ಮಂಡ್ಯ ನಗರಕ್ಕೆ ರಿಂಗ್ ರಸ್ತೆ ನಿರ್ಮಾಣ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ!

Published : Jul 09, 2024, 04:04 PM IST
ಮಂಡ್ಯ ನಗರಕ್ಕೆ ರಿಂಗ್ ರಸ್ತೆ ನಿರ್ಮಾಣ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ!

ಸಾರಾಂಶ

ಸಕ್ಕರೆ ನಾಡು ಮಂಡ್ಯ ನಗರಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಭಾರಿ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಸ್ತಾವನೆ ಸಲ್ಲಿಸಿದರು.

ನವದೆಹಲಿ (ಜು.09): ಸಕ್ಕರೆ ನಾಡು ಮಂಡ್ಯ ನಗರಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಭಾರಿ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಸ್ತಾವನೆ ಸಲ್ಲಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವ ಸಂಪುಟದಲ್ಲಿ ಭಾರಿ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮುಂದೆ ಮಂಡ್ಯ ನಗರದ ಸುತ್ತಲೂ ಹೊರ ವರ್ತುಲ ರಸ್ತೆ (Outer ring road) ನಿರ್ಮಾಣ ಮಾಡುವಂತೆ ಪ್ರಸ್ತಾವನೆ ಸಲ್ಲಿಕೆ ಮಾಡಿದರು.

ಮಂಗಳವಾರ ದೆಹಲಿಯ ಭವನದಲ್ಲಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದ 'ಎಕ್ಸ್‌'ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, 'ಕರ್ನಾಟಕದಲ್ಲಿ ಬಾಕಿ ಇರುವ ಸಾರಿಗೆ, ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸಿವುದು, ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು.

ಮಂಜಿನ ನಗರಿ ಮಡಿಕೇರಿಯಲ್ಲಿ ಹಾಸನದ 19 ವರ್ಷದ ಯುವತಿ ಇಟ್ಟುಕೊಂಡು ನಕಲಿ ವೇಶ್ಯಾವಾಟಿಕೆ

ಮಂಡ್ಯ ನಗರದ ಹೊರ ವರ್ತುಲ ರಸ್ತೆ ಹಾಗೂ ಹಲಗೂರು - ಕೆ.ಎಂ.ದೊಡ್ಡಿ ರಸ್ತೆಯನ್ನು ಮೇಲ್ದರ್ಜೆಗೇರಿಸಿ ರಾಷ್ಟ್ತ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಯೋಜನೆಯ ಬಗ್ಗೆಯೂ  ಚರ್ಚಿಸಲಾಯಿತು. ಮಾನ್ಯ ಸಚಿವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಈ ವೇಳೆ ಕೋಲಾರ ಸಂಸದ ಮಲ್ಲೇಶ್ ಬಾಬು ನನ್ನ ಜತೆಯಲ್ಲಿದ್ದರು ಎಂದು ಬರೆದುಕೊಂಡಿದ್ದಾರೆ.

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