
ಬಿಡದಿ [ಜ.20]: ಸಾಮಾಜಿಕ ಹೋರಾಟಗಾರ ಎಸ್. ಆರ್. ಹಿರೇಮಠ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಲು ಯತ್ನಿಸಿದ್ದಾರೆ.
ರಾಮನಗರ ಜಿಲ್ಲೆ ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ಎಸ್.ಆರ್.ಹಿರೇಮಠ್ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರ ಕೇತಿಗಾನಗಳ್ಳಿ ಜಮೀನು ವಿಚಾರವಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಹಲವು ಬಾರಿ ವಿಚಾರಣೆಯನ್ನು HDK ಎದುರಿಸಿದ್ದರು.
ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಸಂಸದ ಡಿ.ಕೆ.ಸುರೇಶ್..
ಇದೇ ವಿಚಾರದ ಬಗ್ಗೆ ಸ್ಥಳದಲ್ಲಿ ಜನರಿಂದ ಅಭಿಪ್ರಾಯ ಸಂಗ್ರಹಿಸಿಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿ ಕೃಷ್ಣಾ ರೆಡ್ಡಿ ಅವರೊಂದಿಗೆ ಸ್ಥಳಕ್ಕೆ ತೆರಳಿದ್ದ ವೇಳೆ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಗಳು ಹಿರೇಮಠ್ ಅವರ ಕಾರು ಚಕ್ರದ ಗಾಳಿಯನ್ನು ತೆಗೆದಿದ್ದು, ಹಲ್ಲೆ ನಡೆಸಲು ಮುಂದಾಗಿದ್ದಾರೆ.
ರಾಮನಗರಕ್ಕಾಗಿ ಒಂದಾದ ಜನ : ಒಗ್ಗಟ್ಟಿನ ನಿರ್ಣಯ..
ತಕ್ಷಣವೇ ಹಿರೇಮಠ್ ಸ್ಥಳದಿಂದ ತೆರಳಿದ್ದಾರೆ. ಈ ಸಂಬಂಧ ಬಿಡದಿ ಠಾಣೆಯಲ್ಲಿ ದೂರು ದಾಖಲಗಿದೆ.