ಕರ್ನಾಟಕ ಮಳೆ ಅಬ್ಬರ: ಶಾಲಾ, ಕಾಲೇಜುಗಳಿಗೆ 2 ದಿನ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ

Published : Aug 17, 2025, 07:55 PM IST
School Holidays

ಸಾರಾಂಶ

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳಲ್ಲಿ ಆ.18 ಮತ್ತು ಆ.10 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ರಜೆ ಘೋಷಣೆಯಾಗಿದೆ. ಶೃಂಗೇರಿ ಜಲಾವೃತಗೊಂಡಿದೆ. 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.

ಬೆಂಗಳೂರು/ಉತ್ತರ ಕನ್ನಡ (ಆ.17) ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ನೀಡಿದ 'ರೆಡ್ ಅಲರ್ಟ್' ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳಿಗೆ ಆ.18 ಮತ್ತು ಆ.19ರಂದು ಎರಡು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದೇಶದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆ ಸೇರಿ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಝೆ ಘೋಷಣೆ ಮಾಡಲಾಗಿತ್ತು. ಇದೀಗ ಮತ್ತೊಂದು ಕರಾವಳಿ ಜಿಲ್ಲೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಮುನ್ನೆಚ್ಚರಿಕೆಯ ಕಾರಣದಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, ಜೊಯಿಡಾ ಮತ್ತು ದಾಂಡೇಲಿ ಸೇರೊ 10 ತಾಲೂಕುಗಳಲ್ಲಿ ರಜೆ ಅನ್ವಯವಾಗಲಿದೆ. ಈ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆ.18ರಿಂದ ಆಗಸ್ಟ್ 19ರವರೆಗೆ (2 ದಿನಗಳು) ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ರಜೆ:

ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕು ಹಾಗೂ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಲ್ಲಿ ರಜೆ ಘೋಷಿಸಲಾಗಿದೆ.

ಶೃಂಗೇರಿ ಜಲಾವೃತ:

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣ ಮಹಾಮಳೆಗೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ತುಂಗಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪಟ್ಟಣದ ಗಾಂಧಿ ಮೈದಾನ, ಪಾರ್ಕಿಂಗ್ ಲಾಟ್‌ಗಳು ಮತ್ತು ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ದೇವಸ್ಥಾನದ ಪಾರ್ಕಿಂಗ್ ಪ್ರದೇಶದಲ್ಲಿದ್ದ 20ಕ್ಕೂ ಹೆಚ್ಚು ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಮಳೆಯ ಪ್ರಮಾಣವನ್ನು ಡ್ರೋನ್ ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದ್ದು, ಶೃಂಗೇರಿಯ ದೃಶ್ಯಗಳು ಆತಂಕಕಾರಿಯಾಗಿವೆ.

5 ಜಿಲ್ಲೆಗಳಿಗೆ ರೆಡ್ ಅಲರ್ಟ್:

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಮೀನು ಹಿಡಿಯಲು ತೆರಳದಂತೆ ಹಾಗೂ ಬೋಟ್‌ಗಳು ಸಮುದ್ರದೊಳಗೆ ಹೋಗದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಮುಂದಿನ 3 ಗಂಟೆಗಳು'ಯೆಲ್ಲೋ ಅಲರ್ಟ್':

ರಾಜ್ಯದ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