ಮೈಕ್ರೋಫೈನಾನ್ಸ್ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ: ಕೇಂದ್ರ ಸಚಿವ ಕುಮಾರಸ್ವಾಮಿ

Published : Jan 25, 2025, 11:34 AM IST
ಮೈಕ್ರೋಫೈನಾನ್ಸ್ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ: ಕೇಂದ್ರ ಸಚಿವ ಕುಮಾರಸ್ವಾಮಿ

ಸಾರಾಂಶ

ಕಳೆದ 1 ತಿಂಗಳಿನಿಂದ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಮಸ್ಯೆ ಇದೆ. ಜನರು ಹಳ್ಳಿ ಹಳ್ಳಿಯನ್ನ ಬಿಟ್ಟು ಹೋಗುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಈ ಸಮಸ್ಯೆ ಇದೆ. ಮೈಕ್ರೋಫೈನಾನ್ಸ್ ನವರು ಜನ ಸಾಮಾನ್ಯರ ಮೇಲೆ ಕಿರುಕುಳ ಕೊಡುತ್ತಿದ್ದಾರೆ. ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ. ಜನರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದ ಎಚ್.ಡಿ. ಕುಮಾರಸ್ವಾಮಿ

ಮೈಸೂರು(ಜ.25):  ಮೈಕ್ರೋಫೈನಾನ್ಸ್ ಯಾವುದೇ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ. ಯಾವ ರೀತಿ ಅವರ ಮೇಲೆ ಕಡಿವಾಣ ಹಾಕಿದ್ದೀರಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 1 ತಿಂಗಳಿನಿಂದ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಮಸ್ಯೆ ಇದೆ. ಜನರು ಹಳ್ಳಿ ಹಳ್ಳಿಯನ್ನ ಬಿಟ್ಟು ಹೋಗುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಈ ಸಮಸ್ಯೆ ಇದೆ. ಮೈಕ್ರೋಫೈನಾನ್ಸ್ ನವರು ಜನ ಸಾಮಾನ್ಯರ ಮೇಲೆ ಕಿರುಕುಳ ಕೊಡುತ್ತಿದ್ದಾರೆ. ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ. ಜನರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಜಿ.ಟಿ.ದೇವೇಗೌಡರಿಗೆ ಆಮೇಲೆ ನಮ್ಮ ಶಕ್ತಿ ತೋರಿಸುವೆ: ಕೇಂದ್ರ ಸಚಿವ ಕುಮಾರಸ್ವಾಮಿ

ಬಾಣಂತಿರಯರ ಸಾವು ಆಗಿದೆ. ಏನು ಕ್ರಮ ಆಗಿದೆ? ಕಳಪೆ ಔಷಧಿಯ ಬಗ್ಗೆ ಏನು ಕ್ರಮ ತೆಗದುಕೊಂಡಿದ್ದೀರಾ? ಕೇವಲ ಕುರ್ಚಿಗಾಗಿ ಚರ್ಚೆ ಆಗುತ್ತಿದೆ. ಎಷ್ಟು ದಿನ ಇರ್ತೀರಾ ಅನ್ನುವುದು ಮುಖ್ಯವಲ್ಲ‌. ದೇವರಾಜ ಅರಸು ಅವರಿಗೆ ಸರಿಸಮಾನಗಿ ಅಂಥ ಸಿದ್ದರಾಮಯ್ಯ ಹೇಳ್ತಾರೆ. ಇನ್ನೂ ಐದು ವರ್ಷ ನೀವೇ ಅಧಿಕಾರದಲ್ಲಿರಿ, ಮುಂದೆಯೂ ನೀವೇ ಇರಿ, ಜನರಿಗೆ ಕೊಡುತ್ತಿರುವ ಸಾಲದ ಹೊರೆಯನ್ನು ಕಡಿಮೆ ಮಾಡಿ. 2 ಸಾವಿರದಿಂದ ಬಡವರನ್ನ ಆರ್ಥಿಕವಾಗಿ ಬೆಳಸುತ್ತೇವೆ ಅಂತೀರುವುದು ಇದೇನಾ ಎಂದು ಅವರು ಪ್ರಶ್ನಿಸಿದರು.

ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಿದ್ದೇನೆ. 2018ರಲ್ಲಿ ಖುಣಮುಕ್ತ ಕಾಯ್ದೆ ಜಾರಿಗೆ ತಂದಿದ್ದೇನೆ‌. ವಿಧಾನಸಭೆಯಲ್ಲಿ ಬಿಲ್ ಸಹ ಪಾಸ್ ಆಗಿದೆ. ರಾಷ್ಟ್ರಪತಿಗಳ ಬಳಿಗೆ ನಾನೇ ಹೋಗಿ ಅಂಕಿತ ತೆಗದುಕೊಂಡು ಬಂದೆ. ಆದರೆ, ಬಿಲ್ ಏನಾಯ್ತು? ಬಂಡೆಪ್ಪ ಕಾಂಶಪೂರು ಕೇರಳಕ್ಕೆ ಕಳುಹಿಸಿ ಈ ಬಗ್ಗೆ ಸಾಕಷ್ಟು ಮಾಹಿತಿ ಕಲೆ ಹಾಕಿದೆ. ಮಂಡ್ಯ ಜಿಲ್ಲೆಯಲ್ಲಿ 60ರಲ್ಲಿ 14ಕ್ಕೆ ಮಾತ್ರ ಲೈಸೆನ್ಸ್ ಪಡೆದಿರುವ ಮೈಕ್ರೋಫೈನಾನ್ಸ್ ಇದೆ ಎಂದು ಅವರು ತಿಳಿಸಿದರು.
ದಾವೋಸ್ ಗೆ ಹೋಗಲು ಬಜೆಟ್ ಪ್ರಿಪರೇಷನ್ ಮಾಡುತ್ತಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಎಲ್ಲಾ ರಾಜ್ಯದ ಪ್ರಮುಖರು ದಾವೋಸ್ ಗೆ ಹೋಗಿ ಬಂಡವಾಳ ತರುತ್ತಿದ್ದಾರೆ. ನೀವು ಏನ್ ಮಾಡುತ್ತಾ ಇದ್ದೀರಾ ಎಂದು ಅವರು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ

