ಬೀದರ್‌ ಉತ್ಸವ ಅಚ್ಚುಕಟ್ಟಾಗಿ ಆಚರಿಸಿ: ಕೇಂದ್ರ ಸಚಿವ ಖೂಬಾ

Published : Dec 07, 2022, 09:45 PM IST
ಬೀದರ್‌ ಉತ್ಸವ ಅಚ್ಚುಕಟ್ಟಾಗಿ ಆಚರಿಸಿ: ಕೇಂದ್ರ ಸಚಿವ ಖೂಬಾ

ಸಾರಾಂಶ

ಬೀದರ್‌ ಉತ್ಸವ ವಿವಿಧ ಸಮಿತಿಗಳ ಕಾರ್ಯನಿರ್ವಹಣೆ ಕುರಿತು ಸ್ಪಷ್ಟವಾಗಿ ತಿಳಿಸಬೇಕು. ಉತ್ಸವ ಕಾರ್ಯಕ್ರಮಗಳ ವೇಳಾ ಪಟ್ಟಿಯನ್ನು 8 ದಿನಗಳ ಮುಂಚಿತವಾಗಿಯೇ ತಯಾರಿಸಬೇಕು ಯಾವುದೇ ಕಾರಣಕ್ಕೆ ಆ ಕಾರ್ಯಕ್ರಮಗಳಲ್ಲಿ ಮರು ಬದಲಾವಣೆ ಆಗದಂತೆ ನೊಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಹೇಳಿದ ಕೇಂದ್ರ ಸಚಿವ ಭಗವಂತ ಖೂಬಾ 

ಬೀದರ್‌(ಡಿ.07):  ಸಮಿತಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಬೀದರ್‌ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಕೇಂದ್ರ ಸಚಿವರಾದ ಭಗವಂತ ಖೂಬಾ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀದರ್‌ ಉತ್ಸವ ಸಿದ್ಧತೆಗಳ ಕುರಿತು ಕರೆದ ವಿವಿಧ ಸಮಿತಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಿತಿಯ ನೋಡಲ್‌ ಅಧಿಕಾರಿಗಳು ತಮಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯುತವಾಗಿ ಮತ್ತು ಎಲ್ಲರನ್ನೊಳಗೊಂಡು ಕೆಲಸ ಮಾಡಬೇಕು. ಯಾವುದೇ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತರಬೇಕು. ಕಲಾ ತಂಡಗಳ ಮೆರವಣಿಗೆ ಸಂದರ್ಭದಲ್ಲಿ ಒಂದರ ನಂತರ ಒಂದು ತಂಡಗಳು ಜೋಡಿಯಾಗಿ, ಅಚ್ಚುಕಟ್ಟಾಗಿ ಹೋಗುವಂತೆ ನೋಡಿಕೊಳ್ಳಬೇಕು ಮತ್ತು ಇದರಲ್ಲಿ ಸ್ಥಳೀಯ ಕಲಾವಿದರಿಗೇ ಹೆಚ್ಚಿನ ಅವಕಾಶ ನೀಡಬೇಕೆಂದರು.

ಬೀದರ್‌ ಉತ್ಸವ ವಿವಿಧ ಸಮಿತಿಗಳ ಕಾರ್ಯನಿರ್ವಹಣೆ ಕುರಿತು ಸ್ಪಷ್ಟವಾಗಿ ತಿಳಿಸಬೇಕು. ಉತ್ಸವ ಕಾರ್ಯಕ್ರಮಗಳ ವೇಳಾ ಪಟ್ಟಿಯನ್ನು 8 ದಿನಗಳ ಮುಂಚಿತವಾಗಿಯೇ ತಯಾರಿಸಬೇಕು ಯಾವುದೇ ಕಾರಣಕ್ಕೆ ಆ ಕಾರ್ಯಕ್ರಮಗಳಲ್ಲಿ ಮರು ಬದಲಾವಣೆ ಆಗದಂತೆ ನೊಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಹೇಳಿದರು.

