ಶಿರಸಿಯಲ್ಲಿ ಏರ್‌ಗನ್ ದುರಂತ: ತಮ್ಮನ ಕೈಯಿಂದಲೇ ಅಣ್ಣನ ಸಾವು!

Published : Sep 05, 2025, 03:03 PM IST
Uttara kannada

ಸಾರಾಂಶ

ಶಿರಸಿಯಲ್ಲಿ ಆಟದ ವೇಳೆ ಏರ್‌ಗನ್‌ನಿಂದ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ಬಾಲಕ ಮೃತಪಟ್ಟಿದ್ದಾನೆ. ತಂದೆಯ ಏರ್‌ಗನ್‌ನಿಂದ ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ದಾಖಲಾಗಿವೆ.

ಉತ್ತರ ಕನ್ನಡ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕ ಕೈಯ್ಯಿಂದ ಏರ್ ಗನ್ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.‌ ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬಾತ ಇಬ್ಬರು ಮಕ್ಕಳು ( ಅಣ್ಣ ತಮ್ಮ ) ಆಟವಾಡುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ನಡೆದಿದ್ದು, ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಸಪ್ಪ ರಾಘವೇಂದ್ರ ಕೇಶವ ಹೆಗಡೆಯವರ ತೋಟದಲ್ಲಿ ಆಳಾಗಿ ಕೆಲಸ ಮಾಡುತ್ತಿದ್ದು, ಮಂಗಗಳನ್ನು ಓಡಿಸಲು ರಾಘವೇಂದ್ರ ಅವರ ಏರ್‌ಗನ್ ಬಳಸುತ್ತಿದ್ದ.

ಆದರೆ, ಮನೆಗೆ ಹಿಂತಿರುಗಿದ ವೇಳೆ ಬಸಪ್ಪನ ಮಕ್ಕಳು ಅಣ್ಣ-ತಮ್ಮ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ 7 ವರ್ಷದ ಮಗನಿಂದ ಆಕಸ್ಮಿಕವಾಗಿ ಹಾರಿದ್ದು, ಇದರಿಂದ ಅಣ್ಣ ಕರಿಯಪ್ಪ ( 9 ) ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ಸಿಸಿಟಿವಿಯಲ್ಲಿ ವಿಡಿಯೋ ದಾಖಲಾಗಿದೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಪಿಐ ಶಶಿಕಾಂತ ವರ್ಮಾ, ಪಿಎಸ್ಐ ಸಂತೋಷ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

PREV
Read more Articles on
click me!

Recommended Stories

ದಾವಣಗೆರೆ ರಾಟ್‌ವೀಲರ್ ನಾಯಿಗಳ ಡೆಡ್ಲಿ ಅಟ್ಯಾಕ್; 50ಕ್ಕೂ ಹೆಚ್ಚು ಕಡೆ ಕಚ್ಚಿಸಿಕೊಂಡ ಮಹಿಳೆ ದುರ್ಮರಣ
ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