Karnataka Politics: ಕಾಂಗ್ರೆಸ್‌ ಸದಸ್ಯರ ವಿರುದ್ಧ ಅವಾಚ್ಯ ಪದಬಳಕೆ

By Kannadaprabha News  |  First Published Feb 11, 2023, 5:20 AM IST

ನಗರಸಭೆಯ ಕಾಂಗ್ರೆಸ್‌ ಪಕ್ಷದ ಸದಸ್ಯರ ಮೇಲೆ ಅವಾಚ್ಯ ಶಬ್ದ ಬಳಸಿರುವ ಆಡಿಯೋ ವೈರಲ್‌ ಆಗಿದ್ದು, ಈ ರೀತಿ ಶಬ್ದ ಬಳಸಿ ಮಾತನಾಡಿರುವವರ ಬಗ್ಗೆ ತನಿಖೆ ಮಾಡಿಸಿ ಅವರ ಸದಸ್ಯತ್ವ ರದ್ದುಪಡಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್‌ ಪಕ್ಷದ ನಗರಸಭೆ ಸದಸ್ಯರಾದ ಲಕ್ಷ್ಮೇಕಾಂತ್‌, ಅಜಯ್‌ಕುಮಾರ್‌, ಶಂಕರಪ್ಪ ಅವರು ಆಗ್ರಹಿಸಿದ ಘಟನೆ ನಡೆಯಿತು.


  ಶಿರಾ :  ನಗರಸಭೆಯ ಕಾಂಗ್ರೆಸ್‌ ಪಕ್ಷದ ಸದಸ್ಯರ ಮೇಲೆ ಅವಾಚ್ಯ ಶಬ್ದ ಬಳಸಿರುವ ಆಡಿಯೋ ವೈರಲ್‌ ಆಗಿದ್ದು, ಈ ರೀತಿ ಶಬ್ದ ಬಳಸಿ ಮಾತನಾಡಿರುವವರ ಬಗ್ಗೆ ತನಿಖೆ ಮಾಡಿಸಿ ಅವರ ಸದಸ್ಯತ್ವ ರದ್ದುಪಡಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್‌ ಪಕ್ಷದ ನಗರಸಭೆ ಸದಸ್ಯರಾದ ಲಕ್ಷ್ಮೇಕಾಂತ್‌, ಅಜಯ್‌ಕುಮಾರ್‌, ಶಂಕರಪ್ಪ ಅವರು ಆಗ್ರಹಿಸಿದ ಘಟನೆ ನಡೆಯಿತು.

ನಗರದ ನಗರಸಭಾ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ನಗರಸಭೆಯ ಕಾಂಗ್ರೆಸ್‌ ಸದಸ್ಯರನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳನ್ನು ಬಳಸಿ ಆಶ್ಲೀಲವಾಗಿ ಮಾತನಾಡಿರುವ ಆಡಿಯೋ ವೈರಲ್‌ ಆಗಿದ್ದು, ಈ ರೀತಿ ಮಾತನಾಡಿರುವವರ ವಿರುದ್ಧ ಕ್ರಮ ಕೈಗೊಳ್ಳದೆ ಸಭೆಯನ್ನು ನಡೆಸಲು ಬಿಡುವುದಿಲ್ಲ ಎಂಬು ಪಟ್ಟು ಹಿಡಿದರು. ಇದಕ್ಕೆ ಉತ್ತರಿಸಿದ ನಗರಸಭಾ ಸದಸ್ಯರಾದ ಬಿ.ಅಂಜಿನಪ್ಪ ಅವರು ಒಂದು ವಾರ ಸಮಯಾವಕಾಶ ನೀಡಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನಂತರ ಸಭೆಯನ್ನು ಒಂದು ವಾರಗಳ ಕಾಲ ಮುಂದೂಡಲಾಯಿತು.

Tap to resize

Latest Videos

ಸಾಮಾನ್ಯ ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಅಂಬುಜಾಕ್ಷಿ ನಟರಾಜ್‌, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್‌.ಎಲ್‌.ರಂಗನಾಥ್‌, ಪೌರಾಯುಕ್ತ ಶ್ರೀನಿವಾಸ್‌ ಸೇರಿದಂತೆ ಹಲವು ಸದಸ್ಯರು ಹಾಜರಿದ್ದರು.

ಬೊಮ್ಮಾಯಿ ವಿರುದ್ಧ ಸ್ಪರ್ಧೆಗೆ 14 ಮಂದಿ

ಹಾವೇರಿ : ರಾಜ್ಯದ ಸಿಎಂ ತವರು ಕ್ಷೇತ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಮತ್ತೊಮ್ಮೆ ಈ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದು ಬಹುತೇಕ ನಿಶ್ಚಿತವಾಗಿದ್ದು, ಕ್ಷೇತ್ರಕ್ಕೆ ಸ್ಟಾರ್‌ ವ್ಯಾಲ್ಯೂ ತಂದುಕೊಟ್ಟಿದೆ. ಕ್ಷೇತ್ರದಲ್ಲಿ ಅಭಿವೃದ್ಧಿಗೆ ಹರಿಸಿದ ಅನುದಾನದ ಹೊಳೆ, ಸಿಎಂ ಪ್ರತಿನಿಧಿಸುವ ಕ್ಷೇತ್ರ ಎಂಬ ಅಂಶ ಬಿಜೆಪಿಗೆ ನೆಲೆ ಭದ್ರಗೊಳಿಸಿದ್ದರೆ, ಎದುರಾಳಿ ಕಾಂಗ್ರೆಸ್‌ನಲ್ಲಿ ಹೊಂದಾಣಿಕೆ ಇಲ್ಲದಿರುವುದು ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಬೊಮ್ಮಾಯಿ ಪಾಲಿಗೆ ವರದಾನವಾಗಿ ಪರಿಣಮಿಸಿದೆ.

ಕಟೀಲ್ ಅನ್ನುವ ಹೆಸರು ಬದಲು ಪಿಟೀಲು ಅಂತಾ ಇಟ್ಟುಕೊಳ್ಳಲಿ: ಎಚ್.ಡಿ.‌ಕುಮಾರಸ್ವಾಮಿ

ಪಕ್ಷದ ಟಿಕೆಟ್‌ಗಾಗಿ ಬೊಮ್ಮಾಯಿಗೆ ಕ್ಷೇತ್ರದಲ್ಲಿ ಪೈಪೋಟಿಯಿಲ್ಲ. ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿರುವ ಬೊಮ್ಮಾಯಿಗೆ ಟಕ್ಕರ್‌ ಕೊಡಲು ಕಾಂಗ್ರೆಸ್‌ನಿಂದ 14 ಅಭ್ಯರ್ಥಿಗಳು ರೆಡಿಯಾಗಿದ್ದಾರೆ. ಬೊಮ್ಮಾಯಿ ಎದುರು ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಿ ಅವರನ್ನು ಕ್ಷೇತ್ರದಲ್ಲೇ ಕಟ್ಟಿಹಾಕಲು ಕಾಂಗ್ರೆಸ್‌ ತಂತ್ರ ರೂಪಿಸುವ ಸಾಧ್ಯತೆಯಿದೆ. ಹಿಂದಿನ ಮೂರು ಚುನಾವಣೆಗಳಲ್ಲಿ ಬೊಮ್ಮಾಯಿಗೆ ಪೈಪೋಟಿ ನೀಡಿದ್ದ ಅಜ್ಜಂಫೀರ್‌ ಖಾದ್ರಿ ಮತ್ತೊಮ್ಮೆ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಸತತ ನಾಲ್ಕು ಸೋಲಿನಿಂದ ಕಂಗೆಟ್ಟಿರುವ ಖಾದ್ರಿ ತನಗೇ ಟಿಕೆಟ್‌ ಎಂಬಂತೆ ಓಡಾಡುತ್ತಿದ್ದಾರೆ. 

ವಿಮಾನ ನಿಲ್ದಾಣಕ್ಕೆ ಬಿಎಸ್‌ವೈ ಹೆಸರು, ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಿಎಂ ಬೊಮ್ಮಾಯಿ

ಮುಸ್ಲಿಂ ಪ್ರಾಬಲ್ಯ ಇರುವುದರಿಂದ ಖಾದ್ರಿ ಬಿಟ್ಟು ಚುನಾವಣೆ ಎದುರಿಸುವ ಪರಿಸ್ಥಿತಿ ಕಾಂಗ್ರೆಸ್ಸಿಗಿಲ್ಲ. ಆದರೆ, ಸತತ ನಾಲ್ಕು ಬಾರಿ ಸೋತವರಿಗೆ ಟಿಕೆಟ್‌ ನೀಡಲು ಪಕ್ಷದಲ್ಲೇ ವಿರೋಧವಿದೆ. ಖಾದ್ರಿಗೆ ಕೈ ಟಿಕೆಟ್‌ ತಪ್ಪಿದರೆ ಮುಸ್ಲಿಂ ಮತಗಳು ಕಾಂಗ್ರೆಸ್‌ ಕೈತಪ್ಪುವ ಆತಂಕವಿದೆ. ಕೈ ಟಿಕೆಟ್‌ ಸಿಗದಿದ್ದರೆ ಜೆಡಿಎಸ್‌ ಅಥವಾ ಪಕ್ಷೇತರರಾಗಿ ಸ್ಪರ್ಧಿಸುವ ಇರಾದೆಯೂ ಅವರಿಗಿದ್ದು, ಇದು ಕಾಂಗ್ರೆಸ್ಸಿಗೇ ಹೊಡೆತ. ಕಾಂಗ್ರೆಸ್‌ನ ಒಳಜಗಳ ಬೊಮ್ಮಾಯಿಗೆ ವರವಾಗಿ ಪರಿಣಮಿಸಿದೆ. ಸೋಮಣ್ಣ ಬೇವಿನಮರದ, ಶಶಿಧರ ಎಲಿಗಾರ, ಷಣ್ಮುಖ ಶಿವಳ್ಳಿ ಕೈ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ. ಜತೆಗೆ, ಸಂಜೀವಕುಮಾರ ನೀರಲಗಿ, ಯಾಸಿರಖಾನ್‌ ಪಠಾಣ, ರಾಜೇಶ್ವರಿ ಪಾಟೀಲ, ಶಾಕೀರ ಸನದಿ, ನೂರಮ್ಮದ್‌ ಮಳಗಿ, ಎಫ್‌.ಜಿ. ಪಾಟೀಲ, ಎಸ್‌.ವಿ. ಪಾಟೀಲ ‘ಕೈ’ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.

click me!