ಬಿಜೆಪಿಗೆ ಸೆಡ್ಡು ಹೊಡೆವ ಶಕ್ತಿ ಖರ್ಗೆಗಿದೆ: ಎಂಎಲ್‌ಸಿ ಪಾಟೀಲ್

ಬೀದರ್‌ ದಕ್ಷಿಣ ಶಾಸಕ ಬಂಡೆಪ್ಪ ಖಾಶೆಂಪೂರ ಮಾತನಾಡಿ, ಪಕ್ಕಾ ಬೀದರ್‌ ಭಾಷೆಯಲ್ಲಿಯೇ ಎರಡು ಕಾರ್ಯಕ್ರಮಗಳು ಪ್ರತಿದಿನ ನಡೆಯಬೇಕು. ಆಹಾರ ಮೇಳದಲ್ಲಿ ನಮ್ಮ ಭಾಗದ ಸ್ಥಳೀಯವಾಗಿರುವ ವಿಶೇಷ ಆಹಾರಗಳಾದ ಬಿರಿಯಾನಿ ಮತ್ತು ಗಾಣದಉಂಡಿ ಸೇರಿದಂತೆ ಇತರೆ ಆಹಾರಗಳ ಪ್ರದರ್ಶನ ಇರಬೇಕು ಮತ್ತು ಕಾರ್ಯಕ್ರಮಗಳು ನಿಗದಿಪಡಿಸಿದ ಸಮಯದಲ್ಲಿಯೇ ನಡೆಸಬೇಕೆಂದರು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ಸ್ಥಳೀಯ ಕಲಾವಿದರಿಗೆ ಸಂಜೆ 5.30 ರಿಂದ 7.15 ರವರೆಗೆ ಪ್ರತಿದಿನ ಮುಖ್ಯ ವೇದಿಕೆಯಲ್ಲಿ ಕಾರ್ಯಕ್ರಮಗಳನ್ನು ನಡೆಸಿಕೊಡಲು ವೇದಿಕೆ ಕಲ್ಪಿಸಲಾಗುತ್ತದೆ. ಆಯಾ ತಾಲೂಕಿನ ಕಲಾ ತಂಡಗಳ ಆಯ್ಕೆಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಗಿರುತ್ತದೆಂದು ಹೇಳಿದರು.

ಡಿ.10ಕ್ಕೆ ಕಲಬುರಗಿಯಲ್ಲಿ ಖರ್ಗೆ ಅಭಿನಂದನಾ ಸಮಾರಂಭ: ಈಶ್ವರ ಖಂಡ್ರೆ

ಬೀದರ್‌ ನಗರಾಭಿವೃದ್ಧಿ ಪ್ರಾಧಿ​ಕಾರದ ಅಧ್ಯಕ್ಷ ಬಾಬು ವಾಲಿ ಮಾತನಾಡಿ, ಜಿಲ್ಲೆಯ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಂಘ ಸಂಸ್ಥೆಗಳು ಸೇರಿದಂತೆ ಒಟ್ಟು 25 ಸಾವಿರ ಜನರು ಪಾರಂಪರಿಕ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಹೇಳಿದರು.

ಸಭೆಯಲ್ಲಿ ಶಾಸಕ ರಹೀಮ ಖಾನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿ​ಕಾರಿ ಡೆಕ್ಕಾ ಕಿಶೋರ್‌ ಬಾಬು, ಜಿಪಂ ಸಿಇಓ ಶಿಲ್ಪಾ ಎಂ., ಅಪರ ಜಿಲ್ಲಾಧಿ​ಕಾರಿ ಶಿವಕುಮಾರ ಶೀಲವಂತ, ಸಹಾಯಕ ಆಯುಕ್ತರಾದ ಲವೀಶ್‌ ಓರ್ಡಿಯಾ, ಬೀದರ್‌ ಉತ್ಸವ ವಿವಿಧ ಸಮಿತಿಗಳ ನೋಡಲ್‌ ಅ​ಧಿಕಾರಿಗಳು ಮತ್ತು ಸದಸ್ಯರು ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿ​ಕಾರಿಗಳು ಭಾಗವಹಿಸಿದ್ದರು.
 

PREV
Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC