ಸರ್ಕಾರದ ಶ್ವಾಸಕೋಶ ಗಟ್ಟಿಯಾಗಿದೆ, ಸಹಜವಾಗಿ ಉಸಿರಾಡುತ್ತಿದೆ: ಜೋಶಿ

Kannadaprabha News   | Asianet News
Published : Jun 28, 2021, 01:52 PM ISTUpdated : Jun 28, 2021, 02:16 PM IST
ಸರ್ಕಾರದ ಶ್ವಾಸಕೋಶ ಗಟ್ಟಿಯಾಗಿದೆ, ಸಹಜವಾಗಿ ಉಸಿರಾಡುತ್ತಿದೆ: ಜೋಶಿ

ಸಾರಾಂಶ

* ಬಿಜೆಪಿಯಲ್ಲಿ ಆಂತರಿಕ ಕಚ್ಚಾಟವಿಲ್ಲ * ಯೋಗೀಶ್ವರ್‌ ಪರೀಕ್ಷೆ ಬರೆದ ವಿವಿಯ ಕುಲಪತಿ ಅರುಣ್‌ ಸಿಂಗ್‌ ಸರಿಯಾಗಿ ಉತ್ತರ ಕೊಟ್ಟಿದ್ದಾರೆ  * ಪ್ರಧಾನಿ ತೀರ್ಮಾನಿಸಿದಾಗ ಸಂಪುಟ ವಿಸ್ತರಣೆ  

ಧಾರವಾಡ(ಜೂ.28): ಸರ್ಕಾರ ಸಹಜವಾಗಿ ಉಸಿರಾಡುತ್ತಿದೆ. ಶ್ವಾಸಕೋಶಗಳು ತುಂಬಾನೇ ಗಟ್ಟಿಯಾಗಿವೆ. ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. 

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯಲ್ಲಿ ಆಂತರಿಕ ಕಚ್ಚಾಟವಿಲ್ಲ. ಎಲ್ಲವನ್ನೂ ರಾಜಕೀಯ ಅಂದರೆ ಹೇಗೆ ಎಂದು ಪ್ರಶ್ನಿಸಿದರು. ಸಚಿವ ಸಿ.ಪಿ.ಯೋಗೀಶ್ವರ್‌ ಪರೀಕ್ಷೆ ಬರೆದ ವಿವಿಯ ಕುಲಪತಿ ಅರುಣ್‌ ಸಿಂಗ್‌ ಸರಿಯಾಗಿ ಉತ್ತರ ಕೊಟ್ಟಿದ್ದಾರೆ ಎಂದು ಯೋಗೀಶ್ವರಗೆ ಕುಟುಕಿದ್ದಾರೆ. 

'ಸಿಎಂ ಸ್ಥಾನ ಖಾಲಿ ಇಲ್ಲ‌ ಎನ್ನುತ್ತ ಬೋರ್ಡ್ ಹಾಕಿಕೊಂಡು ಓಡಾಡಬೇಕಿದೆ'

ಇನ್ನು ಕೇಂದ್ರ ಸಚಿವ ಸ್ಥಾನದ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ತೀರ್ಮಾನಿಸಿದಾಗ ವಿಸ್ತರಣೆಯಾಗುತ್ತದೆ. ಪ್ರಧಾನಿ ತೀರ್ಮಾನದ ಮೇಲೆ ವಿಸ್ತರಣೆ. ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳುತ್ತಾರೆ ಎಂಬುದು ಮೊದಲೇ ನಮ್ಮ ಸರ್ಕಾರದಲ್ಲಿ ಗೊತ್ತಾಗುವುದಿಲ್ಲ. ಅದರ ಬಗ್ಗೆ ತಾವು ಮಾತನಾಡಲು ಅರ್ಹರೂ ಅಲ್ಲ ಎಂದರು.
 

PREV
click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!