ಚಾಮುಂಡಿಬೆಟ್ಟಕ್ಕೆ ಚಿನ್ನದ ರಥ ನಿರ್ಮಾಣ, ಬಜೆಟ್‌ನಲ್ಲಿ ಅನುದಾನ..?

By Suvarna NewsFirst Published Feb 28, 2020, 1:10 PM IST
Highlights

ಮೈಸೂರು ಚಾಮುಂಡಿ ಬೆಟ್ಟಕ್ಕೆ ಚಿನ್ನದ ರಥ ನಿರ್ಮಾಣಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಈ ಬಗ್ಗೆ ನಿರ್ಧಾರವಾಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಮೈಸೂರು(ಫೆ.28): ಮೈಸೂರು ಚಾಮುಂಡಿ ಬೆಟ್ಟಕ್ಕೆ ಚಿನ್ನದ ರಥ ನಿರ್ಮಾಣಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಈ ಬಗ್ಗೆ ನಿರ್ಧಾರವಾಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಮೈಸೂರು ಚಾಮುಂಡಿಬೆಟ್ಟಕ್ಕೆ ಚಿನ್ನದ ರಥ ನಿರ್ಮಾಣ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ಈ ಬಗ್ಗೆ ನಿರ್ಧಾರವಾಗುವ ವಿಶ್ವಾಸ ಇದೆ. ನಾನು ಮುಜರಾಯಿ ಇಲಾಖೆ ಸಚಿವರ ಜೊತೆ ಮಾತನಾಡಿದ್ದೇನೆ‌. ಚಿನ್ನದ ರಥ ನಿರ್ಮಾಣ ಮಾಡುವ ಬಜೆಟ್ ಅನುದಾನ ಕೊಡಿಸುವ ಭರವಸೆ ನೀಡಿದ್ದಾರೆ ಎಂದಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಸಚಿವ, ಸಂಸದರು..! ಇಲ್ಲಿವೆ ಫೋಟೋಸ್

ಸಪ್ತಪದಿ ಯೋಜನೆ ಅನುಷ್ಠಾನಕ್ಕು ನಮ್ಮ ಸರ್ಕಾರ ಸಿದ್ದವಾಗಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯೋಜನೆ ಅನುಷ್ಠಾನಕ್ಕೆ ಜಿಲ್ಲಾಡಳಿತ ಕ್ರಮವಹಿಸಲಿದೆ. ಮೈಸೂರಿನ ನಂಜನಗೂಡಿನಲ್ಲಿ ನೆರೆ ಸಂತ್ರಸ್ತರಿಗೆ ಅನ್ಯಾಯ ವಿಚಾರವಾಗಿ ಮೈಸೂರು ಉಸ್ತುವಾರಿ ಸಚಿವರಿಂದ ಸಮಸ್ಯೆ ಬಗೆಹರಿಸೋ ಭರವಸೆ ಸಿಕ್ಕಿದೆ. ಆ ಫಲಾನುಭವಿಯ ಮಾಹಿತಿ ತರಿಸಿಕೊಳ್ಳುತ್ತೇನೆ. ಮನೆ ಬಿದ್ದುಹೋಗಿದ್ದರೆ ಅದಕ್ಕೆ ಸೂಕ್ತ ಪರಿಹಾರ ಕೊಡುತ್ತೇವೆ. ಜಿಲ್ಲಾಧಿಕಾರಿಗಳಿಂದ ಈ ಬಗ್ಗೆ ವರದಿ ತರಿಸಿಕೊಂಡು ಆ ಕುಟುಂಬಕ್ಕೆ ಸಹಾಯ ಮಾಡ್ತಿನಿ ಎಂದಿದ್ದಾರೆ.

ಅಡುಗೆ ಜಗಳ: 14 ವರ್ಷ ಜೊತೆಗಿದ್ದ ಪತ್ನಿಗೆ ಬೆಂಕಿ ಹಚ್ಚಿದ ಗಂಡ

ನಿನ್ನೆ ಯಡಿಯೂರಪ್ಪ ಹುಟ್ಟುಹಬ್ಬಕ್ಕೆ ಸಿದ್ದರಾಮಯ್ಯ ಬಂದಿದ್ದರು. ಇದು ಕರ್ನಾಟಕದ ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಎಲ್ಲರು ಒಟ್ಟಾಗಿ ಸಿಎಂಗೆ ಶುಭ ಕೋರಿದ್ದಾರೆ. ಹಾಗೇಯೆ ಆಡಳಿತ ಪಕ್ಷ , ವಿರೋಧ ಪಕ್ಷ ಒಟ್ಟಾಗಿ ರಾಜ್ಯದ ಅಭಿವೃದ್ಧಿ ಮಾಡ್ತಿವಿ. ಎಲ್ಲರು ಪಕ್ಷಭೇದ ಮರೆತು ಸಿಎಂಗೆ ಶುಭಕೋರಿದ್ದು ಸಂತೋಷವಾಯಿತು ಎಂದಿದ್ದಾರೆ.

click me!