ಭಗವಂತ ನಮ್ಮಿಂದ ಒಳ್ಳೆ ಕೆಲಸ ಮಾಡಲು ಶಕ್ತಿ ಕೊಡು ಎಂದು ಕೇಳಿದ್ದೇನೆ. ಈ ಬಾರಿ ನನ್ನ ಮಗ ಚುನಾವಣೆಗೆ ನಿಂತಿದ್ದಾನೆ. ಕೆಲ ಕಾರಣಗಳಿಂದ ಕಳೆದ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದಾನೆ. ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸುವಂತೆ ಹಾಸನಾಂಬೆಯಲ್ಲಿ ಬೇಡಿಕೊಂಡಿದ್ದೇನೆ ಎಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಹಾಸನ(ಅ.27): ಪ್ರತಿವರ್ಷ ಹಾಸನಾಂಬೆ ನಾಡಿನ ಜನತೆಗೆ ವಿಶೇಷ ದರ್ಶನವನ್ನ ನಾವು ನೋಡಿದ್ದೇವೆ. ಈ ಬಾರಿ ಹಾಸನ ಜಿಲ್ಲಾಡಳಿತದಿಂದ ಉತ್ತಮವಾಗಿ ವ್ಯವಸ್ಥೆ ಕಲ್ಪಿಸಿ ದರ್ಶನಕ್ಕೆ ಅವಕಾಶ ಮಾಡಿದೆ. ಭಕ್ತರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಇಂದು(ಭಾನುವಾರ) ಹಾಸನಾಂಬೆ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, ಹಾಸನಾಂಬೆ ಪವಾಡವನ್ನ ನಾವು ಚಿಕ್ಕಮಕ್ಕಳಿಂದ ಗಮನಿಸಿದ್ದೇವೆ. ನಮ್ಮ ಚಿಕ್ಕವಯಸ್ಸಿನಲ್ಲಿ ಒಂದುವರೆ ತಿಂಗಳು ಜಾತ್ರೆ ನಡೆಯುತ್ತಿತ್ತು. ರೈತ ಬಂಧುಗಳು ಉತ್ತಮ ರೀತಿಯಲ್ಲಿ ಬದುಕು ನಡೆಸುವಂತಾಗಲಿ. ಮಳೆ, ಬೆಳೆ ಎಲ್ಲವೂ ಚನ್ನಾಗಿ ಆಗಿ ನೆಮ್ಮದಿಯ ಬದುಕು ಸಿಗುವಂತಾಗಲಿ. ನಮ್ಮ ಹಳೆಯ ಸಂಪ್ರದಾಯದಂತೆ ಬಂಧು ಬಾಂಧವರು ಉತ್ತಮ ಸಂಬಂಧ ಇಟ್ಟುಕೊಳ್ಳುವಂತಾಗಲಿ. ದೇವರ ಆಶೀರ್ವಾದದಿಂದ ನಮ್ಮ ಬೇಡಿಕೆಗಳು ಈಡೇರುತ್ತವೆ ಎಂದು ತಿಳಿಸಿದ್ದಾರೆ.
ಮಗನನ್ನು ನಿಲ್ಲಿಸಲು ಎಚ್‌ಡಿಕೆ ತಂತ್ರಗಾರಿಕೆ: ಯೋಗಿ ಹೊರಹಾಕಿ ಕಾಂಗ್ರೆಸ್ ಮೇಲೆ ದೂಷಣೆ, ಡಿ.ಕೆ. ಸುರೇಶ್
ಭಗವಂತ ನಮ್ಮಿಂದ ಒಳ್ಳೆ ಕೆಲಸ ಮಾಡಲು ಶಕ್ತಿ ಕೊಡು ಎಂದು ಕೇಳಿದ್ದೇನೆ. ಈ ಬಾರಿ ನನ್ನ ಮಗ ಚುನಾವಣೆಗೆ ನಿಂತಿದ್ದಾನೆ. ಕೆಲ ಕಾರಣಗಳಿಂದ ಕಳೆದ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದಾನೆ. ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸುವಂತೆ ಹಾಸನಾಂಬೆಯಲ್ಲಿ ಬೇಡಿಕೊಂಡಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.