ನಿಯಮ ಉಲ್ಲಂಘಿಸಿ ಸತ್ತರೆ ಅವರು ಸಾಯ್ತಾರೆ ನಾವೇಕೆ ತಲೆ ಕೆಡಿಸಿಕೊಳ್ಳಬೇಕು: ಕೇಂದ್ರ ಸಚಿವ

By Kannadaprabha NewsFirst Published Apr 25, 2020, 10:03 AM IST
Highlights

ಸಾಮಾಜಿಕ ಅಂತರ ಕಾಯ್ದುಕೊಂಡು ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ ಅಂತಾ ಹೇಳಿದ್ದೇವೆ| ಇಷ್ಟು ಹೇಳಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಜವಾಬ್ದಾರಿ ಯಾರ ತಗೋಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ ಕೇಂದ್ರ ಸಚಿವ ಸುರೇಶ್‌ ಅಂಗಡಿ|

ಬೆಳಗಾವಿ(ಏ.25):  ಈಗಾಗಲೇ ವಾರ್ನಿಂಗ್‌ ಮಾಡಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಹೇಳಿದ್ದೇವೆ. ಆದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಸತ್ತರೆ ಅವರು ಸಾಯ್ತಾರೆ. ನ್ಯಾವೇಕೆ ತಲೆ ಕಡೆಸಿಕೊಳ್ಳಬೇಕು ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್‌ ಅಂಗಡಿ ಹೇಳಿದ್ದಾರೆ.

ಕೊರೋನಾ ​ಸೋಂಕಿತರು ಆಸ್ಪತ್ರೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲವೆಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾಮಾಜಿಕ ಅಂತರ ಕಾಯ್ದುಕೊಂಡು ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ ಅಂತಾ ಹೇಳಿದ್ದೇವೆ. ಇಷ್ಟು ಹೇಳಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಜವಾಬ್ದಾರಿ ಯಾರ ತಗೋಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಕೊರೋನಾ ಭೀತಿ: ಉಗುಳಿದ್ದ ವ್ಯಕ್ತಿಯಿಂದಲೇ ಜಾಗ ಸ್ವಚ್ಛಗೊಳಿಸಿದ ಅಧಿಕಾರಿಗಳು

ಮಹಾಮಾರಿ ಕೊರೋನಾ ಸೋಂಕಿನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಬಾರಿ ಮನವಿ ಮಾಡಿಕೊಂಡಿವೆ.ಆದರೂ ಕೂಡ ಜನರು ಇದರ ಬಗ್ಗೆ ತಲೆಕೆಸಿಕೊಳ್ಳುತ್ತಿಲ್ಲ. ಹೀಗಾಗಿ ಸಚಿವ ಸುರೇಶ್‌ ಅಂಗಡಿ ಈ ರೀತಿಯಾಗಿ ಹೇಳಿಕೆಯನ್ನ ಕೊಟ್ಟಿದ್ದಾರೆ. 

click me!