ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ| ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ನಾವು ಕೆಲಸ ಮಾಡುತ್ತೇವೆ| ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಹಲವು ಆಕಾಂಕ್ಷಿಗಳಿರುವುದು ಸಹಜ| ಮಾಜಿ ಸಚಿವ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್‌ಗೆ ರಾಜ್ಯಸಭೆಗೆ ಟಿಕೆಟ್ ನೀಡುವಂತೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ|
ಬೆಳಗಾವಿ(ಮೇ.30):ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಉಮೇಶ್ ಕತ್ತಿ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬೀದಿಯಲ್ಲಿ ಹೇಳಿಕೆ ನೀಡುವುದನ್ನು ಬಿಟ್ಟು ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ನಾವು ಕೆಲಸ ಮಾಡುತ್ತೇವೆ. ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಹಲವು ಆಕಾಂಕ್ಷಿಗಳಿರುವುದು ಸಹಜ. ಮಾಜಿ ಸಚಿವ ಉಮೇಶ್ ಕತ್ತಿ ಅವರು, ತಮ್ಮ ಸಹೋದರ ರಮೇಶ್‌ಗೆ ರಾಜ್ಯಸಭೆಗೆ ಟಿಕೆಟ್ ನೀಡುವಂತೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಪಕ್ಷದ ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಹೇಳಬಾರದು ಎಂದಿದ್ದಾರೆ.
undefined
ಕೊರೋನಾ ಹೋರಾಟ ಬಿಟ್ಟು ಅಧಿಕಾರಕ್ಕೆ ಬಿಜೆಪಿ ಕಚ್ಚಾಟ: ಕಾಂಗ್ರೆಸ್ ಕಿಡಿ
ಉಮೇಶ್ ಕತ್ತಿ ಅವರು ಹಿರಿಯ ನಾಯಕರು. ನನಗೆ ಆಪ್ತರೂ ಆಗಿದ್ದಾರೆ. ತಮ್ಮ ಏನೇ ಬೇಡಿಕೆ ಇದ್ದರೂ ಪಕ್ಷದ ವೇದಿಕೆ ಮೇಲೆ ಮಾತನಾಡಬೇಕು. ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ನೇರವಾಗಿ ಭೇಟಿ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.