ಮೈಸೂರು: ಕಾಂಗ್ರೆಸ್ ನವರಿಗೆ ನಾಡಿನ ಜನತೆ ಒಳ್ಳೆ ಕೆಲಸ ಮಾಡಿ ಅಂಥ ಅಧಿಕಾರ ಕೊಟ್ಟಿದ್ದಾರೆ. ಕಳೆದ 18 ತಿಂಗಳಿನಿಂದ ಅವರ ನಡವಳಿಕೆ ನೋಡಿದರೆ ರಾಜ್ಯದ ಜನತೆಯ ಸಮಸ್ಯೆಗೆ ಪರಿಹಾರ ತರವು ರೀತಿ ಕಾಣುತ್ತಿಲ್ಲ. ವಿರೋಧ ಪಕ್ಷಗಳನ್ನ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಕ್ಕೆ ಕರ್ನಾಟಕಕ್ಕೆ ಒಳ್ಳೆಯ ಹೆಸರಿದೆ. ಅದನ್ನು ಸರ್ವನಾಶ ಮಾಡಲು ಹೊರಟ್ಟಿದ್ದಾರೆ. ಇಡೀ ದೇಶದಲ್ಲೇ ಕರ್ನಾಟಕ ರಾಜ್ಯ ಮಾದರಿ ರಾಜ್ಯವಾಗಿತ್ತು ಎಂದರು.
ಸಿಎಂ ನಾವೆಲ್ಲ ಒಂದಾಗಿದ್ದೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರಿಗೋಸ್ಕರ ಒಂದಾಗಿದ್ದಾರೆ‌. ಅಧಿಕಾರಕ್ಕೆ ಮತ್ತು ಕುರ್ಚಿಗಾಗಿ ಮಾತ್ರ ಒಂದಾಗುತ್ತಿದ್ದಾರೆ. ಜನರು ಕುರ್ಚಿ ಕೊಟ್ಟಿದ್ದಾರೆ. ಜನರಿಗೆ ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಭೇಟಿಗೆ ಅವಕಾಶ ನಿರಾಕರಣೆ; ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!

ನಮ್ಮ ಶಕ್ತಿ ಆಮೇಲೆ ತೋರಿಸ್ತೀವಿ

ತಮ್ಮ ಮೇಲೆ ಕ್ರಮ ಕೈಗೊಳ್ಳಲು ಧಂ ಬೇಕು ಎಂಬ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಅವರು ದೊಡ್ಡವರು ಇದ್ದಾರೆ ಪಾರ್ಟಿಯಲ್ಲಿ ಆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ಶಕ್ತಿ ಆಮೇಲೆ ತೋರಿಸ್ತೀವಿ ಎಂದರು.

ಶ್ರೀರಾಮುಲು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವುದಿಲ್ಲ

ಶ್ರೀರಾಮುಲು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ಕಲಹ ಬಿಜೆಪಿಯ ಆಂತರಿಕ ಕಲಹ. ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಇಬ್ಬರು ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತರು, ಅಣ್ಣ ತಮ್ಮಂದಿರಕ್ಕಿಂತ ಚೆನ್ನಾಗಿದ್ದವರು. ಇಬ್ಬರ ಜಗಳವನ್ನು ಬಿಜೆಪಿಯ ನಾಯಕರೇ ಕುಳಿತು ಪರಿಹರಿಸಬೇಕು. ಈ ಬಗ್ಗೆ ನಾನು ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ. ಶ್ರೀರಾಮುಲು ನನ್ನ ಅಭಿಪ್ರಾಯದಲ್ಲಿ ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದರು.

PREV
Read more Articles on
click me!

Recommended Stories

ಕಸ್ತೂರಿ ರಂಗನ್ ವರದಿ ಸಾರಸಗಟು ತಿರಸ್ಕಾರಕ್ಕೆ ಯದುವೀರ್ ಅಸಮಾಧಾನ; ಸರ್ಕಾರದ ವಿರುದ್ಧ ವಾಗ್ದಾಳಿ
Success Story: 71 ಬಾರಿ ವರ್ಗಾವಣೆಯಾದರೂ ಮಂಡಿಯೂರದ ಐಎಎಸ್‌/ಐಪಿಎಸ್‌ ಆಫೀಸರ್ಸ್‌; ಅದರಲ್ಲೊಬ್ಬ ಕನ್ನಡತಿ!