ಮಳೆ ಕೊರತೆ: ಕುಡಿಯುವ ಉದ್ದೇಶಕ್ಕೆ ಮಾತ್ರ ನೀರು ಬಳಸುವಂತೆ ಅಧಿಕಾರಿಗಳಿಗೆ ಸೂಚನೆ - ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ

By Kannadaprabha News  |  First Published Jul 8, 2023, 5:09 AM IST

ಮುಂಗಾರು ಮಳೆಯ ವಿಫಲತೆಯಿಂದಾಗಿ ಆಲಮಟ್ಟಿ, ಮಲಪ್ರಭಾ, ಹಿಪ್ಪರಗಿ ಮತ್ತು ಹಿಡಕಲ್‌ ಜಲಾಶಯಗಳಲ್ಲಿ ನೀರಿನ ಮಟ್ಟತೀವ್ರವಾಗಿ ಕಡಿಮೆಯಾಗಿರುವುದರಿಂದ ಜಲಾಶಯಗಳಲ್ಲಿ ಸಂಗ್ರಹಿತ ನೀರನ್ನು ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು ಎಂದು ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಬೆಳಗಾವಿ (ಜು.8) ಮುಂಗಾರು ಮಳೆಯ ವಿಫಲತೆಯಿಂದಾಗಿ ಆಲಮಟ್ಟಿ, ಮಲಪ್ರಭಾ, ಹಿಪ್ಪರಗಿ ಮತ್ತು ಹಿಡಕಲ್‌ ಜಲಾಶಯಗಳಲ್ಲಿ ನೀರಿನ ಮಟ್ಟತೀವ್ರವಾಗಿ ಕಡಿಮೆಯಾಗಿರುವುದರಿಂದ ಜಲಾಶಯಗಳಲ್ಲಿ ಸಂಗ್ರಹಿತ ನೀರನ್ನು ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು ಎಂದು ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಗುರುವಾರ ನಡೆದ ಆಲಮಟ್ಟಿಜಲಾಶಯ, ಮಲಪ್ರಭಾ ಯೋಜನೆ, ಘಟಪ್ರಭಾ ಯೋಜನೆ ಮತ್ತು ಹಿಪ್ಪರಗಿ ಯೋಜನೆ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಬೆಳಗಾವಿ ಜಿಲ್ಲೆಯ ಹಿರಣ್ಯಕೇಶಿ ನದಿಗೆ ಅಲ್ಪ ಪ್ರಮಾಣದ ನೀರಿನ ಒಳ ಹರಿವು ಪ್ರಾರಂಭವಾಗಿದ್ದು, ಜು.7 ರಂದು ಘಟಪ್ರಭಾ ನದಿಯ ಧೂಪದಾಳ ವೇರ್ಯ ನೀರಿನ ಮಟ್ಟ2008.5 ಅಡಿ ತಲುಪುವ ಸಾಧ್ಯತೆ ಇರುತ್ತದೆ. ಆದರೆ, ಘಟಪ್ರಭಾ ನದಿಯ ಕೆಳಗಡೆ ಇರುವ 14 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪೈಕಿ ಈಗಾಗಲೇ ಬೆಳಗಾವಿ ಜಿಲ್ಲೆಯ ಹುಲಕುಂದ, ಬಾಗಲಕೋಟೆ ಜಿಲ್ಲೆಯ ಸೈದಾಪೂರ, ಅರಕೆರೆ, ಚಿಂಚಲಕಟ್ಟಿಅನವಾಲ ಮತ್ತು ಕಟಗೇರಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಸ್ಥಗಿತಗೊಂಡಿರುತ್ತವೆ.

Latest Videos

undefined

 

ಧಾರವಾಡ: ಕಾಡಂಚಿನ ಹೊಲಗಳಿಗೆ ವನ್ಯಜೀವಿಗಳ ದಾಂಗುಡಿ; ರೈತರು ಕಂಗಾಲು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅವಲಂಬಿತ ಗ್ರಾಮಗಳಿಗೆ ಕುಡಿಯುವ ನೀರಿನ ಅಭಾವ ತಪ್ಪಿಸಲು ಹಿರಣ್ಯಕೇಶಿ ನದಿಯಿಂದ ಘಟಪ್ರಭಾ ನದಿಗೆ ಬರುವ ನೀರಿನ ಒಳ ಹರಿವಿನಿಂದ ಧೂಪದಾಳ ವೇರ್ಯ ನೀರಿನ ಮಟ್ಟ2008.5 ಅಡಿ ತಲುಪಿದ ನಂತರ ಹೆಚ್ಚುವರಿಯಾದ ನೀರನ್ನು ಘಟಪ್ರಭಾ ನದಿಗೆ ಹರಿಬಿಡುವಂತೆ ಸಂಬಂಧಪಟ್ಟಅಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತ ಪಾಟೀಲ ಸೂಚಿಸಿದರು.

