ಅನ್ ಬಾಕ್ಸಿಂಗ್ ಬಿಎಲ್ಆರ್ ಫೌಂಡೇಷನ್ ವತಿಯಿಂದ ಡಿ.1ರಿಂದ 11ರವರೆಗೆ ನಗರದಾದ್ಯಂತ ‘ಅನ್ ಬಾಕ್ಸಿಂಗ್ ಬೆಂಗಳೂರು ಹಬ್ಬ’ ಆಚರಿಸಲಾಗುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಲಾಂಟಾನ್ ಆನೆಗಳು ಧರೆಗಿಳಿದಿದೆ.
ಬೆಂಗಳೂರು(ಡಿ.1): ಅನ್ ಬಾಕ್ಸಿಂಗ್ ಬಿಎಲ್ಆರ್ ಫೌಂಡೇಷನ್ ವತಿಯಿಂದ ಡಿ.1ರಿಂದ 11ರವರೆಗೆ ನಗರದಾದ್ಯಂತ ‘ಅನ್ ಬಾಕ್ಸಿಂಗ್ ಬೆಂಗಳೂರು ಹಬ್ಬ’ ಆಚರಿಸಲಾಗುತ್ತಿದ್ದು, ಇದರ ಭಾಗವಾಗಿ ಗುರುವಾರ ಚಿಕ್ಕಪೇಟೆಯಲ್ಲಿ ಕೆಂಪೇಗೌಡರ ಎತ್ತಿನ ಬಂಡಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಜನರು ಈ ಹಬ್ಬದಲ್ಲಿ ಪಾಲ್ಗೊಂಡು ಸಂತೋಷ ಪಡಬೇಕು ಎಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಬೆಂಗಳೂರು ವಿಶ್ವಕ್ಕೆ ಮಾದರಿಯಾಗಿದೆ. ಪ್ರಪಂಚದ ಎಲ್ಲ ಜನ ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದ್ದಾರೆ. ಇದಕ್ಕೆ ಕೆಂಪೇಗೌಡರು ಹಾಕಿಕೊಟ್ಟ ಅಡಿಪಾಯ ಕಾರಣ. ಅದನ್ನು ನಾವು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು ಎಂದರು.
ಸಂಸ್ಕೃತಿ ದೇಶದ ಆಸ್ತಿ. ಎಲ್ಲಾ ವರ್ಗದ ಜನ ಸುಭಿಕ್ಷವಾಗಿ ಇರಬೇಕು. ಬೆಂಗಳೂರು ಹಬ್ಬವನ್ನು 11 ದಿನ ಆಚರಿಸಲು ರೂಪಿಸಲಾಗಿದೆ. ಈ ವರ್ಷ ಅವರು ಅವರದೇ ಆದ ರೀತಿಯಲ್ಲಿ ಈ ಹಬ್ಬ ಆಚರಿಸುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ, ಬಿಬಿಎಂಪಿ, ಮೆಟ್ರೋ ಸೇರಿದಂತೆ ಎಲ್ಲಾ ಸಂಸ್ಥೆಗಳು ಸಹಕಾರ ನೀಡುತ್ತಿವೆ. ಎಲ್ಲಾ ಸಂಘಟನೆ ವ್ಯಾಪಾರಿಗಳು ಇದರಲ್ಲಿ ಪಾಲ್ಗೊಂಡು ಸಂಭ್ರಮಿಸಬೇಕು ಎಂದು ಮನವಿ ಮಾಡಿದರು.
undefined
ಕೆಂಪೇಗೌಡರು ಈ ಸ್ಥಳದಿಂದ ನಾಲ್ಕು ದಿಕ್ಕಿಗೆ ನಾಲ್ಕು ಜೋಡಿ ಎತ್ತಿನ ಗಾಡಿಯನ್ನು ತೆಗೆದುಕೊಂಡು ಹೋಗಿದ್ದರು. ಆ ಪದ್ಧತಿ ಮುಂದುವರಿಸಿಕೊಂಡು ಹೋಗುವ ಕೆಲಸ ಮಾಡಲಾಗುತ್ತಿದೆ ಎಂದರು. ಇನ್ನು ಮುಂದಿನ ವರ್ಷದಿಂದ ನಗರದ ಪ್ರತಿ ವಾರ್ಡ್ ಹಾಗೂ ವಿಧಾನಸಭೆ ಕ್ಷೇತ್ರದಲ್ಲಿ ‘ಬೆಂಗಳೂರು ಹಬ್ಬ’ವನ್ನು ಆಯೋಜಿಸಲಾಗುತ್ತದೆ ಎಂದು ಇದೇ ವೇಳೆ ಹೇಳಿದರು.
ಅನ್ ಬಾಕ್ಸಿಂಗ್ ಬಿಎಲ್ಆರ್ ಹಬ್ಬ ಆಚರಣೆಯ ಕುರಿತು https://habba.unboxingblr.com/ ವೆಬ್‌ಸೈಟ್ ನಲ್ಲಿ ಸಂಪೂರ್ಣ ವಿವರಗಳನ್ನು ನಾಗರಿಕರು ಪಡೆಯಬಹುದಾಗಿದೆ.
ಇನ್ನು ಬೆಂಗಳೂರು ಹಬ್ಬಕ್ಕೆ ಸಿಲಿಕಾನ್ ಸಿಟಿಯಲ್ಲಿ ಲಾಂಟಾನ್ ಆನೆಗಳು ಧರೆಗಿಳಿದಿದೆ. ಬೆಂಗಳೂರಿನ ಬ್ರ್ಯಾಂಡ್ ಹೆಚ್ಚಿಸಲು ಬೆಂಗಳೂರು ಹಬ್ಬ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂದೆ ಲಾಂಟರ್ ಆನೆಗಳಿಗೆ ಸಿಟಿ ಜನ ಫಿಧಾ ಆಗಿದ್ದು, ಫೋಟೋ ಸೆರೆ ಹಿಡಿಯಲು ಜನ ಮುಗಿಬಿದ್ದಿದ್ದಾರೆ.
ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ, ಯಾವೆಲ್ಲ ಸ್ಕೂಲ್ ಪಟ್ಟಿ ಇಲ್ಲಿದೆ
ಮಾನವ-ಪ್ರಾಣಿ ಸಹಬಾಳ್ವೆ ಮತ್ತು ಸಂಘರ್ಷದ ಕುರಿತು ಜಾಗೃತಿ ಮೂಡಿಸಲು 2024 ರ ಜನವರಿ 15 ರಿಂದ ಫೆಬ್ರವರಿ 15 ರವರೆಗೆ ಬೆಂಗಳೂರಿನಾದ್ಯಂತ 150 ಲಂಟಾನಾ ಆನೆಗಳ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಮುಂದಿನ ಐದು ದಿನಗಳ ಕಾಲ ಅವುಗಳನ್ನು ಪ್ರದರ್ಶಿಸಲಾಗುತ್ತಿದೆ.