಂ ಸಮುದಾಯದಿಂದ ಬೇಡಿಕೆ ಇಟ್ಟರೂ ಯಾವುದೇ ಪ್ರಯೋಜನವಾಗಿಲ್ಲ.
ಬಾಗಲಕೋಟೆ(ಅ.05): ಮೃತ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಜಾಗ ಸಿಗದಿದ್ದರಿಂದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ.
ರಾಜೇಸಾಬ ಗಡ್ಡೇಕರ(71) ಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಮುಸ್ಲಿಂ ಸಮುದಾಯದ ಕುಟುಂಬಗಳ ಮೃತ ವ್ಯಕ್ತಿಗಳ ಅಂತ್ಯ ಸಂಸ್ಕಾರಕ್ಕೆ ಜಾಗ ಸಿಕ್ಕಿಲ್ಲ. ಗ್ರಾಮದಲ್ಲಿ 50ಕ್ಕೂ ಅಧಿಕ ಮುಸ್ಲಿಂ ಕುಟುಂಬಗಳಿದ್ದರೂ ಮೃತರ ಅಂತ್ಯಕ್ರಿಯೆಗೆ ಜಾಗ ಮಾತ್ರ ಸಿಕ್ಕಿಲ್ಲ.
undefined
ಹಲವು ವರ್ಷಗಳಿಂದ ಮುಸ್ಲಿಂ ಸಮುದಾಯದಿಂದ ಬೇಡಿಕೆ ಇಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿ ಆಕ್ರೋಶಗೊಂಡ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಮಾಹಿತಿ ತಿಳಿದು ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದರು.
ಮುಸ್ಲಿಂ ಸಮುದಾಯದ ಸಮಸ್ಯೆಗಳನ್ನ ಅಧಿಕಾರಿಗಳು ಆಲಿಸಿದ್ದಾರೆ. 15 ರಿಂದ 20 ದಿನದಲ್ಲಿ ಸಮಸ್ಯೆ ಬಗೆ ಹರಿಸುವ ವಿಶ್ವಾಸ ನೀಡಿದ್ದಾರೆ ಕಂದಾಯ ಅಧಿಕಾರಿಗಳು. ಅಧಿಕಾರಿಗಳ ಭರವಸೆಯಂತೆ ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.