ನೀರಾವರಿ ಉದ್ದೇಶಕ್ಕಾಗಿ ನೀರಾವರಿ ಸಲಹಾ ಸಮಿತಿಯಿಂದ ಅಥವಾ ಸರ್ಕಾರದಿಂದ ಅನುಮತಿ ಪಡೆದು ಕ್ರಮಕೈಗೊಳ್ಳಬಹುದು ಎಂದು ಪಾಟೀಲ ನಿರ್ದೇಶನ ನೀಡಿದರು.

ಬೆಳಗಾವಿ ವಿಭಾಗದ ಮಳೆಯ ಪ್ರಮಾಣ

ಬೆಳಗಾವಿ: ವಾಡಿಕೆ (ಮಿ.ಮೀ) 175: ವಾಸ್ತವಿಕ (ಮಿ.ಮೀ) 71 ಮಿ.ಮೀ. ಹಾಗೂ ಕೊರತೆ (ಶೇಕಡಾ)-60 ರಷ್ಟಿರುತ್ತದೆ. ಬಾಗಲಕೋಟೆ: ವಾಡಿಕೆ (ಮಿ.ಮೀ) 94: ವಾಸ್ತವಿಕ (ಮಿ.ಮೀ) 31 ಮಿ.ಮೀ. ಹಾಗೂ ಕೊರತೆ (ಶೇಕಡಾ) -67 ರಷ್ಟಿರುತ್ತದೆ.

ವಿಜಯಪುರ: ವಾಡಿಕೆ (ಮಿ.ಮೀ) 98: ವಾಸ್ತವಿಕ (ಮಿ.ಮೀ) 47 ಮಿ.ಮೀ. ಹಾಗೂ ಕೊರತೆ (ಶೇಕಡಾ) -52 ರಷ್ಟಿರುತ್ತದೆ. ಗದಗ: ವಾಡಿಕೆ (ಮಿ.ಮೀ) 95: ವಾಸ್ತವಿಕ (ಮಿ.ಮೀ) 65 ಮಿ.ಮೀ. ಹಾಗೂ ಕೊರತೆ (ಶೇಕಡಾ) -32 ರಷ್ಟಿರುತ್ತದೆ. ಹಾವೇರಿ: ವಾಡಿಕೆ (ಮಿ.ಮೀ) 146: ವಾಸ್ತವಿಕ (ಮಿ.ಮೀ) 75 ಮಿ.ಮೀ. ಹಾಗೂ ಕೊರತೆ (ಶೇಕಡಾ) -49 ರಷ್ಟಿರುತ್ತದೆ. ಧಾರವಾಡ: ವಾಡಿಕೆ (ಮಿ.ಮೀ) 147: ವಾಸ್ತವಿಕ (ಮಿ.ಮೀ) 71 ಮಿ.ಮೀ. ಹಾಗೂ ಕೊರತೆ (ಶೇಕಡಾ) -51 ರಷ್ಟಿರುತ್ತದೆ. ಉತ್ತರ ಕನ್ನಡ: ವಾಡಿಕೆ (ಮಿ.ಮೀ) 859: ವಾಸ್ತವಿಕ (ಮಿ.ಮೀ) 506 ಮಿ.ಮೀ. ಹಾಗೂ ಕೊರತೆ (ಶೇಕಡಾ) -41 ರಷ್ಟಿರುತ್ತದೆ.

ಬೆಳಗಾವಿ ವಿಭಾಗದ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹಾಗೂ ಜಲಾಶಯಗಳಲ್ಲಿ ಇರುವ ನೀರಿನ ಸಂಗ್ರಹ ಕುರಿತು ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

 

ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿ : ಕುರುಬೂರು ಶಾಂತಕುಮಾರ್‌

ಸಭೆಯಲ್ಲಿ ಆಲಮಟ್ಟಿಜಲಾಶಯ, ಮಲಪ್ರಬಾ ಯೋಜನೆ, ಘಟಪ್ರಬಾ ಯೋಜನೆ ಹಾಗೂ ಹಿಪ್ಪರಗಿ ಯೋಜನೆಯ ಸಮಿತಿ ಸದಸ್ಯ ಕಾರ್ಯದರ್ಶಿ ಸಂಬಂಧಿಸಿದ ಸೂಪರಿಂಟೆಂಡಿಂಗ್‌ ಎಂಜಿಯರ್‌, ಸಣ್ಣ ನೀರಾವರಿ ಇಲಾಖೆ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧೀಕ್ಷಕ ಅಭಿಯಂತರರು ಮತ್ತು ಇತರೆ ಅಧಿಕಾರಿಗಳು ಹಾಜರಿದ್ದರು.
 

click me!