ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 1 ರಿಂದ 7 ನೇ ತರಗತಿ ಮಕ್ಕಳಿಗೆ ಉಚಿತ ಬ್ಯಾಗ್‌ಗಳನ್ನು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಈ ವಿತರಣೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ 8 ರಿಂದ 10 ನೇ ತರಗತಿವರೆಗಿನ ಮಕ್ಕಳಿಗೂ ವಿಸ್ತರಿಸಲಾಗುವುದು.
ಶಿವಮೊಗ್ಗ (ಡಿ.06): ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 1 ರಿಂದ 7 ನೇ ತರಗತಿ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ 8ರಿಂದ 10ನೇ ತರಗತಿ ಮಕ್ಕಳಿಗೂ ಉಚಿತ ಸ್ಕೂಲ್ ಬ್ಯಾಗ್ ವಿತರಣೆ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಬಿ.ವೈ. ರಾಘವೇಂದ್ರ ಅವರು 1 ರಿಂದ 7ನೇ ತರಗತಿ ಮಕ್ಕಳಿಗೆ ಬ್ಯಾಗ್ ವಿತರಣೆ ಮಾಡಿದರು. ನಂತರ, ಮಾತನಾಡಿದ ಅವರು, ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಉಚಿತ ಬ್ಯಾಗ್ ವಿತರಣೆ ಮಾಡಲಾಗುತ್ತಿದೆ. ಇದೀಗ ಮೊದಲ ಹಂತದಲ್ಲಿ 1ನೇ ತರಗತಿಯಿಂದ 7ನೇ ತರಗತಿಯ ವರೆಗಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗಿದೆ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು 1 ಲಕ್ಷ ವಿಧ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಲು ಕಾರ್ಯಯೋಜನೆ ಮಾಡಲಾಗಿದೆ. ಮೊದಲ ಹಂತದಲ್ಲಿ 1ರಿಂದ 7ನೇ ತರಗತಿಯ ವರೆಗಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ 8ನೇ ತರಗತಿಯಿಂದ 10ನೇ ತರಗತಿವರೆಗಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಲಾಗುತ್ತದೆ. ಜೊತೆಗೆ ಸ್ವೆಟರ್, ಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ ಎಂಎಲ್ಸಿ ಡಿಎಸ್ ಅರುಣ್, ಕ್ಷೇತ್ರಶಿಕ್ಷಣಾಧಿಕಾರಿ ರಮೇಶ ಉಪಸ್ಥಿತರಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ್ದು ಕಳಪೆ ಬೀಜ; ನಮ್ಮ ತೊಗರಿ ಬೆಳೆ ಕಾಯಿ ಬಿಡ್ತಿಲ್ಲ ಸ್ವಾಮೀ ಎಂದ ರೈತ!
ನಿಮ್ಮ ಸಂಸದರಿಂದಲೂ ಶಾಲಾ ಬ್ಯಾಗ್ ಸಿಕ್ತಾ:
ಕೇಂದ್ರ ಸರ್ಕಾರದ ಯೋಜನೆಯಡಿ ದೇಶದ ಎಲ್ಲ ಮಕ್ಕಳಿಗೂ ಈ ಯೋಜನೆ ಅನ್ವಯ ಆಗಲಿದೆ. ಆದರೆ, ಈ ಯೋಜನೆಯನ್ನು ತಮ್ಮ ಲೋಕಸಭಾ ವ್ಯಾಪ್ತಿಯ ಎಲ್ಲ ಶಾಲಾ ಮಕ್ಕಳಿಗೆ ಸಿಗುವಂತೆ ಮಾಡಬೇಕಿರುವುದು ಆಯಾ ಲೋಕಸಭಾ ಸಂಸದರ ಜವಾಬ್ದಾರಿ ಆಗಿರುತ್ತದೆ. ಇನ್ನು ನಿಮ್ಮ ಮಕ್ಕಳೂ ಕೂಡ ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿದ್ದರೆ ಉಚಿತ ಬ್ಯಾಗ್ ವಿತರಣೆ ಮಾಡಲಾಗಿಯೇ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ. ಇಲ್ಲವೆಂದಾದಲ್ಲಿ ನಿಮ್ಮ ಸಂಸದರನ್ನು ಸಂಪರ್ಕಿಸಿ ನಿಮ್ಮೂರ ಸರ್ಕಾರಿ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್‌ಗಳನ್ನು ಕೊಡುವಂತೆ ಮನವಿ ಮಾಡಬಹುದು.